Home namma chikmagalur ರೋಟರಿ ಕ್ಲಬ್ ಹಲವಾರು ಸಮಾಜಮುಖಿ ಕಾರ್ಯ
namma chikmagalurchikamagalurHomeLatest News

ರೋಟರಿ ಕ್ಲಬ್ ಹಲವಾರು ಸಮಾಜಮುಖಿ ಕಾರ್ಯ

Share
Share

ಚಿಕ್ಕಮಗಳೂರು:  ಇಲ್ಲಿನ ರೋಟರಿ ಕ್ಲಬ್‌ನಿಂದ ಸ್ವಾರ್ಥಕ್ಕಿಂತ ಸೇವೆ ಮಿಗಿಲು ಎಂಬ ದ್ಯೇಯದೊಂದಿಗೆ ಸಮಾಜ ಸೇವೆಯಲ್ಲಿ ಸದಾ ಮುಂಚೂಣಿಯಲ್ಲಿದೆ ಎಂದು ಕ್ಲಬ್ ಅಧ್ಯಕ್ಷ ಸುಜಿತ್ ಎಂ.ಎಲ್. ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತ, ಕ್ಲಬ್‌ನ ೫ ಸೇವಾ ಮಾರ್ಗಗಳಾದ ಕ್ಲಬ್ ಸೇವೆ, ವೃತ್ತಿಸೇವೆ, ಸಮುದಾಯ ಸೇವೆ, ಅಂತರಾಷ್ಟ್ರೀಯ ಸೇವೆ ಮತ್ತು ಯುವಸೇವೆಗಳ ಮೂಲಕ ಸಮಾಜದ ಏಳಿಗೆಗಾಗಿ ಹತ್ತು ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿ ಯಶಸ್ವಿಯಾಗಿರುವುದಾಗಿ ಹೇಳಿದರು.

ವಿದ್ಯಾ ದಾಸೋಹದ ಮೂಲಕ ತಾಲ್ಲೂಕಿನಾದ್ಯಂತ ೨೦೪೦ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ೧೦೨೦೦ ನೋಟ್ ಪುಸ್ತಕಗಳನ್ನು ವಿತರಿಸಲಾಗಿದೆ. ಚಳಿಯಿಂದ ರಕ್ಷಣೆಗೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಮತ್ತು ಎಸ್ಟೇಟ್ ಕಾರ್ಮಿಕರಿಗೆ ೩೪೦೦೦೦ ರೂಗಳ ವೆಚ್ಚದಲ್ಲಿ ೬೮೬ ಸ್ವೆಟರ್‌ಗಳನ್ನು ವಿತರಿಸಲಾಗಿದೆ ಎಂದರು.

ಆರೋಗ್ಯ ಜಾಗೃತಿ ಅಭಿಯಾನ, ಶಾಲಾ ಮೂಲ ಸೌಕರ್ಯ, ಪರಿಸರ ಸಂರಕ್ಷಣೆ, ರಸ್ತೆ ಸುರಕ್ಷತೆ, ವಿಶೇಷಚೇತನರೊಂದಿಗೆ ರೋಟರಿ ದಿನ, ತಾಂತ್ರಿಕ ನೆರವು, ಉಚಿತ ಆರೋಗ್ಯ ಸೇವೆ, ಮಕ್ಕಳಿಗಾಗಿ ಉಯ್ಯಾಲೆ, ರೋಟರಿ ಅರ್ಥ್ ಪಾರ್ಕ್, ಸಂವೇದನಾ ಯೂಟ್ಯೂಬ್ ಚಾನಲ್, ಪೌರ ಕಾರ್ಮಿಕರಿಗೆ ಸನ್ಮಾನ, ಯುವಚೇತನ, ಇಂಟರ್‌ನೆಟ್ ಕ್ಲಬ್ ಉದ್ಘಾಟನೆ, ಜಿಲ್ಲಾಮಟ್ಟದ ಅತಿಥಿ ಕಾರ್ಯಕ್ರಮ, ಸಾಹಿತ್ಯ ಸೇವೆ ಹೀಗೆ ಹತ್ತು ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುವುದಾಗಿ ತಿಳಿಸಿದರು.

ನಿಧಿ ಸಂಗ್ರಹಕ್ಕೆ ಬೆಂಬಲ, ಆಶಾಕಿರಣ ಅಂಧಮಕ್ಕಳ ಶಾಲೆಗಾಗಿ ವಾಸವಿ ಮಹಿಳಾ ಮಂಡಳಿಯಿಂದ ೩೭ ಸಾವಿರ ರೂಗಳನ್ನು ನೀಡಲಾಗಿದೆ ಎಂದರು. ಮುಂದಿನ ಅಧ್ಯಕ್ಷರಾಗಿ ಲಿಖಿತ್ ಎನ್.ಪಿ ಅವರು ೦೩-೦೭-೨೦೨೫ ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಲಿಖಿತ್ ಎನ್.ಪಿ, ಹರ್ಷಿತ್ ವಸಿಷ್ಠ, ಎಂ.ಎಸ್. ಸುಧೀರ್, ಶ್ರೀಕಾಂತ್ ಶೆಟ್ಟಿ ಉಪಸ್ಥಿತರಿದ್ದರು.

Rotary Club does many social work

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದ‌ಲ್ಲಿ ಇಂದು ನೂತನ ರಸ್ತೆ ಮೇಲ್ವೇತುವೆಯ ನಿರ್ಮಾಣ ಕಾರ್ಯಕ್ಕೆ ಶಿಲಾನ್ಯಾಸ

ಚಿಕ್ಕಮಗಳೂರು: ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆ ಸಚಿವರಾದ ವಿ.ಸೋಮಣ್ಣ ಅವರು ಮೇ 31 ರಂದು (ನಾಳೆ ಭಾನುವಾರ) ಚಿಕ್ಕಮಗಳೂರು ಜಿಲ್ಲೆಯ ವಿವಿಧ ರೈಲ್ವೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಬೆಳಿಗ್ಗೆ...

ಶ್ರೀಗಂಧ ಮರಗಳ ರಕ್ಷಣೆ, ಪ್ಲಾಸ್ಟಿಕ್ ಮುಕ್ತಕ್ಕೆ ಆಗ್ರಹಿಸಿ ಮೌನ ಪ್ರತಿಭಟನೆ

ಚಿಕ್ಕಮಗಳೂರು: ನಾಡಿನಲ್ಲಿ ಶ್ರೀಗಂಧ ಮರಗಳ ರಕ್ಷಣೆ ಮತ್ತು ನಗರವನ್ನು ಪ್ಲಾಸ್ಟಿಕ್ ಮು ಕ್ತಗೊಳಿಸಬೇಕು ಎಂದು ಆಗ್ರಹಿಸಿ ಶುಕ್ರವಾರ ಜಿಲ್ಲಾ ಶ್ರೀಗಂಧ ಮತ್ತು ವನಕೃಷಿ ಬೆಳೆಗಾರರ ಸಂಘ ಮತ್ತು ವಿವಿಧ ಕನ್ನಡಪರ ಸಂಘಟನೆಗಳ...

Related Articles

ಪ್ಲೆಕ್ಸ್‌ ಹರಿದ ಪ್ರಕರಣ ಇಬ್ಬರು ಆರೋಪಿಗಳ ಬಂಧನ

ಚಿಕ್ಕಮಗಳೂರು: ಕಾಫಿನಾಡಿನ ಕಾಂಗ್ರೆಸ್ ಶಾಸಕ ಹೆಚ್.ಡಿ.ತಮ್ಮಯ್ಯ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಭಾವಚಿತ್ರವಿದ್ದ ಪ್ಲೆಕ್ಸ್‌ಗೆ...

ಅಡಿಕೆ ಕಳವು ಪ್ರಕರಣದ ಆರೋಪಿಗಳ ಬಂಧನ

ಬಾಳೆಹೊನ್ನೂರು: ಇಲ್ಲಿಗೆ ಸಮೀಪದ ಜಕ್ಕಣಕ್ಕಿಯ ರೈತರ ಗೋದಾಮಿನಲ್ಲಿಟ್ಟಿದ್ದ ಅಡಿಕೆಯನ್ನು ಕಳವು ಮಾಡಿದ ಆರೋಪದಲ್ಲಿ ಪೊಲೀಸರು ಇಬ್ಬರನ್ನು...

ಮೂಡಿಗೆರೆಯಲ್ಲಿ ಬಾಗಿಲು ಮುರಿದು ಕಳ್ಳತನ

ಮೂಡಿಗೆರೆ: ಬೀಗ ಹಾಕಿದ್ದ ಮನೆಯೊಂದರ ಮುಂಬಾಗಿಲು ಮುರಿದು ಮನೆಯೊಳಗೆ ನುಗ್ಗಿ ನಗದು ಸಹಿತ ಅಪಾರ ಮೌಲ್ಯದ...

ನಾಗಲಕ್ಷ್ಮಿ ಚಿತ್ರಮಂದಿರದ ಪ್ರದರ್ಶನ ಸ್ಥಗಿತ

ಚಿಕ್ಕಮಗಳೂರು: ಅಗ್ನಿ ಸುರಕ್ಷತಾ ಪರಿಕರಗಳನ್ನು ಅಳವಡಿಸದ ಕಾರಣಕ್ಕೆ ನಗರದ ನಾಗಲಕ್ಷ್ಮಿ ಚಿತ್ರಮಂದಿರದಲ್ಲಿ ಚಲನಚಿತ್ರ ಪ್ರದರ್ಶನಗಳನ್ನು ಅಧಿಕಾರಿಗಳು...