ದಾವಣಗೆರೆ: ನಗರದ ನಿಜಲಿಂಗಪ್ಪ ಬಡಾವಣೆಯ ರಿಂಗ್ ರಸ್ತೆಯಲ್ಲಿ ದ್ವಿಚಕ್ರ ವಾಹನಕ್ಕೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ಬಸ್ ಡಿಕ್ಕಿಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಪ್ರಾದೇಶಿಕ ಸಾರಿಗೆ ಅಧಿಕಾರಿ (ಆರ್‌ಟಿಒ) ಕಚೇರಿಯ ಅಧೀಕ್ಷಕ ಪಿ.ತಿಪ್ಪೇಶಪ್ಪ (45) ಮೃತಪಟ್ಟವರು. ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲ್ಲೂಕಿನ ಶಿವನಿಯ ಇವರು ಆರ್‌ಟಿಒ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
‘ತಿಪ್ಪೇಶ್ ಅವರು ಜೆ.ಎಚ್. ಪಟೇಲ್ ಬಡಾವಣೆಯ ಮನೆಯಿಂದ ಶುಕ್ರವಾರ ಬೆಳಿಗ್ಗೆ ರಿಂಗ್ ರಸ್ತೆಯ ಮೂಲಕ ಆರ್‌ಟಿಒ ಕಚೇರಿಗೆ ತೆರಳುತ್ತಿದ್ದರು.
ಎಜು ಏಷಿಯಾ ಶಾಲೆಯ ಸಮೀಪ ಹಿಂಬದಿಯಿಂದ ವೇಗವಾಗಿ ಬಂದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದ ಸವಾರನ ತಲೆಯ ಮೇಲೆ ಬಸ್ ಹಿಂಬದಿ ಚಕ್ರಗಳು ಹರಿದಿವೆ’ ಎಂದು ದಕ್ಷಿಣ ಸಂಚಾರ ಠಾಣೆಯ ಪೊಲೀಸರು ತಿಳಿಸಿದ್ದಾರೆ.
RTO office superintendent Thippeshappa passes away
Leave a comment