Home namma chikmagalur ಪರಿಶಿಷ್ಟರು ಸರ್ಕಾರದ ಸೌಲಭ್ಯ ವಂಚಿತರಾಗಬಾರದು
namma chikmagalurchikamagalurHomeLatest News

ಪರಿಶಿಷ್ಟರು ಸರ್ಕಾರದ ಸೌಲಭ್ಯ ವಂಚಿತರಾಗಬಾರದು

Share
Share

ಚಿಕ್ಕಮಗಳೂರು: ಪರಿಶಿಷ್ಟ ಜಾತಿಯ ಜನರು ಸರ್ಕಾರದ ಸೌಲಭ್ಯಗಳಿಂದ ಯಾವುದೇ ರೀತಿಯಲ್ಲೂ ವಂಚಿತರಾಗಬಾರದು ಎಂಬ ಉದ್ದೇಶದಿಂದ ಸರ್ಕಾರ ಗೌ.ನಿವೃತ್ತ ನ್ಯಾಯಮೂರ್ತಿ ಡಾ.ಹೆಚ್.ಎನ್.ನಾಗಮೋಹನ್ ದಾಸ್ ಅವರ ಏಕಸದಸ್ಯ ವಿಚಾರಣಾ ಆಯೋಗ ರಚಿಸಿದ್ದು, ಆಯೋಗದ ನಿರ್ದೇಶನದಂತೆ ಪರಿಶಿಷ್ಟ ಜಾತಿಯ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಹೇಳಿದರು.

ಇಂದು ನಗರದ ಜಿಲ್ಲಾ ಪಂಚಾಯತ್ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಆಯೋಜಿಸಿದ್ದ ಪರಿಶಿಷ್ಟ ಜಾತಿಗಳ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಇದುವರೆಗೂ ಶೇ.೯೪ ರಷ್ಟು ಸಮೀಕ್ಷೆ ಪೂರ್ಣಗೊಂಡಿದ್ದು, ಇನ್ನು ಶೇ. ೬ ರಷ್ಟು ಮಾತ್ರ ಬಾಕಿ ಇದೆ. ಮಳೆ ಹೆಚ್ಚಾಗಿರುವ ಕಾರಣದಿಂದ ಮಲೆನಾಡು ತಾಲ್ಲೂಕುಗಳಾದ ಮೂಡಿಗೆರೆ, ತರೀಕೆರೆ, ಕಳಸ, ಬಾಳೆಹೊನ್ನೂರು, ಚಿಕ್ಕಮಗಳೂರಿನಲ್ಲಿ ಮನೆ-ಮನೆ ಸಮೀಕ್ಷೆ ನಡೆಸಲಾಗುತ್ತಿದೆ. ಮುಂದುವರಿದ ಭಾಗವಾಗಿ ನಡೆಯುತ್ತಿರುವ ಆನ್‌ಲೈನ್ ಸಮೀಕ್ಷೆಗೆ ನೆಟ್‌ವರ್ಕ್ ಸಮಸ್ಯೆಯಾಗುತ್ತಿರುವುದರಿಂದ ಸಮೀಕೆ ಕಾರ್ಯ ವಿಳಂಬವಾಗುತ್ತಿದೆ ಎಂದ ಅವರು, ಮಲೆನಾಡಿನ ಜನರಿಗೆ ಉಪಜಾತಿಯ ಬಗ್ಗೆ ಮಾಹಿತಿ ಕೊರತೆ ಇರುವುದರಿಂದ ತಾವುಗಳು ಉಪಜಾತಿಗಳ ಬಗ್ಗೆ ಮಾಹಿತಿ ಸರಿಯಾಗಿ ನೀಡಿ ಸಹಕರಿಸುವಂತೆ ತಿಳಿಸಿದರು. ಉಪಜಾತಿಗಳ ಉಲ್ಲೇಖ ಸಮಸ್ಯೆಯಿಂದ ಸಮೀಕ್ಷೆಗೆ ತೊಡಕಾಗುತ್ತಿರುವ ಬಗ್ಗೆ ಸರ್ಕಾರದ ಗಮನಕ್ಕೆ ತರುವುದಾಗಿ ಹೇಳಿದರು.

ಸಮುದಾಯದ ಮುಖಂಡರು ಹಳ್ಳಿಗಳಲ್ಲಿ ಸಮೀಕ್ಷೆಯಾಗದಿರುವ ಮನೆಗಳನ್ನು ಗಮನಿಸಿ ಸಮೀಕ್ಷೆ ಮಾಡಿಸುವಂತೆ ಅವರಲ್ಲಿ ಅರಿವು ಮೂಡಿಸಬೇಕು. ಮನೆ ಮಂದಿ ಇಲ್ಲದಿರುವ ಸಂದರ್ಭದಲ್ಲಿ ಅಕ್ಕ-ಪಕ್ಕದವರು ಆ ಕುಟುಂಬದ ಜಾತಿ ಹಾಗೂ ಮೊಬೈಲ್ ಸಂಖ್ಯೆ ಮತ್ತಿತರೆ ಮಾಹಿತಿಯನ್ನು ಕೊಟ್ಟು ಸ್ಥಳೀಯರು ಸಹಕರಿಸುವಂತೆ ತಿಳಿಸಿದರು.

ಸಮೀಕ್ಷೆಗೆ ಎಲ್ಲ ಮುಖಂಡರ ಸಹಕಾರ ಅಗತ್ಯವಾಗಿದ್ದು, ಎಲ್ಲರೂ ಸಹಕರಿಸಿದಲ್ಲಿ ಈ ಸಮೀಕ್ಷೆ ಕಾರ್ಯವನ್ನು ಶೀಘ್ರ ಪೂರ್ಣಗೊಳಿಸಬಹುದು ಎಂದು ಹೇಳಿದರು.

ಸಭೆಯಲ್ಲಿ ಮಾಜಿ ಸಚಿವ ಬಿ.ಬಿ.ನಿಂಗಯ್ಯ, ಚಿಕ್ಕಮಗಳೂರು ಉಪವಿಭಾಗಾಧಿಕಾರಿ ಆರ್.ದೇವರಾಜ್, ತರೀಕೆರೆ ಉಪವಿಭಾಗಾಧಿಕಾರಿ ಕಾಂತರಾಜ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಬಿ.ಮಾಲತಿ ಹಾಗೂ ಪರಿಶಿಷ್ಟ ಜಾತಿಯ ಮುಖಂಡರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

Scheduled castes should not be deprived of government facilities.

Share

Leave a comment

Leave a Reply

Your email address will not be published. Required fields are marked *

Don't Miss

ಇಬ್ಬರು ಅಮಾಯಕರನ್ನು ಬಲಿಪಡೆದಿದ್ದ ಕಾಡಾನೆ ಸೆರೆ

ಚಿಕ್ಕಮಗಳೂರು: ಕಳೆದ ಒಂದು ವಾರದಿಂದ ಮಲೆನಾಡಿಗರ ನಿದ್ದೆಗೆಡಿಸಿ, ಇಬ್ಬರು ಅಮಾಯಕರನ್ನು ಬಲಿಪಡೆದಿದ್ದ ರಕ್ಕಸ ಕಾಡಾನೆ ಕೊನೆಗೂ ಅರಣ್ಯ ಇಲಾಖೆಯ ಬಲೆಗೆ ಬಿದ್ದಿದೆ. ಭಾನುವಾರ ಬೆಳಿಗ್ಗೆ ಮತ್ತೊಬ್ಬ ಕಾರ್ಮಿಕ ಮಹಿಳೆಯನ್ನು ಭೀಕರವಾಗಿ ಕೊಂದ...

ಆಸ್ತಿ ವಿವಾದ – ಪೊಲೀಸ್ ಠಾಣೆಯ ಮುಂದೆಯೇ ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಆಸ್ತಿ ವಿವಾದವೊಂದು ಭೀಕರ ಸ್ವರೂಪ ಪಡೆದುಕೊಂಡಿದೆ. ತಂದೆ ತಾಯಿ ಹಾಗೂ ತಂಗಿಯನ್ನು ಕಳೆದುಕೊಂಡು ಅನಾಥನಾಗಿದ್ದ ಯುವಕನೋರ್ವ ಪೊಲೀಸ್ ಠಾಣೆಯ ಮುಂದೆಯೇ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಾಫಿನಾಡನ್ನು ಬೆಚ್ಚಿಬೀಳಿಸಿದೆ. ನಗರದ ಪುನೀತ್‌...

Related Articles

ಖಂಡ್ರೆ ಸಭೆಯಿಂದ ಕಾಡು ಪ್ರಾಣಿಗಳ “ಅನಾಹುತ” ನಿಲ್ಲಿಸಲು ಸಾಧ್ಯವೇ ?

ಅರಣ್ಯ ಸಚಿವ ಖಂಡ್ರೆ(ಕಂಡರೆ) ಆನೆ,ಹುಲಿ.ಸಿಂಹ,ಇಲಿ,ಪಲ್ಲಿಗಳು ನಡುಗುತ್ತವೆ ಎಂಬ ಭ್ರಮೆ ಯಲ್ಲಿ ಬಾಳೆ ಹೊನ್ನೂರಲ್ಲಿ ರೈತರು,ಬೆಳೆಗಾರರು ಮತ್ತು...

ಭೀಕರ ಕೊಲೆ ಆರೋಪಿಗೆ ಜೈಲು ಶಿಕ್ಷೆ-ದಂಡ

ಮೂಡಿಗೆರೆ: ತಾಲೂಕಿನ ಕುನ್ನಹಳ್ಳಿ ಗ್ರಾಮದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣದ ಆರೋಪಿಗೆ ಚಿಕ್ಕಮಗಳೂರಿನ ಜಿಲ್ಲಾ ಮತ್ತು...

ದುಬೈ ವಿಮಾನ ನಿಲ್ದಾಣದಲ್ಲಿ ಸಿಲುಕಿದ ಎಸ್.ಎಲ್.ಭೋಜೇಗೌಡ

ಚಿಕ್ಕಮಗಳೂರು: ದುಬೈ ವಿಮಾನ ನಿಲ್ದಾಣದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಸಿಲುಕಿದ್ದಾರೆ. ದುಬೈ ವಿಮಾನ ನಿಲ್ದಾಣದಿಂದ...

ಬಾಳೆಹೊನ್ನೂರಿನಲ್ಲಿ ನಡೆದ ಸಭೆಯಲ್ಲಿ ಅರಣ್ಯ ಸಚಿವರ ಭಾಷಣಕ್ಕೆ ಅಡ್ಡಿ

ಎನ್.ಆರ್ ಪುರ: ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ...