ಚಿಕ್ಕಮಗಳೂರು: ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಕಾಂಕ್ರೀಟ್ ರಸ್ತೆ, ಬಡಾವಣೆ ಹಾಗೂ ದೇವಾಲಯ ಅಭಿವೃದ್ದಿಗೆ ಒಟ್ಟು ೮೦ ಲಕ್ಷ ರೂ. ಅನುದಾನವನ್ನು ಮೀಸಲಿಟ್ಟಿದ್ದು, ಮಳೆಗಾಲದ ನಂತರ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು.
ತಾಲ್ಲೂಕಿನ ಇಂದಾವರ ಗ್ರಾ.ಪಂ. ವ್ಯಾಪ್ತಿಯ ಹುಕ್ಕುಂದ ಗ್ರಾಮದಲ್ಲಿ ಸೋಮವಾರ ನೂತನವಾಗಿ ನಿರ್ಮಿಸಿರುವ ಸಂಜೀವಿನಿ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿ ಗ್ರಾಮದಲ್ಲಿ ಮೂಲಭೂತ ಸೌಲಭ್ಯ ಕೊರತೆಯಾಗದಂತೆ ಇಂದಾವರದ ಮುಖ್ಯರಸ್ತೆಗೆ ಕಾಂಕ್ರೀಟೀಕರ ಣ ೨೦ ಲಕ್ಷ, ಕ್ರಿಶ್ಚಿಯನ್ ಬಡಾವಣೆಗೆ ೫೦ ಲಕ್ಷ ಹಾಗೂ ಹುಕ್ಕುಂದ ಗ್ರಾಮದ ದೇವಾಲಯ ಅಭಿವೃದ್ದಿಗೆ ೧೦ ಲಕ್ಷ ಅನುದಾನ ಮೀಸಲಿಟ್ಟಿದ್ದು ಸಾರ್ವಜನಿಕರ ಸುಭಿಕ್ಷೆ ಹಾಗೂ ನೆಮ್ಮದಿಯಿಂದ ಬದುಕುವುದೇ ಸರ್ಕಾ ರದ ಮೂಲಧ್ಯೇಯವಾಗಿದೆ ಎಂದು ತಿಳಿಸಿದರು.
ಮಹಿಳಾ ಸ್ವಸಹಾಯ ಸಂಘದವರಿಗೆ ಹಿಂದೆ ಸಭೆ, ಕಾರ್ಯಕ್ರಮ ನಡೆಸಲು ಶಾಲೆ ಅಥವಾ ಇನ್ನಿತರೆಡೆ ತೆರಳುವ ಸ್ಥಿತಿಯಿತ್ತು. ಇದೀಗ ಹುಕ್ಕುಂದದಲ್ಲಿ ಹೊಸದಾಗಿ ನಿರ್ಮಿಸಿರುವ ಸಂಜೀವಿನಿ ಕಟ್ಟಡದಿಂದ ಬಹಳ ಷ್ಟು ಉಪಯೋಗವಾಗಿದ್ದು ಸ್ವಸಹಾಯ ಮಹಿಳಾ ಬಂಧುಗಳು ಅಚ್ಚುಕಟ್ಟಾಗಿ ನಿರ್ವಹಿಸಿಕೊಂಡು ಮುನ್ನೆಡೆ ಯಬೇಕಿದೆ ಎಂದರು. ಸಂಘದ ನೂತನ ಕಟ್ಟಡವನ್ನು ತಮ್ಮ ಸ್ವಗೃಹ ಪ್ರವೇಶದಂತೆ ಶೃಂಗರಿಸಿರುವ ಮಹಿಳಾ ಮಣಿಯರು ಕಾರ್ಯ ಶ್ಲಾಘನೀಯ. ವಿಶೇಷವಾಗಿ ಭಾರತೀಯ ಮಹಿಳೆಯರಲ್ಲಿ ಆತ್ಮಶಕ್ತಿ ಹೆಚ್ಚಿದ್ದು, ಯಾವುದೇ ಸಮಾ ರಂಭವನ್ನು ಶ್ರದ್ದೆ, ವಿನಯದಿಂದ ನಿರ್ವಹಿಸುವ ತಾಳ್ಮೆ ಅಡಗಿರುವುದರಿಂದ ಕಟ್ಟಡವು ಸುಂದರತೆಯಿಂದ ಅಲಂಕಾರಗೊಂಡಿದೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಬೊಜೇಗೌಡ ಮಾತನಾಡಿ ಪ್ರತಿ ಕುಟುಂಬದಲ್ಲಿ ಹೆಣ್ಣೊಂದು ಬಹುಮುಖ್ಯ ಪಾತ್ರವಹಿಸುತ್ತಾಳೆ. ಕುಟುಂಬದ ಆರೋಗ್ಯ, ಮಕ್ಕಳ ಪಾಲನೆ ಜವಾಬ್ದಾರಿ ಹೊತ್ತಿರುವ ಕಾರ ಣ ಮುಂಚೂಣಿಯಲ್ಲಿದ್ದಾರೆ. ಅಲ್ಲದೇ ಲೋಕಸೇವಾ ಕಾರ್ಯದಲ್ಲಿ ಮಹಿಳೆಯರಿಗೆ ಮೊದಲ ಪ್ರಾಶಸ್ತ್ಯವಿದೆ. ಜೊತೆಗೆ ಸ್ವಸಹಾಯ ಸಂಘದಲ್ಲಿ ಮಹಿಳೆಯರು ಒಗ್ಗಟ್ಟಾಗಿ ಕೈಜೋಡಿಸಿರುವುದು ಉತ್ತಮ ಬೆಳವಣಿಗೆ ಎಂ ದು ಹೇಳಿದರು.
ಇತ್ತೀಚಿನ ದಿನಗಳಲ್ಲಿ ಅವಿಭಕ್ತ ಕುಟುಂಬದ ಅಣ್ಣತಮ್ಮಂದಿರು, ಅಕ್ಕತಂಗಿಯರ ನಡುವೆ ಆಸ್ತಿ ವಿವಾದ ದಲ್ಲಿ ಹಲವಾರು ಕಲಹಗಳು ಉಂಟಾಗುತ್ತಿವೆ. ಆದರೆ ಪೂರ್ವಿಕರು ಆಸ್ತಿ-ಅಂತಸ್ತಿನ ವ್ಯಾಮೋಹವಿಲ್ಲದೇ ಕೃಷಿ ಬದುಕಿನಲ್ಲಿ ಹೆಚ್ಚು ಸಂತೋಷವನ್ನು ಕಾಣುತ್ತಿದ್ದರು. ಇದೀಗ ಸಂಬಂಧಗಳಲ್ಲಿ ಪ್ರೀತಿ, ವಿಶ್ವಾಸ ಮರೆ ಯಾಗಿ ಅರ್ಥಿಕ ವ್ಯಾಮೋಹಕ್ಕೆ ಒಳಗಾಗುತ್ತಿರುವುದು ದುದೈರ್ವ ಎಂದು ವಿಷಾಧಿಸಿದರು.
ಇಂದಾವರ ಗ್ರಾಮ ಪಂಚಾಯಿತಿ ಅಧ್ಯಕ್ಷ ಐ.ಬಿ.ಸುಭಾಶ್ ಮಾತನಾಡಿ ಸ್ವಸಹಾಯ ಸಂಘದ ಮಹಿಳೆ ಯರಿಗೆ ಅನುಕೂಲವಾಗಲು ನರೇಗಾ ಯೋಜನೆಯಡಿ ಸುಮಾರು ೧೭.೫೦ ಲಕ್ಷ ರೂ.ವೆಚ್ಚದಲ್ಲಿ ಸಂಜೀವಿನಿ ಕಟ್ಟಡವನ್ನು ನಿರ್ಮಿಸಲಾಗಿದ್ದು, ಸೂಕ್ತ ರೀತಿಯಲ್ಲಿ ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿ ದರು.
ಈ ಸಂದರ್ಭದಲ್ಲಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಬಿ.ಕೆ.ವಿಜಯ್‌ಕುಮಾರ್, ಜನತಾ ಬಜಾರ್ ಅದ್ಯಕ್ಷ ಜಯರಾಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ, ಇಂದಾವರ ಗ್ರಾ.ಪಂ. ಸದಸ್ಯರಾದ ಕೆಂಚಯ್ಯ, ಎಂ.ಆರ್.ಜ್ಯೋತಿ, ದಾಕ್ಷಾಯಣಿ, ನೇತ್ರಾವತಿ, ಆಶಾ, ಐ.ಡಿ.ಚಂದ್ರಶೇಖರ್, ಪಿಡಿಓ ಸುರಯ್ಯ ಭಾನು, ಕಾರ್ಯದರ್ಶಿ ವಿ.ಶೇಖರ್, ಮುಖಂಡ ಐ.ಎಂ.ಸುರೇಶ್ ಹಾಗೂ ಸುತ್ತಮುತ್ತಲಿನ ಗ್ರಾಮ ಸ್ಥರು ಉಪಸ್ಥಿತರಿದ್ದರು.
Rs. 80 lakh grant reserved for rural development
Leave a comment