Home Crime News ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿಯಲ್ಲಿ ಸವಾರ ಸ್ಥಳದಲ್ಲೇ ಸಾವು
Crime NewsHomeLatest Newsnamma chikmagalurTarikere

ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿಯಲ್ಲಿ ಸವಾರ ಸ್ಥಳದಲ್ಲೇ ಸಾವು

Share
Share

ಚಿಕ್ಕಮಗಳೂರು: ಅಪರಿಚಿತ ವಾಹನ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತರನ್ನು ಮಲ್ಲೇನಹಳ್ಳಿ ಹಾಳೂರು ಗ್ರಾಮದ ಲೋಕೇಶ್ ಬಿ.ಎಲ್. (ವಯಸ್ಸು ತಿಳಿದುಬಂದಿಲ್ಲ) ಎಂದು ಗುರುತಿಸಲಾಗಿದೆ.

ಅಕ್ಟೋಬರ್ 28ರಂದು ಸಂಜೆ ಸುಮಾರು 6.30ರ ವೇಳೆಯಲ್ಲಿ ಲೋಕೇಶ್ ಅವರು ಮಲ್ಲೇನಹಳ್ಳಿ ಹಾಳೂರು ಗ್ರಾಮದಿಂದ ಗುಳ್ಳದಮನೆಯಲ್ಲಿರುವ ತಮ್ಮ ಅಕ್ಕ ಕೆಂಪಮ್ಮ ಅವರ ಮನೆಗೆ ಕೆಎ-04 ಎಚ್‌ವೈ-9270 ನೋಂದಣಿ ಸಂಖ್ಯೆಯ ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ ಬೈಕ್‌ನಲ್ಲಿ ತೆರಳುತ್ತಿದ್ದರು.

ಈ ವೇಳೆ ದೊಡ್ಡನಿಂಗೇನಹಳ್ಳಿ ಮತ್ತು ಕೆಂಚಾಪುರ ಗ್ರಾಮಗಳ ನಡುವಿನ ಮನು ಎಂಬುವವರ ತೋಟದ ಸಮೀಪ ಅವರು ಬೈಕ್‌ನಲ್ಲಿ ಸಂಚರಿಸುತ್ತಿದ್ದಾಗ ಹಿಂದಿನಿಂದ ಬಂದ ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದೆ ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದ ಲೋಕೇಶ್ ಅವರ ತಲೆಗೆ ಗಂಭೀರ ಗಾಯಗಳಾಗಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ತಿಳಿದ ಮೃತರ ಪುತ್ರ ಯೋಗೀಶ್ ಅವರು ಬೆಂಗಳೂರಿನಿಂದ ಆಗಮಿಸಿ, ಲಿಂಗದಹಳ್ಳಿ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ತಂದೆಯ ಮೃತದೇಹವನ್ನು ಗುರುತಿಸಿದ್ದಾರೆ.

ಈ ಸಂಬಂಧ ಅಕ್ಟೋಬರ್ 29ರಂದು ಯೋಗೀಶ್ ಅವರು ಲಿಂಗದಹಳ್ಳಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ಅಪಘಾತಕ್ಕೆ ಕಾರಣವಾದ ವಾಹನ ಹಾಗೂ ಅದರ ಚಾಲಕನನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Rider dies on the spot after an unidentified vehicle hits his bike

Share

Leave a comment

Leave a Reply

Your email address will not be published. Required fields are marked *

Don't Miss

ಪ್ಲಾಂಟೇಷನ್ ಕಾರ್ಮಿಕರಿಗೆ ಶೇ.17ರಷ್ಟು ವೇತನ ಹೆಚ್ಚಳ

ಚಿಕ್ಕಮಗಳೂರು: ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಕಾಫಿ ಮತ್ತು ಟೀ ಪ್ಲಾಂಟೇಷನ್‌ಗಳಲ್ಲಿ ದುಡಿಯುವ ಕಾರ್ಮಿಕರ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್‌ ಹಾಗೂ ಕಾರ್ಮಿಕ ಸಂಘಟನೆಗಳ ನಡುವೆ ಒಪ್ಪಂದಕ್ಕೆ...

ಅ.26ರಂದು ಚಿಕ್ಕಮಗಳೂರಿನಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಚಿಕ್ಕಮಗಳೂರು: ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅ.26ರಂದು ಚಿಕ್ಕಮಗಳೂರಿನಲ್ಲಿ ಶ್ರದ್ಧಾಭಕ್ತಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಶ್ರೀ ವಾಲ್ಮೀಕಿ ನಾಯಕ ಯುವಕರ ಸಂಘದ ಜಿಲ್ಲಾಧ್ಯಕ್ಷ ಜಗದೀಶ್ ಕೋಟೆ ತಿಳಿಸಿದರು. ನಗರದ...

Related Articles

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ

ಚಿಕ್ಕಮಗಳೂರು: ಪ್ರೀತಿಸುವುದಾಗಿ ನಂಬಿಸಿ ಮದುವೆಯಾಗುವುದಾಗಿ ಭರವಸೆ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ...

ದಲಿತರಿಗೆ ಮೀಸಲಿಟ್ಟ ಭೂಮಿ ಮಂಜೂರಾತಿಗೆ ಆಗ್ರಹ

ಚಿಕ್ಕಮಗಳೂರು: ದಲಿತರಿಗೆ ಮೀಸಲಿಟ್ಟಿರುವ ಸರ್ಕಾರಿ ಭೂಮಿಯನ್ನು ಭೂಹೀನ ದಲಿತರಿಗೆ ಮಂಜೂರು ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ...

ಕ್ರೀಡಾ ಸಾಧಕರಿಗೆ ಕಾಫಿನಾಡಿನಲ್ಲಿ ಇಂದು ಅದ್ಧೂರಿ ಗೌರವ

ಚಿಕ್ಕಮಗಳೂರು: ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಕ್ರೀಡಾ ಕೀರ್ತಿಯನ್ನು ವಿಶ್ವದಾದ್ಯಂತ ಪಸರಿಸಿರುವ ಪ್ಯಾರಾ ಕ್ರೀಡಾಪಟುಗಳನ್ನು ಗೌರವಿಸುವ ಉದ್ದೇಶದಿಂದ...

ರಾಜ್ಯೋತ್ಸವ ಪ್ರಶಸ್ತಿಗೆ ಚಿಕ್ಕಮಗಳೂರಿನ ಇಬ್ಬರು ಸಾಧಕರು ಭಾಜನ

ಉದ್ಯಮ ಕ್ಷೇತ್ರದಲ್ಲಿ ಎಂ.ಬಿ. ಜಯಶಂಕರ್, ವಚನ ಹಾಗೂ ಜಾನಪದ ಸಾಹಿತ್ಯ ಕ್ಷೇತ್ರದಲ್ಲಿ ಚಟ್ನಳ್ಳಿ ಮಹೇಶ್‌ಗೆ ಗೌರವ...