Home namma chikmagalur ಆಪರೇಷನ್ ಸಿಂಧೂರ: ರಾಜಕೀಯ ನಿಲುವು ತಾಳುವಲ್ಲಿ ಕೇಂದ್ರಸರ್ಕಾರ ವಿಫಲ
namma chikmagalurchikamagalurHomeLatest News

ಆಪರೇಷನ್ ಸಿಂಧೂರ: ರಾಜಕೀಯ ನಿಲುವು ತಾಳುವಲ್ಲಿ ಕೇಂದ್ರಸರ್ಕಾರ ವಿಫಲ

Share
Share

ಚಿಕ್ಕಮಗಳೂರು: ಭಾರತ ಸೇನೆ ಯಶಸ್ವಿಯಾಗಿ ಆಪರೇಷನ್ ಸಿಂಧೂರ ನಡೆಸಿದಾಗ ಕೇಂದ್ರ ಸರ್ಕಾರ ಸ್ಪಷ್ಟ ರಾಜಕೀಯ ನಿಲುವು ತಾಳುವಲ್ಲಿ ವಿಫಲವಾಗಿದೆ ಎಂದು ಎಐಸಿಸಿ ಕಾರ್ಯದರ್ಶಿ ಬಿ.ಎಂ. ಸಂದೀಪ್ ಆರೋಪಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜಕೀಯ ಗಂಭೀರತೆ ಇಲ್ಲದ ಕಾರಣದಿಂದ ಸೇನೆಯ ಶೌರ್ಯ ಮತ್ತು ತ್ಯಾಗಕ್ಕೆ ಸರಿಯಾದ ಮಾನ್ಯತೆ ದೊರಕಿಲ್ಲ. ಈ ನಿಟ್ಟಿನಲ್ಲಿ ಪ್ರಧಾನ ಮಂತ್ರಿಗಳು ಪತ್ರಿಕಾಗೋಷ್ಠಿಯನ್ನು ನಡೆಸಿ ಪರಿಸ್ಥಿತಿಯ ಬಗ್ಗೆ ದೇಶವಾಸಿಗಳಿಗೆ ವಿವರಣೆ ನೀಡಬೇಕೆಂದು ಆಗ್ರಹಿಸಿದರು.

ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ ಸೀಸ್ ಫೈರ್ ಕುರಿತು ಕೇಂದ್ರ ಸರ್ಕಾರ ಮೌನ ವಹಿಸಿದ್ದು, ದೇಶದ ಪರವಾಗಿ ಸ್ಪಷ್ಟವಾದ ರಾಜಕೀಯ ಹೇಳಿಕೆಯನ್ನು ನೀಡಬೇಕಿದ್ದ ಸಂದರ್ಭದಲ್ಲಿ ಮೌನ ವಹಿಸಿದೆ. ವಿದೇಶಿ ಒತ್ತಡಕ್ಕೆ ಮಣಿದು ದೇಶದ ಭದ್ರತೆಗೆ ಕುತ್ತು ತಂದಿರುವುದು ಮೋದಿ ಸರ್ಕಾರದ ದೌರ್ಬಲ್ಯ ಎಂದು ಟೀಕಿಸಿದರು.

ಭಾರತ ಸೇನೆಯ ಶೌರ್ಯ ಮತ್ತು ತ್ಯಾಗವನ್ನು ಗೌರವದಿಂದ ಸ್ಮರಿಸುತ್ತೇವೆ. ಆಪರೇ?ನ್ ಸಿಂಧೂರನಲ್ಲಿ ನಮ್ಮ ಯೋಧರು ತೋರಿಸಿದ ಧೈರ್ಯ, ತಾಂತ್ರಿಕ ಚಾತುರ್ಯ ಮತ್ತು ದೇಶಾಭಿಮಾನವು ನಿಜಕ್ಕೂ ಅಭಿಮಾನದ ಸಂಗತಿ ಎಂದರು.

ಭಾರತದ ಭದ್ರತೆಗೆ ಬೆನ್ನು ತಟ್ಟುವಂತೆ ಕಾರ್ಯನಿರ್ವಹಿಸಿದ ಸೇನೆ, ಉಗ್ರರನ್ನು ನಿ?ಕ್ಷಪಾತವಾಗಿ ಎದುರಿಸಿ, ದೇಶದ ನಾಗರಿಕರನ್ನು ರಕ್ಷಿಸಿರುವುದು ಅತ್ಯಂತ ಶ್ಲಾಘನೀಯ. ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಎಲ್ಲಾ ಯೋಧರು ದೇಶದ ಹೆಮ್ಮೆ. ಅವರಿಗೆ ಕೃತಜ್ಞತೆ ಸಲ್ಲಿಸುತ್ತೇವೆ ಹಾಗೂ ಈ ಅಪೂರ್ವ ಕಾರ್ಯಾಚರಣೆಯ ಯಶಸ್ಸಿಗೆ ಶ್ಲಾಘಿಸಿದರು.

ಏಪ್ರಿಲ್ ೨೨ ರಂದು ಪೆಹಲ್ಗಾಮ್‌ನಲ್ಲಿ ನಡೆದ ಆತಂಕವಾದಿ ಕೃತ್ಯದಿಂದ ಸುಮಾರು ೨೬ ಜನರು ಹತ್ಯೆಗೀಡಾಗಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಬೆಂಬಲವನ್ನು ಘೋಷಿಸಿ ಸರ್ವ ಪಕ್ಷ ಸಭೆ ಮತ್ತು ವಿಶೇಷ ಅಧಿವೇಶನ ಕರೆಯಲು ಒತ್ತಾಯಿಸಿದರು ಎಂದು ತಿಳಿಸಿದರು.

ನಂತರ ಸರ್ಕಾರ ಪಾಕಿಸ್ತಾನದ ೯ ಉಗ್ರ ನೆಲೆಗಳನ್ನು ದ್ವಂಸ ಮಾಡಿ ಪಾಕಿಸ್ತಾನಕ್ಕೆ ಸಿಂಹ ಸ್ವಪ್ನವಾಯಿತು. ಇಡೀ ದೇಶ ೧೯೭೧ ರಲ್ಲಿ ಶ್ರೀಮತಿ ಇಂದಿರಾಗಾಂಧಿ ಅವರು ಪ್ರಧಾನಮಂತ್ರಿ ಆದ ಸಂದರ್ಭದಲ್ಲಿ ನಮ್ಮ ಸೇನೆ ಪಾಕಿಸ್ಥಾನ ಮತ್ತು ಬಾಂಗ್ಲಾದೇಶವನ್ನು ಎರಡು ತುಂಡುಗಳಾಗಿ ಮಾಡಿ ೯೩ ಸಾವಿರ ಪಾಕಿಸ್ತಾನದ ಸೈನಿಕರನ್ನು ಭಾರತದ ಸೈನ್ಯದ ಎದುರು ಮಂಡಿಯೂರಿ ಶರಣಾಗಿದ್ದನ್ನು ದೇಶ ಸ್ಮರಿಸಿಕೊಳ್ಳುತ್ತದೆ ಎಂದು ವಿವರಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಗೈರು ಹಾಜರಿಯಲ್ಲಿ ನಡೆದ ಸರ್ವ ಪಕ್ಷಗಳ ಸಭೆಯಲ್ಲಿ ಪೆಹಲ್ಗಾಮ್‌ನಲ್ಲಿ ನಡೆದ ದುರಂತಕ್ಕೆ ಬೇಹುಗಾರಿಕೆ ಮತ್ತು ಭದ್ರತಾ ವೈಫಲ್ಯ ಕಾರಣ ಎಂದು ಕೇಂದ್ರ ಸರ್ಕಾರ ಒಪ್ಪಿಕೊಂಡಿತು ಎಂದು ಹೇಳಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಗಂಭೀರ ಭದ್ರತಾ ಪರಿಸ್ಥಿತಿಯ ಸಂದರ್ಭದಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ಸಭೆ ಕರೆಯಬೇಕಾಗಿತ್ತು. ಇದು ಕೇವಲ ಸಂವಿಧಾನಿಕ ಶಿ?ಚಾರವಲ್ಲ, ಜವಾಬ್ದಾರಿ ಮತ್ತು ಭದ್ರತೆ ಕುರಿತು ಗಂಭೀರ ಅಭಿಪ್ರಾಯ ವಿನಿಮಯ ಮಾಡಲು ಅಗತ್ಯವಿದ್ದಂತ ಪ್ರತಿ ಪಕ್ಷಗಳನ್ನೂ ಒಳಗೊಂಡಿರುವ ಎಲ್ಲಾ ಪಕ್ಷಗಳ ಸಭೆ, ರಾ?ದ ಏಕತೆ, ಭದ್ರತೆ, ಮತ್ತು ಸಾಮೂಹಿಕ ಸಮಾಲೋಚನೆಗೆ ಸಾಕ್ಷಿಯಾಗುತ್ತಿತ್ತು. ಆದರೆ ಪ್ರಧಾನಿ ಮೋದಿಯವರು ಅವರು ಭಾರತ ಒಂದು ಪ್ರಜಾಪ್ರಭುತ್ವ ಎಂಬುದನ್ನು ಮರೆತು ಇದನ್ನು ಲಘುವಾಗಿ ತೆಗೆದುಕೊಂಡು, ರಾಜಕೀಯವಾಗಿ ತಾನೊಬ್ಬನೇ ನಿರ್ಧಾರ ಮಾಡುವಂತೆ ನಡೆದುಕೊಂಡಿದ್ದಾರೆ ಎಂದು ಟೀಕಿಸಿದರು.

ಇದೇ ಸಮಯದಲ್ಲಿ, ಸಂಸತ್ ಅಧಿವೇಶನವನ್ನು ಕೂಡ ಕರೆದು, ಈ ವಿಚಾರದಲ್ಲಿ ವಿಸ್ತೃತ ಚರ್ಚೆ ನಡೆಯಬೇಕಿತ್ತು. ಇದು ಜನಪ್ರತಿನಿಧಿ ಸಂಸ್ಥೆಗಳ ಗೌರವವನ್ನು ಹೆಚ್ಚಿಸುತಿತ್ತು ಮತ್ತು ಜನರ ಭರವಸೆಯನ್ನು ಕಟ್ಟಿಕೊಡುತ್ತಿತ್ತು.

ರಾಜಕೀಯ ವೈಚಾರಿಕ ಭಿನ್ನತೆಗಳ ಹೊರತಾಗಿ, ರಾ?ದ ಭದ್ರತೆಗೆ ಸಂಬಂಧಿಸಿದ ವಿ?ಯಗಳಲ್ಲಿ ಸಾಮೂಹಿಕ ಸಹಕಾರ, ಸಮಾಲೋಚನೆ, ಮತ್ತು ಪ್ರಾಮಾಣಿಕತೆ ಅಗತ್ಯವಾಗಿವೆ. ಅದಕ್ಕೆ ಪ್ರಧಾನಿ ಮೋದಿಯವರು ಮುನ್ನುಡಿಯಾಗಬೇಕಾಗಿತ್ತು ಎಂದರು.

ಆದರೆ, ನಮ್ಮ ಸೈನ್ಯ ಪಾಕಿಸ್ತಾನದ ಸೈನ್ಯವನ್ನು ಹಿಮ್ಮೆಟ್ಟಿಸಿ ಹೋರಾಡುವ ಸಮಯದಲ್ಲಿ ಅಮೇರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆದೇಶದ ಮೇರೆಗೆ ಏಕಾಏಕಿಯಾಗಿ ಕದನ ವಿರಾಮ ಘೋಷಿಸಿದ್ದು, ನಿಜವಾದ ದುರದೃಷ್ಟಕರ ಲೇವಡಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ. ಮಂಜೇಗೌಡ, ಜಿಲ್ಲಾ ಗ್ಯಾರಂಟಿ ಯೋಜನೆ ಅಧ್ಯಕ್ಷ ಎಂ.ಸಿ. ಶಿವಾನಂದಸ್ವಾಮಿ, ತಾಲ್ಲೂಕು ಅಧ್ಯಕ್ಷ ಮಲ್ಲೇಶ ಸ್ವಾಮಿ, ನಗರ ಕಾಂಗ್ರೆಸ್ ಅಧ್ಯಕ್ಷ ತನೂಜ್ ಕುಮಾರ್ ನಾಯ್ಡು , ಎನ್‌ಎಸ್‌ಯುಐ ನ ಸುಮಂತ್ ಉಪಸ್ಥಿತರಿದ್ದರು.

Scheduled Castes should enter their sub-caste in the census.

Share

Leave a comment

Leave a Reply

Your email address will not be published. Required fields are marked *

Don't Miss

ಸಮುದಾಯದ ಅಭಿವೃದ್ಧಿಗೆ ದುಡಿಯುವ ಸಂಕಲ್ಪ ಮಾಡಬೇಕು

ಚಿಕ್ಕಮಗಳೂರು: ಪರಿಶಿಷ್ಟಜಾತಿ,ಪರಿಶಿಷ್ಟ ಪಂಗಡದ ಸರ್ಕಾರಿ ನೌಕರರು, ನಿವೃತ್ತ ಸರ್ಕಾರಿ ನೌಕರ ಸಂಘದವರು ಸಮುದಾಯದ ಅಭಿವೃದ್ಧಿಗೆ ದುಡಿಯುವ ಸಂಕಲ್ಪ ಮಾಡಬೇಕು ಎಂದು ಜಿಲ್ಲಾಧಿಕಾರಿ ಕೆಲಸ ನಿರ್ವಹಿಸಿ ಬೆಂಗಳೂರಿಗೆ ವರ್ಗಾವಣೆ ಗೊಂಡಿರುವ ಎನ್.ಎಂ. ನಾಗರಾಜ್...

ಗ್ರಾಮಲೆಕ್ಕಿಗನಿಗೆ ನಕಲಿ ಕೆ.ಜಿ. ಬೆಳ್ಳಿ ಗಟ್ಟಿ ನೀಡಿ ವಂಚನೆ

ಚಿಕ್ಕಮಗಳೂರು : ಗ್ರಾಮಲೆಕ್ಕಿಗರೊಬ್ಬರಿಗೆ ಚಿನ್ನ, ಬೆಳ್ಳಿ ಮೇಲೆ ಹೂಡಿಕೆ ಮಾಡಿ ಲಾಭಮಾಡಿಕೊಡುವ ಆಮಿಷವೊಡ್ಡಿದ ಬ್ಯಾಂಕ್ ಉದ್ಯೋಗಿಯೊಬ್ಬ ೪೫.೨೦ ಲಕ್ಷ ಹಣಕ್ಕೆ ೫೦ ನಕಲಿ ಕೆ.ಜಿ. ಬೆಳ್ಳಿ ಗಟ್ಟಿ ನೀಡಿ ವಂಚಿಸಿರುವ ಬಗ್ಗೆ...

Related Articles

ಸಿದ್ದು ಮೌನಂ ಸಮ್ಮತಿ ಯಾವಾಗ ಸ್ಪೋಟಿಸುತ್ತದೆ ?

ಕರ್ನಾಟಕದ ರಾಜಕಾರಣದಲ್ಲಿ ಇಂತಹ ಬೆಳವಣಿಗೆ ನಡೆಯ ಬಹುದು ಎಂದು ಯಾರು ಕೂಡ ನಿರೀಕ್ಷೆ ಮಾಡಿರಲಿಲ್ಲ. 2013...

ಗುಡುಗು-ಸಿಡಿಲಿನ ಭಾರಿ ಮಳೆಗೆ ಇಡೀ ನಗರ ತಲ್ಲಣ

ಚಿಕ್ಕಮಗಳೂರು: ಶುಕ್ರವಾರ ಮಧ್ಯರಾತ್ರಿ ಗುಡುಗು-ಸಿಡಿಲಿನ ಅಬ್ಬರದೊಂದಿಗೆ ಸುರಿದ ಭಾರಿ ಮಳೆಗೆ ಇಡೀ ನಗರ ತಲ್ಲಣಗೊಂಡಿದೆ. ಮರಗಳು...

ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ನೇಮಕ ನಿಯಮ ಬಾಹಿರ

ಚಿಕ್ಕಮಗಳೂರು: ಇತ್ತೀಚೆಗೆ ಡಿ. ರಾಮೇಗೌಡರವರನ್ನು ಕರ್ನಾಟಕ ರಾಜ್ಯ ರೈತ ಸಂಘದ ಚಿಕ್ಕಮಗಳೂರು ತಾಲ್ಲೂಕು ಘಟಕದ ಅಧ್ಯಕ್ಷನಾಗಿ...

ಸಂವಿಧಾನ ವಿರೋಧಿ ಎಸ್.ಐ.ಆರ್ ರದ್ಧತಿಗೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ಸಂವಿಧಾನ, ಪ್ರಜಾತಂತ್ರ, ಜನವಿರೋಧಿ ಆಗಿರುವ ಸರ್ವಾಧಿಕಾರಿ ಗುಣವಿರುವ ಎಸ್.ಐ.ಆರ್ ರದ್ಧಾಗಬೇಕು ಸಂವಿಧಾನ ಬದ್ಧವಾದ, ಜನಸ್ನೇಹಿಯಾದ...