Home ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಮಹಿಳಾ ಸಂಘದ ಕಾರ್ಯದರ್ಶಿ
HomeLatest Newsnamma chikmagalurTarikere

ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಮಹಿಳಾ ಸಂಘದ ಕಾರ್ಯದರ್ಶಿ

Share
Share

ಚಿಕ್ಕಮಗಳೂರು: ಹಾಲು ಉತ್ಪಾದಕರ ಸಂಘದಲ್ಲಿ ಹಣ ದುರ್ಬಳಕೆ ಆರೋಪ ಸಂಬಂಧ ಮನನೊಂದು ಮಹಿಳಾ ಸಂಘದ ಕಾರ್ಯದರ್ಶಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಮಗಳೂರಿನ ತರೀಕೆರೆಯ ಹೆಚ್​​. ಮಲ್ಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಉಷಾ (45) ಮೃತ ಮಹಿಳೆಯಾಗಿದ್ದು, ಕಿರುಕುಳ ತಡೆಯಲು ನನ್ನಿಂದ ಆಗುತ್ತಿಲ್ಲ ಎಂದು ಹೇಳಿರುವ ವಿಡಿಯೋ ರೆಕಾರ್ಡ್​​ ಮಾಡಿ ನೇಣಿಗೆ ಶರಣಾಗಿದ್ದಾರೆ. ಲೆಕ್ಕಪತ್ರ ಪುಸ್ತಕ ಕಳೆದುಹೋಗಿರೋದು ತನ್ನಿಂದಾದ ತಪ್ಪು ಎಂದು ವಿಡಿಯೋದಲ್ಲವರು ಅಲವತ್ತುಕೊಂಡಿದ್ದಾರೆ.

ಅಲ್ಲಿಂದಲೂ ಉಷಾ ಸಂಘದ ಕಾರ್ಯದರ್ಶಿಯಾಗಿದ್ದರು. ಈ ನಡುವೆ 2025ರಲ್ಲಿ ಸಂಘಕ್ಕೆ ಹೊಸ ಸದಸ್ಯರು ಸೇರ್ಪಡೆಗೊಂಡ ಬಳಿಕ ಎಲ್ಲಾ ಲೆಕ್ಕಪತ್ರ ಕೇಳಲು ಅವರು ಪ್ರಾರಂಭಿಸಿದ್ದರು. ಆ ವೇಳೆ ಉಷಾ ವಿರುದ್ಧ ಹಣ ದುರ್ಬಳಕೆ ಆರೋಪ ಮಾಡಲಾಗಿತ್ತು ಎನ್ನಲಾಗಿದೆ.
ಹೀಗಿದ್ದರೂ ನಮ್ಮ ಕುಟುಂಬಕ್ಕೆ ಜೀವ ಬೆದರಿಕೆ ಹಾಕಲಾಗಿತ್ತು. ಎಚ್. ಎನ್. ಜಗದೀಶ್ (ದೊಡ್ಡೆರಿ), ದಕ್ಷಿಣ ಮೂರ್ತಿ, ಎಚ್. ಎಂ. ಯತೀಶ, ಲವಕುಮಾರ, ಕುಮಾರಸ್ವಾಮಿ, ವಿನಯ್ ಕುಮಾರ, ದರ್ಶನ್‌ ಕುಮಾರ್ ಎಚ್. ಆರ್., ಮಂಜುನಾಥ, ರಾಜೇಶ್ ಬಿನ್ ಪಾಲಾಕ್ಷಿ ಇವರೇ ತನ್ನ ಪತ್ನಿಯ ಸಾವಿಗೆ ಕಾರಣ ಎಂದು ಆರೋಪಿಸಿದ್ದಾರೆ. ಉಷಾ ವಿಡಿಯೋದಲ್ಲಿ 10 ಜನರ ಹೆಸರು ಉಲ್ಲೇಖಿಸಿರುವ ಹಿನ್ನೆಲೆ ಹೆಚ್​​. ಮಲ್ಲೇನಹಳ್ಳಿ ಗ್ರಾಮದ 10 ಜನರ ಮೇಲೆ ತರೀಕೆರೆ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
Secretary of women’s association commits suicide by making video
Share

Leave a comment

Leave a Reply

Your email address will not be published. Required fields are marked *

Don't Miss

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದ್ದು, ೮೧ ಸಾವಿರ ರೂ.ಗಳ ದಂಡ...

ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

ಚಿಕ್ಕಮಗಳೂರು: ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಈ ಹಿಂದೆ ಜೂನ್ 21,...

Related Articles

ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಚಿಕ್ಕಮಗಳೂರು: RVR ಹೆಲ್ತ್ ಕೇರ್ ವತಿಯಿಂದ, ಶ್ರೀ ವಿಜಯ್ ಎಂ.ಎನ್. ಶೆಟ್ಟಿ ಹಾಗೂ ಡಾ. (ಪ್ರೊ). ರಾಘವೇಂದ್ರ...

ಧುಮ್ಮಿಕ್ಕಿ ಹರಿಯುತ್ತಿರುವ ಹೆಬ್ಬೆ ಫಾಲ್ಸ್‌

ಚಿಕ್ಕಮಗಳೂರು: ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ (Rain) ಅಬ್ಬರ ಜೋರಾಗಿದ್ದು, ತರೀಕೆರೆ (Tarikere) ತಾಲೂಕಿನಲ್ಲಿರುವ ಹೆಬ್ಬೆ...

ಶ್ರೀಈಶ್ವರ-ಚೌಡೇಶ್ವರಿ ದೇವಾಲಯಗಳಲ್ಲಿ ಆಭರಣ ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ ಎಸ್.ಡಿ. ಕೊಪ್ಪಲು ಗ್ರಾಮದ ಶ್ರೀಈಶ್ವರ ಹಾಗೂ ಚೌಡೇಶ್ವರಿ ದೇವಾಲಯಗಳಲ್ಲಿ ದೇವರ...

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ....