Home namma chikmagalur chikamagalur ಚಿಕ್ಕಮಗಳೂರಿನಲ್ಲಿ ಆರ್‌ಎಸ್‌ಎಸ್ ವಿಜಯದಶಮಿ ಪಥಸಂಚಲನ
chikamagalurHomeLatest Newsnamma chikmagalur

ಚಿಕ್ಕಮಗಳೂರಿನಲ್ಲಿ ಆರ್‌ಎಸ್‌ಎಸ್ ವಿಜಯದಶಮಿ ಪಥಸಂಚಲನ

Share
Share

ಚಿಕ್ಕಮಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಆಶ್ರಯದಲ್ಲಿ ಬುಧವಾರ ನಗರದಲ್ಲಿ ನಡೆದ ವಿಜಯದಶಮಿ ಪಥಸಂಚಲನವು ಸಾರ್ವಜನಿಕರ ಗಮನ ಸೆಳೆಯಿತು. ನಗರದ ಪ್ರಮುಖ ರಸ್ತೆಗಳಲ್ಲಿ ಗಣವೇಷಧಾರಿಗಳು ಶಿಸ್ತುಬದ್ಧವಾಗಿ ಹೆಜ್ಜೆ ಹಾಕುತ್ತಿದ್ದರೆ, ರಸ್ತೆಯ ಎರಡೂ ಬದಿಗಳಲ್ಲಿ ನೆರೆದಿದ್ದ ಸಾರ್ವಜನಿಕರು ಪುಷ್ಪಾರ್ಚನೆ ಮಾಡುವ ಮೂಲಕ ಸಂಭ್ರಮದಿಂದ ಸ್ವಾಗತಿಸಿದರು.

ನಗರದ ಒಕ್ಕಲಿಗರ ಕಲ್ಯಾಣ ಮಂಟಪದಿಂದ ಆರಂಭವಾದ ಪಥಸಂಚಲನವು ಬಸವನಹಳ್ಳಿ ಮುಖ್ಯ ರಸ್ತೆ ಮೂಲಕ ಅನುಮಂತಪ್ಪ ವೃತ್ತ ತಲುಪಿತು. ಬಳಿಕ ಎಂ.ಜಿ. ರಸ್ತೆಯಲ್ಲಿ ಸಾಗಿ ಆಜಾದ್ ಪಾರ್ಕ್‌ನಲ್ಲಿ ಮುಕ್ತಾಯಗೊಂಡಿತು.

ಪಥಸಂಚಲನದ ಹಿನ್ನೆಲೆಯಲ್ಲಿ ನಗರದ ರಸ್ತೆಗಳನ್ನು ಕೇಸರಿ ಧ್ವಜಗಳು ಮತ್ತು ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು. ದಾರಿಯುದ್ದಕ್ಕೂ ಬಿಡಿಸಲಾಗಿದ್ದ ಬಣ್ಣಬಣ್ಣದ ರಂಗೋಲಿಗಳು ಹಬ್ಬದ ವಾತಾವರಣವನ್ನು ಹೆಚ್ಚಿಸಿದವು. ಪಥಸಂಚಲನ ಸಾಗುವ ಮಾರ್ಗದಲ್ಲಿ ಭಾರತ ಮಾತೆ, ಸ್ವಾಮಿ ವಿವೇಕಾನಂದ, ಛತ್ರಪತಿ ಶಿವಾಜಿ ಮಹಾರಾಜ, ರಾಣಿ ಚೆನ್ನಮ್ಮ ಸೇರಿದಂತೆ ನಾಡಿನ ಮಹಾತ್ಮರು ಹಾಗೂ ರಾಷ್ಟ್ರನಾಯಕರ ವೇಷ ಧರಿಸಿದ ಪುಟಾಣಿಗಳು ವಿಶೇಷ ಆಕರ್ಷಣೆಯಾಗಿದ್ದರು.

ರಾಷ್ಟ್ರನಾಯಕರ ಘೋಷವಾಕ್ಯಗಳನ್ನು ಒಳಗೊಂಡ ಫಲಕಗಳು ಗಮನ ಸೆಳೆದವು. ಪ್ರಮುಖ ರಸ್ತೆಗಳಲ್ಲಿ ಸಾಗಿದ ಗಣವೇಷಧಾರಿಗಳ ಮೇಲೆ ಸಾರ್ವಜನಿಕರು ಪುಷ್ಪವೃಷ್ಟಿ ಮಾಡುವ ಮೂಲಕ ಗೌರವ ಸಲ್ಲಿಸಿದರು.  ಪಥಸಂಚಲನದ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಪಥಸಂಚಲನದ ಮಾರ್ಗದುದ್ದಕ್ಕೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ ಭದ್ರತೆ ಹಾಗೂ ಕಾನೂನು ಸುವ್ಯವಸ್ಥೆ ಮೇಲೆ ನಿಗಾ ವಹಿಸಲಾಗಿತ್ತು.

RSS Vijayadashami March in Chikkamagaluru

Share

Leave a comment

Leave a Reply

Your email address will not be published. Required fields are marked *

Don't Miss

ನರ್ಸ್ ಮನೆಯ ಬೀರುವಿನಲ್ಲಿದ್ದ 47 ಗ್ರಾಂ ಚಿನ್ನಾಭರಣ ಕಳವು: ₹4.70 ಲಕ್ಷ ನಷ್ಟ

ನರಸಿಂಹರಾಜಪುರ: ಮನೆಯ ಗಾಡ್ರೇಜ್ ಬೀರುವಿನಲ್ಲಿಟ್ಟಿದ್ದ 47 ಗ್ರಾಂ ತೂಕದ ಚಿನ್ನಾಭರಣ ಕಳವಾಗಿದ್ದು, ಸುಮಾರು ₹4.70 ಲಕ್ಷ ನಷ್ಟ ಸಂಭವಿಸಿರುವ ಘಟನೆ ಪಟ್ಟಣದ ನೇತಾಜಿನಗರದ ಹೊಸ ಬಡಾವಣೆಯಲ್ಲಿ ಬೆಳಕಿಗೆ ಬಂದಿದೆ. ಇಲ್ಲಿನ ನಿವಾಸಿ,...

ಕುಸುಮ್-ಬಿ, ಪಿಎಂ ಸೂರ್ಯ ಘರ್ ಯೋಜನೆ ತ್ವರಿತ ಅನುಷ್ಠಾನಕ್ಕೆ ಸೂಚನೆ

ಚಿಕ್ಕಮಗಳೂರು: ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಅನುಷ್ಠಾನಗೊಳ್ಳುತ್ತಿರುವ ಸೌರಶಕ್ತಿ ಆಧಾರಿತ ಕೃಷಿ ಪಂಪ್‌ಸೆಟ್ ಯೋಜನೆಯಡಿ ಜಿಲ್ಲೆಯಲ್ಲಿ ಅನುಮೋದನೆಗೊಂಡಿರುವ 4,319 ರೈತರ ಅರ್ಜಿಗಳಿಗೆ ಸಂಬಂಧಿಸಿದಂತೆ ಬಾಕಿ ಇರುವ ವಿದ್ಯುತ್ ಸಂಪರ್ಕಗಳನ್ನು ಶೀಘ್ರ ಒದಗಿಸಬೇಕು ಎಂದು...

Related Articles

ಪೊಲೀಸ್ ರಿಂದ ಮಾಮುಲಿ ವಸೂಲಿ ಹಗಲು-ರಾತ್ರಿ ನಡೆಯುವ ಜೂಜು ?

ತರೀಕೆರೆ: ಇಸ್ಪೀಟು, ಮಟ್ಕಾ,ತೂರುವ ಬಿಲ್ಲೆ ಇನ್ನಿತರ ಜೂಜು ಹಗಲು,ರಾತ್ರಿ ನಡೆಯುತ್ತಿದ್ದು ಇವರುಗಳಿಂದ “ಮಾಮುಲಿ” ವಸೂಲಿ ಮಾಡುವಲ್ಲಿ...

ಮುತ್ತೋಡಿ-ಶಿರವಾಸೆ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷ

ಚಿಕ್ಕಮಗಳೂರು: ಕಾಫಿನಾಡಿನ ಮುತ್ತೋಡಿ-ಶಿರವಾಸೆ ರಸ್ತೆಯಲ್ಲಿ ದಿಢೀರನೆ ಹುಲಿಯೊಂದು ಪ್ರತ್ಯಕ್ಷವಾಗಿದ್ದು, ವಾಹನ ಸವಾರರು ಹಾಗೂ ಸ್ಥಳೀಯರಲ್ಲಿ ಆತಂಕ...

ಕಾಂಗ್ರೆಸ್‌ನ ಧೋರಣೆಯನ್ನು ಖಂಡಿಸಿ ರಾಜ್ಯಾದ್ಯಂತ ‘ಅರಾಜಕತೆ ಹಟಾವೋ’ ಅಭಿಯಾನ

ಚಿಕ್ಕಮಗಳೂರು: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ಕುರಿತು ಕಾಂಗ್ರೆಸ್ ಜನರಲ್ಲಿ ಗೊಂದಲ...

ಭೌತಿಕ ಸರ್ವೆ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ

ಚಿಕ್ಕಮಗಳೂರು: ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಭೌತಿಕ ಸರ್ವೆ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿರುವ ರಾಜ್ಯ...