Home namma chikmagalur chikamagalur ರಾಜಕೀಯ ಸಮರವಾಗಿ ಮಾರ್ಪಟ್ಟ ರಸ್ತೆ ಕಾಮಗಾರಿ ವೀಕ್ಷಣೆ ಪ್ರಕರಣ
chikamagalurHomeLatest Newsnamma chikmagalur

ರಾಜಕೀಯ ಸಮರವಾಗಿ ಮಾರ್ಪಟ್ಟ ರಸ್ತೆ ಕಾಮಗಾರಿ ವೀಕ್ಷಣೆ ಪ್ರಕರಣ

Share
Share

ಚಿಕ್ಕಮಗಳೂರು: ರಸ್ತೆ ಕಾಮಗಾರಿ ವಿಚಾರವಾಗಿ ಆರಂಭವಾದ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವಿನ ಬೀದಿ ಕಾಳಗವು ಇದೀಗ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ರಾಜಕೀಯ ಸಮರವಾಗಿ ಮಾರ್ಪಟ್ಟಿದೆ.

ನಗರ ಠಾಣೆಯಲ್ಲಿ ದೂರು-ಪ್ರತಿದೂರುಗಳ ಸ್ಪರ್ಧೆಯೇ ಏರ್ಪಟ್ಟಿದ್ದು, ಇದುವರೆಗೆ ಒಟ್ಟು 6 ಪ್ರಕರಣಗಳು ದಾಖಲಾಗಿವೆ. ಈ ಘಟನೆಯು ನಗರ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಉಭಯ ಪಕ್ಷಗಳ ನಡುವಿನ ಆರೋಪ-ಪ್ರತ್ಯಾರೋಪಗಳು ಮತ್ತಷ್ಟು ಉಗ್ರರೂಪ ಪಡೆದುಕೊಂಡಿವೆ.

ದಾಖಲಾಗಿರುವ ಪ್ರಕರಣಗಳ ಪೈಕಿ ಕಾಂಗ್ರೆಸ್, ಎಸ್‌ಡಿಪಿಐ ಹಾಗೂ ಮುಸ್ಲಿಂ ಸಂಘಟನೆಗಳಿಂದ 4 ದೂರುಗಳು ಸಲ್ಲಿಕೆಯಾಗಿದ್ದರೆ, ಬಿಜೆಪಿಯಿಂದ ಒಂದು ದೂರು ದಾಖಲಾಗಿದೆ. ಇದರೊಂದಿಗೆ ಪೊಲೀಸರು ಕೂಡ ಒಂದು ಸುಮೋಟೊ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಸದ್ಯಕ್ಕೆ ಪೊಲೀಸರ ಸುಮೋಟೊ ಪ್ರಕರಣ ಹಾಗೂ ಮುದಾಸಿರ್ ಪಾಷ ನೀಡಿದ ದೂರಿನ ಮೇರೆಗೆ ಮಾತ್ರ ಎಫ್‌ಐಆರ್ ದಾಖಲಿಸಲಾಗಿದೆ. ಧರ್ಮ ನಿಂದನೆ ಆರೋಪದ ಅಡಿಯಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್ ವಿರುದ್ಧ ಮುಸ್ಲಿಂ ಮುಖಂಡರು ನೀಡಿದ ದೂರಿನನ್ವಯ ಎಫ್‌ಐಆ‌ರ್ ದಾಖಲಿಸಲಾಗಿದೆ.

ಮತ್ತೊಂದೆಡೆ, ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಕೆ.ಪಿ. ವೆಂಕಟೇಶ್ ಅವರು ಕಾಂಗ್ರೆಸ್ ನಗರಸಭೆಯ ಸದಸ್ಯರಾದ ಪರಮೇಶ್ ರಾಜ್ ಅರಸ್, ಮುನೀರ್ ಹಾಗೂ ಮುಖಂಡರಾದ ಕಲಂದರ್ ಮತ್ತು ಜಾವಿದ್ ವಿರುದ್ಧ ಜಾತಿ ನಿಂದನೆ ದೂರು ನೀಡಿದ್ದಾರೆ.

ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್‌ನಿಂದಲೂ ಪ್ರತಿದೂರು ಸಲ್ಲಿಕೆಯಾಗಿದ್ದು, ಕುರವಂಗಿ ರಾಜೇಶ್ ಎಂಬುವವರು ಬಿಜೆಪಿ ಕಾರ್ಯಕರ್ತರ ವಿರುದ್ಧ ಜಾತಿ ನಿಂದನೆ ಆರೋಪ ಮಾಡಿದ್ದಾರೆ. ಇತ್ತೀಚೆಗೆ ನಗರದ ರಾಂಪುರ ರಸ್ತೆಯಲ್ಲಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಕಾಮಗಾರಿ ವೀಕ್ಷಣೆಗೆ ತೆರಳಿದ್ದ ಸಂದರ್ಭದಲ್ಲಿ ಉಂಟಾದ ಗಲಾಟೆಯು, ಸದ್ಯ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಕಾನೂನು ಮತ್ತು ರಾಜಕೀಯ ಸಮರಕ್ಕೆ ನಾಂದಿ ಹಾಡಿದೆ.

Road construction observation case turns into political battle

Share

Leave a comment

Leave a Reply

Your email address will not be published. Required fields are marked *

Don't Miss

ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿದ ರೈತರ ಸ್ಥಿತಿ ಅವಲೋಕಿಸಿದ ಸಚಿವ ಜಾರ್ಜ್

ಚಿಕ್ಕಮಗಳೂರು: ಸಕಾಲದಲ್ಲಿ ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿರುವ ರೈತರು, ಒಣಗಿ ನಿಂತಿರುವ ಭೂಮಿ, ಮಳೆಯ ನಿರೀಕ್ಷೆಯಲ್ಲಿ ಬಿತ್ತನೆ ಮಾಡಿದ್ದ ಬೀಜಗಳು ಮೊಳಕೆ ಒಡೆಯದೆ ಬಿಸಿಲಿನ ಝಳಕ್ಕೆ ಸಿಲುಕಿ ಸುಟ್ಟುಹೋಗಿರುವುದನ್ನು ಜಿಲ್ಲಾ ಉಸ್ತುವಾರಿ ಸಚಿವ...

ಸಚಿವ ಕೆ.ಜೆ. ಜಾರ್ಜ್ ಬೆಂಗಾವಲು ವಾಹನ ಅಪಘಾತ

ಚಿಕ್ಕಮಗಳೂರು : ಅಜ್ಜಂಪುರ ಜಿಲ್ಲೆಯ ಬಯಲುಸೀಮೆ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ವೀಕ್ಷಣೆಗಾಗಿ ಪ್ರವಾಸದಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರ ಬೆಂಗಾವಲು (Escort) ವಾಹನ ಅಪಘಾತಕ್ಕೀಡಾದ ಘಟನೆ ಅಜ್ಜಂಪುರ ಪಟ್ಟಣದಲ್ಲಿ...

Related Articles

ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆ ಮಲೆನಾಡಿಗೆ ಕಂಟಕ

ಚಿಕ್ಕಮಗಳೂರು: ಪಶ್ಚಿಮ ಘಟ್ಟ ವ್ಯಾಪ್ತಿಯ ರಾಜ್ಯದ ೧೦ ಜಿಲ್ಲೆಗಳ ೨೦ ಸಾವಿರಕ್ಕೂ ಅಧಿಕ ಚದರ ಕಿಲೋ...

ಅಂಗಾಂಗ ದಾನ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿ

ಚಿಕ್ಕಮಗಳೂರು: ಅಂಗಾಂಗ ದಾನ ಮಾಡಿ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿಯಾಗಿದೆ ಎಂದು ನಗರಸಭೆ ಪೌರಾಯುಕ್ತ...

ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು. ಕೊಪ್ಪ...

ಫಸಲ್ ಬಿಮಾ ನೋಂದಣಿ ಹೆಚ್ಚಿಸಲು ಜಿಲ್ಲಾಧಿಕಾರಿ ನಿರ್ದೇಶನ

ಚಿಕ್ಕಮಗಳೂರು: ಫಸಲ್ ಬಿಮಾ ಯೋಜನೆಯಡಿ ನೋಂದಣಿ ಕಡಿಮೆಯಾಗಿದ್ದು, ತಕ್ಷಣ ಅಗತ್ಯ ಪ್ರಚಾರ ಕೈಗೊಂಡು ರೈತರ ಮನವೊಲಿಸಿ...