Home namma chikmagalur chikamagalur ಬೆಳ್ಳಿ ಮಾರಾಟ ಪ್ರಕರಣದ ಆರೋಪಿಯಿಂದ 41.90 ಲಕ್ಷ ರೂ ನಗದು ಜಪ್ತಿ
chikamagalurCrime NewsHomeLatest Newsnamma chikmagalur

ಬೆಳ್ಳಿ ಮಾರಾಟ ಪ್ರಕರಣದ ಆರೋಪಿಯಿಂದ 41.90 ಲಕ್ಷ ರೂ ನಗದು ಜಪ್ತಿ

Share
Share

ಚಿಕ್ಕಮಗಳೂರು: ಬೆಳ್ಳಿ ಮಾರಾಟದ ಹೆಸರಿನಲ್ಲಿ ನಡೆದಿದ್ದ ಬರೋಬ್ಬರಿ 45 ಲಕ್ಷ ರೂಪಾಯಿ ವಂಚನೆ ಪ್ರಕರಣವನ್ನು ಭೇದಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ನಂಬಿಸಿ ಹಣ ದೋಚಿ ತಲೆಮರೆಸಿಕೊಂಡಿದ್ದ ಮುಖ್ಯ ಆರೋಪಿಯನ್ನು ಸಿನಿಮೀಯ ಶೈಲಿಯಲ್ಲಿ ಅರೆಸ್ಟ್ ಮಾಡಿರುವ ಖಾಕಿ ಪಡೆ, ಆತನಿಂದ 41.90 ಲಕ್ಷ ರೂಪಾಯಿ ನಗದನ್ನು ಜಪ್ತಿ ಮಾಡಿದೆ.

ಕಲ್ಯಾಣ ನಗರದ ನಿವಾಸಿ ರಮೇಶ್ ಎಂಬುವವರು ತಮಗೆ ಪರಿಚಯವಿದ್ದ ನಾಗರಾಜ್ ಮತ್ತು ಪ್ರಸಾದ್ ಎಂಬುವವರನ್ನು ನಂಬಿ ಮಾರಾಟಕ್ಕಾಗಿ ಬೆಳ್ಳಿ ನೀಡಿದ್ದರು. ಆದರೆ ಆ ಬೆಳ್ಳಿಯನ್ನು ಮಾರಿ ಬಂದ 45.20 ಲಕ್ಷ ರೂಪಾಯಿ ಹಣದೊಂದಿಗೆ ಆರೋಪಿಗಳು ಎಸ್ಕೆಪ್ ಆಗಿದ್ದರು. ಮೋಸ ಹೋದದ್ದನ್ನು ಅರಿತ ರಮೇಶ್ ತಕ್ಷಣವೇ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣದ ಗಂಭೀರತೆ ಅರಿತ ಜಿಲ್ಲಾ ಪೊಲೀಸ್ ಅಧೀಕ್ಷಕ ಜೀತೇಂದ್ರ ಕುಮಾ‌ರ್ ದಯಾಮ ಅವರು ಆರೋಪಿಗಳ ಬೇಟೆಗೆ ತಕ್ಷಣವೇ ವಿಶೇಷ ತಂಡವನ್ನು ರಚಿಸಿದ್ದರು.

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಯಕುಮಾರ ಹಾಗೂ ಉಪಾಧೀಕ್ಷಕ ನಾಗರಾಜ್ ಅವರ ಮಾರ್ಗದರ್ಶನದಲ್ಲಿ ಅಖಾಡಕ್ಕಿಳಿದ ಇನ್ಸ್‌ಪೆಕ್ಟರ್ ಅಭಯ್ ಪ್ರಕಾಶ್ ಸೋಮನಾಳ್‌ ನೇತೃತ್ವದ ಟೀಮ್, ವೈಜ್ಞಾನಿಕ ಹಾಗೂ ತಾಂತ್ರಿಕ ಆಯಾಮಗಳಲ್ಲಿ ತನಿಖೆ ತೀವ್ರಗೊಳಿಸಿತ್ತು. ಪೊಲೀಸರ ಹದ್ದಿನ ಕಣ್ಣಿನ ಕಾರ್ಯಾಚರಣೆಗೆ ಕೊನೆಗೂ ಯಶಸ್ಸು ಸಿಕ್ಕಿದ್ದು, ಮೂಡಿಗೆರೆ ತಾಲೂಕಿನ ಬಣಕಲ್ ಕೋಡಳ್ಳಿಯ ನಿವಾಸಿ ನಾಗರಾಜ ಎಂಬಾತನನ್ನು ಕದ್ದುಕುಳಿತಿದ್ದ ಜಾಗದಲ್ಲೇ ದಸ್ತಗಿರಿ ಮಾಡಲಾಗಿದೆ.

ಸದ್ಯ ಬಂಧಿತನಿಂದ ಸಿಂಹಪಾಲು ಹಣವನ್ನು ರಿಕವರಿ ಮಾಡಲಾಗಿದ್ದು, ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿಗಾಗಿ ತನಿಖೆ ಚುರುಕುಗೊಂಡಿದೆ. ಕೇವಲ ಕೆಲವೇ ದಿನಗಳಲ್ಲಿ ಪ್ರಕರಣದ ಬೆನ್ನುಹತ್ತಿ ಆರೋಪಿಯನ್ನು ಹಳೇ ಸ್ಯಾಂಪಲ್ ಸಮೇತ ಲಾಕ್ ಮಾಡಿದ ಇಡೀ ಕ್ರೈಂ ಟೀಮ್ ಕಾರ್ಯಕ್ಷಮತೆಗೆ ಎಸ್ಪಿ ಮೆಚ್ಚುಗೆ ವ್ಯಕ್ತಪಡಿಸಿದ್ದು, ಸೂಕ್ತ ಬಹುಮಾನವನ್ನೂ ಘೋಷಿಸಿದ್ದಾರೆ.

Rs 41.90 lakh cash seized from accused in silver sale case

Share

Leave a comment

Leave a Reply

Your email address will not be published. Required fields are marked *

Don't Miss

ಕಡೂರು ತಾಲೂಕು ಸರ್ಕಾರದ ಬರಪಟ್ಟಿಗೆ ವೈ.ಎಸ್.ವಿ. ದತ್ತಾ ಆಗ್ರಹ

ಕಡೂರು: ಇಡೀ ಜಿಲ್ಲೆಯಲ್ಲಿ ಅತ್ಯಂತ ಬರಗಾಲಕ್ಕೆ ತುತ್ತಾಗಿರುವ ತಾಲೂಕು ಎಂದರೆ ಕಡೂರು ತಾಲೂಕು, ಈ ಸಾಲಿನಲ್ಲಿ ಪ್ರಾರಂಭದಿಂದಲೂ  ಮಳೆ ಬಂದಿಲ್ಲ, ಮುಂಗಾರು ಬಿತ್ತನೆ ಆಗಿಲ್ಲ, ಆಗಸ್ಟ್ ತಿಂಗಳು ಕಳೆಯುತ್ತಾ ಬಂದರು ರಾಗಿ...

ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು: ನಗರದ ಟಿಪ್ಪುನಗರದಲ್ಲಿ ಈದ್ ಮಿಲಾದ್ ಹಿನ್ನೆಲೆಯಲ್ಲಿ ಅಳವಡಿಸಲಾಗಿದ್ದ ಟಿಪ್ಪು ಸುಲ್ತಾನ್ ಅವರ ಬೃಹತ್ ಕಟೌಟ್‌ಗೆ ಪಾಕಿಸ್ತಾನ ಪರವಾದ ಹಾಡನ್ನು ಅಳವಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವುದನ್ನು ಖಂಡಿಸಿ, ರಾಷ್ಟ್ರ ಸುರಕ್ಷಾ ಸಮಿತಿ...

Related Articles

ಕಸಾಪ ಅಧ್ಯಕ್ಷಗಿರಿಗೆ ಜಾಣಗೆರೆ ವೆಂಕಟರಾಮಯ್ಯ ಸೂಕ್ತ

ಚಿಕ್ಕಮಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಡಿಸೆಂಬರ್‌ನಲ್ಲಿ ಚುನಾವಣೆ ನಡೆಯಲಿದ್ದು, ಈಗಾಗಲೇ ಸರ್ಕಾರ ಚುನಾವಣಾಧಿಕಾರಿಯನ್ನು...

ಚಿಕ್ಕೊಳಲೆ ಸುತ್ತ ಕುರುಡು ಕಾಡುಕೋಣದ ಉಪಟಳ

ಚಿಕ್ಕಮಗಳೂರು: ನಗರದ ಸಮೀಪದ ಚಿಕ್ಕೊಳಲೆ ಸುತ್ತಮುತ್ತ ಹಲವು ದಿನಗಳಿಂದ ಕಣ್ಣು ಕಾಣದ ಕಾಡುಕೋಣವೊಂದು ಸುತ್ತಾಡುತ್ತಿದ್ದು, ಗ್ರಾಮಸ್ಥರಲ್ಲಿ...

ರಾಜಕಾರಣದಲ್ಲೂ ಮಹಿಳೆಯರು ಸ್ಥಾನಮಾನಕ್ಕಾಗಿ ಒಗ್ಗಟ್ಟಾಗಿ ಧ್ವನಿ ಎತ್ತಬೇಕು

ಚಿಕ್ಕಮಗಳೂರು:  ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಬಳಿಕ ಡಿಕೆ ಶಿವಕುಮಾರ ನೇತೃತ್ವದ ರಚನೆಯಾದ ನೂತನ ಸಚಿವ...

ಗುಟ್ಕಾ ನಿಷೇಧ ವಿರೋಧಿಸಿ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಪ್ರತಿಭಟನೆ

ಚಿಕ್ಕಮಗಳೂರು: ಗುಟ್ಕಾ ನಿಷೇಧದ ಕುರಿತು ರಾಜ್ಯ ಸರ್ಕಾರ ನೀಡಿರುವ ಹೇಳಿಕೆಯಿಂದ ಅಡಕೆ ಬೆಲೆ ಕುಸಿದು ರೈತರು...