Home namma chikmagalur ಸರ್ದಾರ್ ವಲ್ಲಭಬಾಯಿ ಪಟೇಲ್ ದೇಶದ ಏಕತೆಗೆ ಕಾರಣಕರ್ತರು
namma chikmagalurchikamagalurHomeLatest News

ಸರ್ದಾರ್ ವಲ್ಲಭಬಾಯಿ ಪಟೇಲ್ ದೇಶದ ಏಕತೆಗೆ ಕಾರಣಕರ್ತರು

Share
Share

ಚಿಕ್ಕಮಗಳೂರು:  ಭಾರತದ ಉಕ್ಕಿನ ಮನುಷ್ಯ ಎಂದೇ ಪ್ರಖ್ಯಾತಿ ಪಡೆದ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರು ದೇಶದ ಏಕತೆಗೆ ಕಾರಣಕರ್ತರಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ವಿಕ್ರಮ್ ಅಮಟೆ ಹೇಳಿದರು.

ಜಿಲ್ಲಾ ಪೊಲೀಸ್ ಇಲಾಖೆಯಿಂದ ಇಂದು ನಗರದ ಜಿಲ್ಲಾ ಪೊಲೀಸ್ ಕಚೇರಿ ಮುಂಭಾಗದ ಸರ್ಕಲ್ ಬಳಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ೧೫೦ನೇ ಜನ್ಮದಿನ-ರಾಷ್ಟ್ರೀಯ ಏಕತಾ ದಿನಾಚರಣೆಯಲ್ಲಿ ಅವರು ಮಾತನಾಡಿ ಭಾರತದ ಏಕೀಕರಣಕ್ಕೆ ಅವರು ನೀಡಿರುವ ಕೊಡುಗೆಯನ್ನು ಪರಿಗಣಿಸಿ ಅವರನ್ನು ‘ಭಾರತದ ಏಕೀಕರಣದ ರೂವಾರಿ’ ಎಂದು ಕರೆಯಲಾಗುತ್ತದೆ. ಅವರಲ್ಲಿನ ದೇಶಪ್ರೇಮ ಮಾದರಿಯಾಗಿದೆ ಎಂದರು.

ರಾ?ದ ಏಕತೆ ಮತ್ತು ಸಾರ್ವಭೌಮತೆಯನ್ನು ಕಾಪಾಡಿದ ಹಾಗೂ ಅವುಗಳನ್ನು ತಮ್ಮ ಕಾರ್ಯಗಳ ಮೂಲಕವೇ ಎತ್ತಿ ಹಿಡಿದ ದೇಶದ ಮೊದಲ ಉಪಪ್ರಧಾನಿ ಹಾಗೂ ಗೃಹ ಸಚಿವ ಸರ್ದಾರ್ ವಲ್ಲಭಬಾಯಿ ಪಟೇಲರ ಜೀವನ ಮತ್ತು ಆದರ್ಶಗಳು ಈ ಕಾಲಕ್ಕೂ ಪ್ರಸ್ತುತ ಮತ್ತು ಅನುಕರಣೀಯ. ಸ್ವಾತಂತ್ರ್ಯಾನಂತರ ಹರಿದು ಹಂಚಿಹೋಗಿದ್ದ ಸಂಸ್ಥಾನಗಳನ್ನು ಭಾರತದ ಒಕ್ಕೂಟದಲ್ಲಿ ಸೇರಿಸಿ ಒಗ್ಗೂಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದವರು ಸರ್ದಾರ್ ವಲ್ಲಭಭಾಯಿ ಪಟೇಲ್. ಅದು ಸುಲಭದ ಕೆಲಸವಾಗಿರಲಿಲ್ಲ.

ಸಂಸ್ಥಾನಗಳ ರಾಜಮಹಾರಾಜರೊಂದಿಗೆ ಮಾತುಕತೆ ನಡೆಸುವ ಹೊಣೆಗಾರಿಕೆಯನ್ನು ಪ್ರಧಾನಿ ಜವಾಹರಲಾಲ್ ನೆಹರು ಅವರು ಪಟೇಲ್ ಹಾಗೂ ಭಾರತದ ಕೊನೆಯ ವೈಸರಾಯ್ ಮೌಂಟ್ ಬ್ಯಾಟನ್‌ರ ರಾಜಕೀಯ ಸಲಹೆಗಾರ ವಿ.ಪಿ.ಮೆನನ್ ಅವರಿಗೆ ವಹಿಸಿದರು. ಪರಿಣಾಮಕಾರಿ ಕಾರ್ಯತಂತ್ರ ಮತ್ತು ದೂರದೃಷ್ಟಿಯೊಂದಿಗೆ ಈ ಕೆಲಸಕ್ಕೆ ಅಣಿಯಾದ ಪಟೇಲರು ತಮ್ಮ ಜಾಣ್ಮೆ ಮತ್ತು ಕಠಿಣ ನಿಲುವುಗಳಿಂದಲೇ ಅನೇಕ ಜಟಿಲ ಪರಿಸ್ಥಿತಿಗಳನ್ನು ತಿಳಿಗೊಳಿಸಿದರು ಎಂದರು.

ಗುಜರಾತಿನ ಏಕಥಾನ್ ಎಂಬ ನಗರದಲ್ಲಿ ಇಂದು ಪ್ರಧಾನ ಮಂತ್ರಿಯವರು ರಾಷ್ಟ್ರೀಯ ಏಕತಾ ದಿನವನ್ನು ಆಚರಿಸುತ್ತಾರೆ ಹಾಗೂ ಬೃಹತ್ ಮಟ್ಟದಲ್ಲಿ ಪೊಲೀಸ್ ಪೆರೇಡ್ ನಡೆಯುತ್ತದೆ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಅನಂತರ ತಾಲ್ಲೂಕು ಕಚೇರಿಯವರೆಗೆ ನಡೆದ ಮ್ಯಾರಥಾನ್‌ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಪೌರಾಯುಕ್ತ ಬಿ.ಸಿ.ಬಸವರಾಜ್ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಟಿ.ಜಯಕುಮಾರ್, ಉಪಾಧೀಕ್ಷಕ ಶೈಲೇಂದ್ರ, ಪೊಲೀಸ್ ಮತ್ತಿತರ ಇಲಾಖೆಯ ಅಧಿಕಾರಿಗಳು, ವಿದ್ಯಾರ್ಥಿಗಳು, ಮತ್ತಿತರರು ಇದ್ದರು.

Sardar Vallabhbai Patel is the cause of unity of the country

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...