Home namma chikmagalur chikamagalur ಎನ್‌ಆರ್‌ಪುರ, ಶೃಂಗೇರಿ – ಕೊಪ್ಪ ತಾಲ್ಲೂಕಿನ ಶಾಲೆಗಳಿಗೆ ಇಂದು ರಜೆ
chikamagalurHomeLatest Newsnamma chikmagalur

ಎನ್‌ಆರ್‌ಪುರ, ಶೃಂಗೇರಿ – ಕೊಪ್ಪ ತಾಲ್ಲೂಕಿನ ಶಾಲೆಗಳಿಗೆ ಇಂದು ರಜೆ

Share
Share

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ, ಪ್ರವಾಹ ಹಾಗೂ ಭೂಕುಸಿತದ ಆತಂಕದ ಹಿನ್ನೆಲೆಯಲ್ಲಿ ಜಿಲ್ಲೆಯ ನರಸಿಂಹರಾಜಪುರ, ಶೃಂಗೇರಿ ಮತ್ತು ಕೊಪ್ಪ ತಾಲ್ಲೂಕುಗಳ ಎಲ್ಲ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಶನಿವಾರ (ಆಗಸ್ಟ್ 1) ರಜೆ ಘೋಷಿಸಿ ಸಂಬಂಧಿತ ತಾಲ್ಲೂಕು ತಹಶೀಲ್ದಾರ್‌ಗಳು ಆದೇಶ ಹೊರಡಿಸಿದ್ದಾರೆ.

ನಿರಂತರ ಮಳೆಯಿಂದ ಹಲವು ಪ್ರದೇಶಗಳಲ್ಲಿ ರಸ್ತೆಗಳಲ್ಲಿ ನೀರು ನಿಲ್ಲುವ ಸಾಧ್ಯತೆ, ಸಂಚಾರ ಅಡಚಣೆ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಶಾಲಾ ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಲಾಗಿದೆ.

ಆದರೆ, ಈಗಾಗಲೇ ನಿಗದಿಯಾಗಿರುವ ಸಾರ್ವಜನಿಕ ಪರೀಕ್ಷೆಗಳು, ಬೋರ್ಡ್ ಪರೀಕ್ಷೆಗಳು ಹಾಗೂ ಅಗತ್ಯ ಸರ್ಕಾರಿ ಕರ್ತವ್ಯಗಳು ಎಂದಿನಂತೆ ನಡೆಯಲಿವೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ವಿಪತ್ತು ನಿರ್ವಹಣಾ ಕಾಯ್ದೆ-2005ರ ಕಲಂ 30 ಹಾಗೂ 34ರಡಿ ತಹಶೀಲ್ದಾರ್ ಹಾಗೂ ತಾಲ್ಲೂಕು ಕಾರ್ಯನಿರ್ವಾಹಕ ದಂಡಾಧಿಕಾರಿಗಳು ಈ ಆದೇಶವನ್ನು ಹೊರಡಿಸಿದ್ದು, ಹವಾಮಾನ ಪರಿಸ್ಥಿತಿಯನ್ನು ಗಮನಿಸಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಅನಗತ್ಯವಾಗಿ ಹೊರಗೆ ಸಂಚರಿಸದಂತೆ ಎಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದಾರೆ.

Schools are closed today.

Share

Leave a comment

Leave a Reply

Your email address will not be published. Required fields are marked *

Don't Miss

ಇಂದಿನಿಂದ ಜಿಲ್ಲೆಯಲ್ಲಿ ಸಂಘಟನ್ ಸೃಜನ ಅಭಿಯಾನ

ಚಿಕ್ಕಮಗಳೂರು: ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ತೀರ್ಮಾನದಂತೆ ದೇಶದಾದ್ಯಂತ ‘ಸಂಘಟನ್ ಸೃಜನ ಅಭಿಯಾನ’ ನಡೆಸುತ್ತಿದ್ದು, ಜಿಲ್ಲೆಯಲ್ಲೂ ಇಂದಿನಿಂದ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಎಐಸಿಸಿ ಮಾಜಿ ಕಾರ್ಯದರ್ಶಿ, ಗುಜರಾತ್ ಉಸ್ತುವಾರಿ ಬಿಶ್ವರಂಜನ್ ಮೊಹಾಂತಿ...

ಮುಂದುವರಿದ ಟಿ.ಡಿ.ರಾಜೇಗೌಡ-ಗೊಂದಲದಲ್ಲಿ ಗಾಯಿತ್ರಿ ?

ಚಿಕ್ಕಮಗಳೂರು: ಶಾಸಕ ಟಿ.ಡಿ.ರಾಜೇಗೌಡ v/s ಮಾಜಿ ಶಾಸಕ ಡಿ.ಎನ್.ಜೀವರಾಜ್ ಮಧ್ಯೆ ನಡೆದಿರುವ ಶಾಸಕ ಸ್ಥಾನನ ಪೈಪೋಟಿಯಲ್ಲಿ ಸದ್ಯಕ್ಕೆ ಟಿ.ಡಿ.ರಾಜೇಗೌಡರ ಕೈ ಮೇಲಾಗಿದೆ.ಸುಪ್ರೀಂ ಕೋರ್ಟ್ ಜುಲೈ ತಿಂಗಳವರೆಗೆ ರಾಜೇಗೌಡ ಶಾಸಕ ಸ್ಥಾನದಲ್ಲಿ ಮುಂದುವರೆಯಲಿದ್ದಾರೆ...

Related Articles

ದತ್ತಪೀಠ ಮಾರ್ಗದ ಕವಿಕಲ್ ಗಂಡಿ ಬಳಿ ಗುಡ್ಡ ಕುಸಿತ

ಚಿಕ್ಕಮಗಳೂರು: ಪಶ್ಚಿಮ ಘಟ್ಟಗಳ ತಪ್ಪಲು ಹಾಗೂ ರಾಜ್ಯದ ಅತಿ ಎತ್ತರದ ಶಿಖರ ಮುಳ್ಳಯ್ಯನಗಿರಿ ಪರ್ವತ ಶ್ರೇಣಿಯಲ್ಲಿ...

ಜಿಲ್ಲೆಯಲ್ಲಿ SIR ಪರಿಷ್ಕರಣೆಯಲ್ಲಿ 8,54,852 ನಮೂನೆಗಳ ಡಿಜಿಟಲೀಕರಣ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲಾಧಿಕಾರಿ ಹಾಗೂ...

ಮರು ಮತ ಎಣಿಕೆಯಲ್ಲಿ ಗಾಯತ್ರಿ ಶಾಂತೇಗೌಡಗೆ 9 ಮತಗಳ ಗೆಲವು

ಚಿಕ್ಕಮಗಳೂರು:  ಚಿಕ್ಕಮಗಳೂರು ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದ ಮಹತ್ವದ ಪ್ರಕರಣದಲ್ಲಿ...

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮೂರು ಹಸುಗಳು ಸಾವು

ಕಳಸ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದು ಮೂರು ಹಸುಗಳು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ...