Home namma chikmagalur chikamagalur ಐಡಿಎಸ್‌ಜಿ ಕಾಲೇಜು ಸುತ್ತಮುತ್ತ ಮದ್ಯ ಮಾರಾಟ ನಿಷೇಧ
chikamagalurHomeLatest Newsnamma chikmagalur

ಐಡಿಎಸ್‌ಜಿ ಕಾಲೇಜು ಸುತ್ತಮುತ್ತ ಮದ್ಯ ಮಾರಾಟ ನಿಷೇಧ

Share
Share

ಚಿಕ್ಕಮಗಳೂರು: ಮೇ ೨ ರಂದು ಬೆಳಿಗ್ಗೆ ೬ ಗಂಟೆಯಿಂದ ರಾತ್ರಿ ೧೧ ಗಂಟೆಯವರೆಗೆ ನಗರದ ಐಡಿಎಸ್‌ಜಿ ಕಾಲೇಜಿನ ಆವರಣದ ಸುತ್ತಮುತ್ತಲಿನ ಒಂದು ಕಿ.ಮೀ. ವ್ಯಾಪ್ತಿಯ ಪ್ರದೇಶದಲ್ಲಿರುವ ಎಲ್ಲಾ ರೀತಿಯ ಮದ್ಯ ತಯಾರಿಕೆ, ಸಾಗಣೆ, ದಾಸ್ತಾನು ಮತ್ತು ಮಾರಾಟವನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ ಅವರು ಆದೇಶ ಹೊರಡಿಸಿದ್ದಾರೆ.

ಶೃಂಗೇರಿ ವಿಧಾನ ಸಭಾ ಕ್ಷೇತ್ರದ ೨೦೨೩ರ ಚುನಾವಣೆಗೆ ಸಂಬಂಧಿಸಿದಂತೆ ಮರು ಮತ ಎಣಿಕೆ ಕಾರ್ಯ ಮೇ ೨ ರಂದು ನಡೆಯಲಿದ್ದು, ಮರು ಮತ ಎಣಿಕೆ ಕಾರ್ಯವು ಸೂಕ್ಷ್ಮತೆಯಿಂದ ಕೂಡಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಜಿಲ್ಲಾ ಪೊಲೀಸ್ ಅಧೀಕ್ಷಕರ ಪ್ರಸ್ತಾವನೆಯನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಡೂರು ತಾಲ್ಲೂಕು ಸಿಂಗಟಗೆರೆ ಗ್ರಾಮದ ಶ್ರೀ ಕಲ್ಲೇಶ್ವರ ಸ್ವಾಮಿ ದೇವರ ಜಾತ್ರಾ ಮಹೋತ್ಸವದ ಪ್ರಯುಕ್ತ ಮೇ ೧ ರಂದು ಬ್ರಹ್ಮ ರಥೋತ್ಸವ, ರಾತ್ರಿ ಆರ್ಕೆಸ್ಟ್ರಾ ಮೇ ೨ ರಂದು ಶ್ರೀಸ್ವಾಮಿಯವರ ಅಡ್ಡಪಲ್ಲಕ್ಕಿ ಉತ್ಸವ ನಡೆಯಲಿವೆ. ಜಾತ್ರೆಯ ಸಂದರ್ಭದಲ್ಲಿ ಶಾಂತಿ ಭಂಗ ಉಂಟಾಗುವ ಸಾಧ್ಯತೆ ಇರುವುದರಿಂದ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಮೇ ೧ ರಂದು ಬೆಳಿಗ್ಗೆ ೬ ಗಂಟೆಯಿಂದ ೨ ರಂದು ಮಧ್ಯರಾತ್ರಿ ೧೨ ಗಂಟೆಯವರೆಗೆ ಯಾವುದೇ ರೀತಿಯ ಮದ್ಯ ಮಾರಾಟ ಮಾಡದಂತೆ ಸಿಂಗಟಗೆರೆ ಗ್ರಾಮದ ಶ್ರೀ ರಂಗನಾಥ ವೈನ್ ಶಾಪ್ ಹಾಗೂ ಎಲ್ಲಾ ನಮೂನೆಯ ಮದ್ಯದ ಅಂಗಡಿಗಳನ್ನು ಮುಚ್ಚುವಂತೆಯೂ, ಮದ್ಯ, ಬೀಯರ್, ಮದ್ಯಸಾರ ಇತ್ಯಾದಿ ಅಬಕಾರಿ ಪದಾಥsಗಳ  ಶೇಖರಣೆ, ತಯಾರಿಕೆ, ಸರಬರಾಜು ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ ಅವರು ಆದೇಶ ಹೊರಡಿಸಿದ್ದಾರೆ.

Sale of liquor banned around IDSG College

Share

Leave a comment

Leave a Reply

Your email address will not be published. Required fields are marked *

Don't Miss

ನೋಟರಿ ವಿ.ಕೆ.ರಘುಯಿಂದ ನೀರಿನ ಮೇಲೆ ತೇಲುತ್ತಾ ಯೋಗ ಭಂಗಿ ಪ್ರದರ್ಶನ

ಚಿಕ್ಕಮಗಳೂರು: ಯೋಗ ಸಾಧಕ ನಗರದ ವಕೀಲ ಹಾಗೂ ನೋಟರಿ ವಿ.ಕೆ.ರಘು ಅವರು  ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನೀರಿನ ಮೇಲೆ ತೇಲುತ್ತಾ ವಿವಿಧ ಯೋಗ ಭಂಗಿಗಳನ್ನು ಪ್ರದರ್ಶಿಸಿದರು. ಬೈಪಾಸ್ ರಸ್ತೆಯ ನರ್ಚರ್...

ಪೊಲೀಸರ ವಿಚಾರಣೆಗೆ ಒಳಗಾಗಿದ್ದ ಯುವಕ ಆತ್ಮಹತ್ಯೆಗೆ ಶರಣು

ಕಡೂರು: ಪೊಲೀಸರ ವಿಚಾರಣೆಗೆ ಒಳಗಾಗಿದ್ದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಡೂರು ತಾಲೂಕಿನ ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಲ್ಲೂರು ಗ್ರಾಮದ 20 ವರ್ಷದ ಚಂದನ್ ಮೃತಪಟ್ಟ ದುರ್ದೈವಿ. ಇತ್ತೀಚೆಗೆ...

Related Articles

ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಚೇರಿಯಿಂದ ಮೋಟಾರ್ ಸೈಕಲ್‌ನಲ್ಲಿ...

ಅಭಿವೃದ್ಧಿ ಕೆಲಸಗಳ ಬಗ್ಗೆ ಕೆಲವರು ಪೂರ್ವಗ್ರಪಿಡಿತರಾಗಿ ಮಾತನಾಡುತ್ತಿದ್ದಾರೆ

ಚಿಕ್ಕಮಗಳೂರು: ಅಭಿವೃದ್ಧಿ ಕೆಲಸಗಳ ಬಗ್ಗೆ ಕೆಲವರು ಪೂರ್ವಗ್ರಪಿಡಿತರಾಗಿ ಮಾತನಾಡುತ್ತಿದ್ದಾರೆ. ಈ ಹಿಂದೆ ಒಬ್ಬರಿಗೆ ಮಾತ್ರ ಗುತ್ತಿಗೆ...

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು...