Home namma chikmagalur chikamagalur ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ
chikamagalurHomeLatest Newsnamma chikmagalur

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

Share
Share

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.

ಚಿಕ್ಕಮಗಳೂರಿನಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆ ಕುರಿತಾಗಿ ಹರಿದಾಡುತ್ತಿರುವ ಗೊಂದಲಗಳಿಗೆ ಸ್ಪಷ್ಟನೆ ನೀಡಿದರು.
ಬದಲಿಗೆ, ಯೋಜನೆಯ ಸೌಲಭ್ಯ ನಿಜವಾದ ಅರ್ಹ ಫಲಾನುಭವಿಗಳಿಗೆ ಮಾತ್ರ ತಲುಪುವಂತೆ ಮಾಡುವ ಉದ್ದೇಶದಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಮನೆಮನೆಗೆ ಅರ್ಜಿ ನಮೂನೆಗಳನ್ನು ವಿತರಿಸಲಾಗುವುದು. ಅರ್ಜಿ ವಿತರಣೆಯ ವೇಳೆ ಯೋಜನೆಯ ಮಾನದಂಡಗಳು ಹಾಗೂ ಅರ್ಹತೆ ಕುರಿತು ಸಾರ್ವಜನಿಕರಿಗೆ ಸಂಪೂರ್ಣ ಮಾಹಿತಿ ನೀಡಲಾಗುವುದು ಎಂದು ಸಚಿವರು ತಿಳಿಸಿದರು.

ಯೋಜನೆಯಡಿ ಪ್ರಸ್ತುತ ರಾಜ್ಯದಲ್ಲಿ ಸುಮಾರು 1 ಕೋಟಿ 64 ಲಕ್ಷ ಫಲಾನುಭವಿಗಳು ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿದ್ದಾರೆ. ಅರ್ಹರಲ್ಲದವರು ಸೌಲಭ್ಯ ಪಡೆಯುವುದನ್ನು ತಡೆಯುವುದು ಹಾಗೂ ನಿಜವಾದ ಅರ್ಹರನ್ನು ಗುರುತಿಸುವ ಉದ್ದೇಶದಿಂದ ಮಾತ್ರವೇ ಮಾಹಿತಿ ಸಂಗ್ರಹ ನಡೆಯುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು.

ಇದೇ ವೇಳೆ, ಅರ್ಜಿ ನಮೂನೆಯಲ್ಲಿ ಜಾತಿ ವಿವರಗಳನ್ನು ಕೇಳುತ್ತಿರುವ ಕುರಿತು ವ್ಯಕ್ತವಾಗಿರುವ ಆಕ್ಷೇಪಗಳಿಗೆ ಪ್ರತಿಕ್ರಿಯಿಸಿದ ಸಚಿವ ಕೆ.ಜೆ. ಜಾರ್ಜ್, ಜಾತಿ ಮಾಹಿತಿ ಪಡೆಯುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಹೇಳಿದರು.

ಇದು ಕೇವಲ ಮಾಹಿತಿ ಸಂಗ್ರಹದ ಉದ್ದೇಶಕ್ಕಷ್ಟೇ ಸೀಮಿತವಾಗಿದ್ದು, ಯಾವುದೇ ರೀತಿಯ ತಾರತಮ್ಯಕ್ಕೆ ಅವಕಾಶವಿಲ್ಲ. ಅರ್ಹತೆ ಹೊಂದಿರುವ ಪ್ರತಿಯೊಬ್ಬ ಫಲಾನುಭವಿಗೂ ಯಾವುದೇ ಭೇದಭಾವವಿಲ್ಲದೆ ಗೃಹಜ್ಯೋತಿ ಯೋಜನೆಯ ಸೌಲಭ್ಯ ದೊರೆಯಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

Revision for the purpose of identifying eligible persons for the Grihajyothi scheme

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...