Home namma chikmagalur chikamagalur ನಾಪತ್ತೆಯಾದ ಬಾಲಕಿಗಾಗಿ ಎರಡನೇ ದಿನವೂ ಶೋಧ ಕಾರ್ಯ
chikamagalurHomeLatest Newsnamma chikmagalur

ನಾಪತ್ತೆಯಾದ ಬಾಲಕಿಗಾಗಿ ಎರಡನೇ ದಿನವೂ ಶೋಧ ಕಾರ್ಯ

Share
Share

ಚಿಕ್ಕಮಗಳೂರು: ಪ್ರಸಿದ್ಧ ಪ್ರವಾಸಿ ತಾಣ ಮಾಣಿಕ್ಯಾಧಾರ ಜಲಪಾತದ ಬಳಿ ನಾಪತ್ತೆಯಾಗಿರುವ ಕೇರಳ ಮೂಲದ ಬಾಲಕಿಯ ಪತ್ತೆಗಾಗಿ ಎರಡನೇ ದಿನವೂ ಶೋಧ ಕಾರ್ಯ ತೀವ್ರಗೊಂಡಿದೆ.

ಮಂಗಳವಾರ ಸಂಜೆ ಇದ್ದಕ್ಕಿದ್ದಂತೆ ಬಾಲಕಿ ಶ್ರೀನಂದಾ ಕಾಣೆಯಾಗಿದ್ದು, ಅಂದು ರಾತ್ರಿಯಿಂದಲೇ ಕಾರ್ಯಾಚರಣೆ ಆರಂಭಿಸಲಾಗಿದೆ. ಬುಧವಾರ 60 ಜನರ ತಂಡ ಶೋಧ ನಡೆಸಿದ್ದರೆ, ಇಂದು ಕಾರ್ಯಾಚರಣೆಯನ್ನು ಮತ್ತಷ್ಟು ವಿಸ್ತರಿಸಲಾಗಿದ್ದು ಸುಮಾರು 100ಕ್ಕೂ ಹೆಚ್ಚು ಸಿಬ್ಬಂದಿಗಳು ಹುಡುಕಾಟದಲ್ಲಿ ನಿರತರಾಗಿದ್ದಾರೆ.

ಪೊಲೀಸ್, ಅರಣ್ಯ ಇಲಾಖೆ, ಅಗ್ನಿಶಾಮಕ ದಳ ಹಾಗೂ ಎಸ್‌ಡಿಆರ್‌ಎಫ್ ತಂಡಗಳು ಜಂಟಿಯಾಗಿ ಈ ಕಾರ್ಯಾಚರಣೆ ನಡೆಸುತ್ತಿದ್ದು ದಟ್ಟ ಅರಣ್ಯ ಮತ್ತು ಕಂದಕಗಳಿರುವ ಪ್ರದೇಶಗಳಲ್ಲಿ ಹುಡುಕಾಟ ನಡೆಸಲಾಗುತ್ತಿದೆ. ಶೋಧ ಕಾರ್ಯಕ್ಕಾಗಿ ಡಾಗ್ ಸ್ಕ್ಯಾಡ್ ಮಾತ್ರವಲ್ಲದೆ, ಆಧುನಿಕ ತಂತ್ರಜ್ಞಾನದ ಡೋನ್ ಹಾಗೂ ಥರ್ಮಲ್ ಡೋನ್‌ಗಳನ್ನು ಬಳಸಲಾಗುತ್ತಿದೆ.

ಸ್ಥಳೀಯರ ನೆರವಿನೊಂದಿಗೆ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.

ದತ್ತಪೀಠದ ಮಾಣಿಕ್ಯಾಧಾರ ಬಳಿ ಕೇರಳ ಮೂಲದ ಬಾಲಕಿ ಶ್ರೀನಂದಾ ನಾಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಅವರು ಇಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜೀತೇಂದ್ರ ಕುಮಾರ್ ದಯಾಮಾ ಅವರಿಂದ ಪ್ರಕರಣದ ಸಂಪೂರ್ಣ ಮಾಹಿತಿ ಪಡೆಯಲಿರುವ ಅವರು, ಎಸ್ಪಿಯವರೊಂದಿಗೆ ಮಾಣಿಕ್ಯಾಧಾರದ ನಾಪತ್ತೆ ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಮಂಗಳವಾರ ಸಂಜೆ 6:30ರಿಂದ ನಾಪತ್ತೆಯಾಗಿರುವ ಬಾಲಕಿಯ ಪತ್ತೆಗಾಗಿ ನಡೆಯುತ್ತಿರುವ ಶೋಧ ಕಾರ್ಯದ ಬಗ್ಗೆ ಸಂಕ್ಷಿಪ್ತ ವಿವರಗಳನ್ನು ಪಡೆದು, ಮುಂದಿನ ಕಾರ್ಯಾಚರಣೆಗೆ ಅಗತ್ಯ ಸಲಹೆಗಳನ್ನು ನೀಡಲಿದ್ದಾರೆ.

ಸದ್ಯ ಸ್ಥಳದಲ್ಲಿ ಅರಣ್ಯ ಇಲಾಖೆ, ಪೊಲೀಸ್ ಹಾಗೂ ಅಗ್ನಿಶಾಮಕ ದಳದ 100ಕ್ಕೂ ಹೆಚ್ಚು ಸಿಬ್ಬಂದಿ ಸತತವಾಗಿ ಶೋಧ ಕಾರ್ಯದಲ್ಲಿ ತೊಡಗಿದ್ದಾರೆ. ಶೋಧಕ್ಕಾಗಿ ಡಾಗ್ ಸ್ಕ್ಯಾಡ್, ಡೋನ್ ಹಾಗೂ ಥರ್ಮಲ್ ಡೋನ್‌ಗಳನ್ನು ಬಳಸಲಾಗುತ್ತಿದ್ದು,

ಎಸ್‌ಡಿಆರ್‌ಎಫ್ ತಂಡ ಕೂಡ ಕಾರ್ಯಾಚರಣೆಯಲ್ಲಿ ಕೈಜೋಡಿಸಿದೆ. ಈ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಾಲಕಿಯ ಪತ್ತೆಗಾಗಿ ಹಗಲಿರುಳು ತೀವ್ರ ಹುಡುಕಾಟ ಮುಂದುವರೆದಿದೆ.

Search continues for second day for missing girl

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...