Home namma chikmagalur chikamagalur ಫೆ.೨೮-ಮಾ.೧೭ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ
chikamagalurHomeLatest Newsnamma chikmagalur

ಫೆ.೨೮-ಮಾ.೧೭ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ

Share
Share

ಚಿಕ್ಕಮಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಫೆಬ್ರವರಿ ೨೮ ರಿಂದ ಮಾರ್ಚ್ ೧೭ರವರೆಗೆ ನಡೆಯಲಿದ್ದು, ಪರೀಕ್ಷೆಗಳನ್ನು ಜಿಲ್ಲೆಯಲ್ಲಿ ವ್ಯವಸ್ಥಿತವಾಗಿ, ಪಾರದರ್ಶಕವಾಗಿ ನಡೆಸಲು ಅಗತ್ಯವಿರುವ ಎಲ್ಲ ಕ್ರಮ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ನಾರಾಯಣ ರಡ್ಡಿ ಕನಕರಡ್ಡಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ಕೇಂದ್ರದಲ್ಲಿ ಮಂಗಳವಾರ ನಡೆದ ೨೦೨೬ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ಯಾವುದೇ ರೀತಿಯ ಗೊಂದಲಕ್ಕೆ ಅವಕಾಶವಿರದಂತೆ, ಸುಗಮ ಹಾಗೂ ಸುವ್ಯವಸ್ಥಿತವಾಗಿ ನಡೆಸಬೇಕು. ಪರೀಕ್ಷೆಗೆ ಮೇಲ್ವಿಚಾರಕರ ನಿಯೋಜನೆ ಸೇರಿದಂತೆ ಪಿಯು ಪರೀಕ್ಷಾ ಪ್ರಾಧಿಕಾರದ ನಿರ್ದೇಶನವನ್ನು ಚಾಚೂ ತಪ್ಪದೆ ಪಾಲಿಸಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.

ಪರೀಕ್ಷಾ ಕೊಠಡಿಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸುವುದು, ಕುಡಿಯುವ ನೀರಿನ ವ್ಯವಸ್ಥೆ, ಕೊಠಡಿಗಳ ಸ್ವಚ್ಛತೆ, ಬೆಂಚುಗಳ ವ್ಯವಸ್ಥೆ, ಗೋಡೆ ಗಡಿಯಾರ ಸೇರಿದಂತೆ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಉತ್ತಮ ವಾತಾವರಣ ಕಲ್ಪಿಸಬೇಕು. ಪರೀಕ್ಷಾ ಪಾವಿತ್ರ್ಯತೆಯನ್ನು ಕಾಪಾಡಬೇಕು.

ಪರೀಕ್ಷಾ ಕೇಂದ್ರಗಳಲ್ಲಿ ಚಲನವಲನಕ್ಕೆ ಸಂಬಂಧಿಸಿದಂತೆ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳು ಸೇರಿದಂತೆ ಪರೀಕ್ಷಾ ಕೇಂದ್ರಗಳಲ್ಲಿ ಚಲನವಲನಗಳಿಗೆ ಸಂಬಂಧಿಸಿದಂತೆ ನಿಗಾ ವಹಿಸಬೇಕು. ವಿದ್ಯಾರ್ಥಿಗಳು ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳನ್ನು ಪರೀಕ್ಷಾ ಕೇಂದ್ರಗಳಿಗೆ ಕೊಂಡೊಯ್ಯುವಂತಿಲ್ಲ ಎಂದರು.

ವಿದ್ಯಾರ್ಥಿಗಳ ನೋಂದಣಿ ಸಂಖ್ಯೆ ಹಾಗೂ ಕೊಠಡಿ ಸಂಖ್ಯೆಗಳನ್ನು ಖಾತ್ರಿಪಡಿಸಿಕೊಳ್ಳಲು ಪರೀಕ್ಷಾ ಕೇಂದ್ರಗಳಲ್ಲಿ ಮಾಹಿತಿ ಒದಗಿಸುವಂತಾಗಬೇಕು. ಪರೀಕ್ಷಾ ದಿನಗಳಲ್ಲಿ ಅಗತ್ಯ ವಾಹನಗಳ ವ್ಯವಸ್ಥೆ ಜೊತೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕು. ಆರೋಗ್ಯ ಇಲಾಖೆಯಿಂದ ಶುಶ್ರೂಷಕರನ್ನು ನೇಮಕ ಮಾಡಬೇಕು ಎಂದು ಸೂಚಿಸಿದರು.

ಪದವಿ ಪೂರ್ವ ಕಾಲೇಜು ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಕೆ.ಮಂಜುಳ ಮಾತನಾಡಿ, ಜಿಲ್ಲೆಯ ಒಟ್ಟು ೧೯ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು, ಒಟ್ಟು ೮೮೯೦ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇವರಲ್ಲಿ ೮೩೧೫ ಹೊಸ ವಿದ್ಯಾರ್ಥಿಗಳು, ೩೫೧ ಪುನರಾವರ್ತಿತ ಅಭ್ಯರ್ಥಿಗಳು, ೨೨೨ ಖಾಸಗಿ ಅಭ್ಯರ್ಥಿಗಳು ಹಾಗೂ ಇಬ್ಬರು ಇತರೆ ಅಭ್ಯರ್ಥಿಗಳು ಸೇರಿದ್ದಾರೆ.

ಒಟ್ಟು ವಿದ್ಯಾರ್ಥಿಗಳಲ್ಲಿ ಕಲಾವಿಭಾಗದಲ್ಲಿ ೧೯೯೦, ವಿಜ್ಞಾನ ವಿಭಾಗದಲ್ಲಿ ೩೮೦೦ ಹಾಗೂ ವಾಣಿಜ್ಯ ವಿಭಾಗದಲ್ಲಿ ೩೧೦೦ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ತಿಳಿಸಿದರು.
ಜಿಲ್ಲೆಯ ಎಲ್ಲ ತಾಲ್ಲೂಕು ತಹಸೀಲ್ದಾರರುಗಳ ಜೊತೆ ವಿ.ಸಿ. ಮೂಲಕ ಪರೀಕ್ಷಾ ಸಿದ್ಧತೆ ಬಗ್ಗೆ ಚರ್ಚಿಸಲಾಯಿತು.

ಜಿಲ್ಲೆಯ ವಿವಿಧ ತಾಲ್ಲೂಕುಗಳ ತಹಸೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿವಿಧ ಕಾಲೇಜು ಪ್ರಾಂಶುಪಾಲರು, ಹಿರಿಯ ಉಪನ್ಯಾಸಕರು ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ವಿವಿಧ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Second PUC annual examination from Feb. 28-Mar. 17

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...