Home namma chikmagalur chikamagalur ಮಹಿಳೆಯ ಖಾತೆಯಿಂದ 18 ಲಕ್ಷ ರೂ. ಕಳವು
chikamagalurCrime NewsHomeLatest Newsnamma chikmagalur

ಮಹಿಳೆಯ ಖಾತೆಯಿಂದ 18 ಲಕ್ಷ ರೂ. ಕಳವು

Share
Share

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಸೈಬರ್ ವಂಚನೆಯೊಂದು ಬೆಳಕಿಗೆ ಬಂದಿದ್ದು, ಬ್ಯಾಂಕ್ ಖಾತೆಯಿಂದ ಹಣ ಕಡಿತವಾಗುವಾಗ ಕನಿಷ್ಠ ಪಕ್ಷ ಒಂದು ಸಂದೇಶವೂ ಬಾರದೆ ಇರುವುದು ಆತಂಕ ಹುಟ್ಟಿಸಿದೆ.

ನಗರದ ಐಡಿಎಫ್‌ಸಿ ಬ್ಯಾಂಕಿನಲ್ಲಿ ಉಳಿತಾಯ ಖಾತೆ ಹೊಂದಿದ್ದ ಮಹಿಳೆಯೊಬ್ಬರು ಈ ಬೃಹತ್ ವಂಚನೆಗೆ ಬಲಿಯಾಗಿದ್ದಾರೆ. ಕಳೆದ ಮಾರ್ಚ್ 4 ರಿಂದ ಏಪ್ರಿಲ್ 21 ರ ನಡುವಿನ ಅವಧಿಯಲ್ಲಿ ಹಂತಹಂತವಾಗಿ ಒಟ್ಟು 18,24,000 ರೂಪಾಯಿ ಹಣವು ಮಹಿಳೆಯ ಗಮನಕ್ಕೆ ಬಾರದಂತೆ ವಿವಿಧ ಖಾತೆಗಳಿಗೆ ವರ್ಗಾವಣೆಯಾಗಿದೆ.

ಸಾಮಾನ್ಯವಾಗಿ ಆನ್‌ಲೈನ್ ವ್ಯವಹಾರ ನಡೆಸುವಾಗ ಮೊಬೈಲ್‌ಗೆ ಬರುವ ಓಟಿಪಿ (OTP) ಅಥವಾ ಹಣ ಕಡಿತವಾದ ಬಗ್ಗೆ ಬರುವ ಎಸ್‌ಎಂಎಸ್ ಅಲರ್ಟ್‌ಗಳು ಈ ಪ್ರಕರಣದಲ್ಲಿ ಬಂದೇ ಇಲ್ಲ ಎನ್ನುವುದು ದೊಡ್ಡ ಆತಂಕಕ್ಕೆ ಕಾರಣವಾಗಿದೆ.

ಖಾತೆಯಲ್ಲಿ ಭಾರಿ ಮೊತ್ತದ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ಮಹಿಳೆಯು ಬ್ಯಾಂಕ್ ಮ್ಯಾನೇಜರ್ ಅವರನ್ನು ಸಂಪರ್ಕಿಸಿದಾಗ, ಇದು ವ್ಯವಸ್ಥಿತವಾದ ಸೈಬರ್ ಫ್ರಾಡ್ ಎಂಬ ಕಹಿ ಸತ್ಯ ಹೊರಬಂದಿದೆ. ತಕ್ಷಣವೇ ಎಚ್ಚೆತ್ತುಕೊಂಡ ಸಂತ್ರಸ್ತೆ ಸೈಬರ್ ಸಹಾಯವಾಣಿ ಸಂಖ್ಯೆ 1930ಕ್ಕೆ ಕರೆ ಮಾಡಿ ದೂರು ನೀಡಿದ್ದು, ಸದ್ಯ ಚಿಕ್ಕಮಗಳೂರು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಷ್ಟಪಟ್ಟು ದುಡಿದು ಕೂಡಿಟ್ಟ ಹಣ ಅಕ್ರಮವಾಗಿ ವರ್ಗಾವಣೆಯಾಗಿರುವುದರಿಂದ ಕಂಗಾಲಾಗಿರುವ ಮಹಿಳೆ, ತನ್ನ ಹಣವನ್ನು ವಾಪಸ್ ಕೊಡಿಸಿಕೊಡಿ ಎಂದು ಪೊಲೀಸರಲ್ಲಿ ಮನವಿ ಮಾಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸೈಬ‌ರ್ ಖದೀಮರು ಓಟಿಪಿ ಇಲ್ಲದೆಯೂ ಖಾತೆಗೆ ಕನ್ನ ಹಾಕುವ ಹೊಸ ತಂತ್ರಜ್ಞಾನ ಬಳಸುತ್ತಿರುವುದು ಈ ಪ್ರಕರಣದಿಂದ ಸಾಬೀತಾದಂತಿದೆ.

ಸಾರ್ವಜನಿಕರು ತಮ್ಮ ಬ್ಯಾಂಕ್ ಖಾತೆಗಳ ಬಗ್ಗೆ ಹಾಗೂ ಅಪರಿಚಿತ ಲಿಂಕ್‌ಗಳ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸುವಂತೆ ಪೊಲೀಸರು ಎಚ್ಚರಿಸಿದ್ದಾರೆ.

Rs 18 lakh stolen from woman’s account

Share

Leave a comment

Leave a Reply

Your email address will not be published. Required fields are marked *

Don't Miss

ಮತ ಎಣಿಕೆ ವಿಳಂಬ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

ಚಿಕ್ಕಮಗಳುರು: ರಾಜ್ಯ ಸರ್ಕಾರ ತಮ್ಮ ಶಾಸಕನ ಸೋಲಿನ ಭಯದಲ್ಲಿ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಸ್ಥಗಿತ ಗೊಳಿಸಿರುವ ಅನುಮಾನವಿದೆ. ಇದೇ ಕಾರಣದಿಂದಲೇ 1,822 ಮತಗಳ ಎಣಿಕೆಗೆ 12 ತಾಸು ಆದರೂ ಮುಗಿದಿಲ್ಲ...

ಕಗ್ಗಂಟಾಗಿ ಉಳಿದ ಅಂಚೆ ಮತಗಳ ಎಣಿಕೆ ಕಾರ್ಯ

ಚಿಕ್ಕಮಗಳೂರು: ಹೈಕೋರ್ಟ್ ನಿರ್ದೇಶನದಂತೆ ಶನಿವಾರ ನಡೆದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಎಣಿಕೆ ಕಾರ್ಯ ಪೂರ್ಣಗೊಳ್ಳದೆ. ತಡರಾತ್ರಿವರೆಗೂ ಕಗ್ಗಂಟಾಗಿ ಉಳಿದಿತ್ತು. 2023ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಟಿ.ಡಿ.ರಾಜೇಗೌಡ 201 ಮತಗಳಿಂದ ಜಯ...

Related Articles

ಚುನಾವಣಾ ಆಯೋಗ ಬಿಜೆಪಿ ಏಜೆಂಟ್ ಗಳನ್ನು ಸಾಕ್ಷಿಯಾಗಿ ಪರಿಗಣಿಸಬೇಕು

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ನೆಡೆದಿರುವ ಚುನಾವಣಾ ಅಕ್ರಮ ದೇಶದ ಇತಿಹಾಸದಲ್ಲಿ ಹಾಗೂ ಭವಿಷ್ಯದಲ್ಲಿ ಹಿಂದೆಂದಿಗೂ...

ಹುಲಿ ಗಣತಿಗಾಗಿ ಅಳವಡಿಸಲಾಗಿದ್ದ ಕ್ಯಾಮೆರಾ ಟ್ರ್ಯಾಪ್‌ ಕಳವು

ಚಿಕ್ಕಮಗಳೂರು: ಮುತ್ತೋಡಿ ಅರಣ್ಯ ವಲಯದ ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅರಣ್ಯ ಇಲಾಖೆಗೆ ಶಾಕ್ ನೀಡುವಂತಹ...

ಧರ್ಮಸ್ಥಳದ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಆಣೆ-ಪ್ರಮಾಣ

ಶೃಂಗೇರಿ : ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆಯು ತೀವ್ರ...

ಮೇಲ್ಮನವಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ದ ಆದೇಶವನ್ನು...