ಚಿಕ್ಕಮಗಳೂರು: ಸೆಕ್ಯೂರಿಟಿ ಗಾರ್ಡ್ ಕೆಲಸ ನಿರ್ವಹಿಸುತ್ತಿರುವ ವೇಳೆ ಹೃದಯಾಘಾತದಿಂದ ಕೂತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದೆ.
ಈ ತಾಲೂಕಿನ ಹಿರೇಗೌಜ ಗ್ರಾಮದ ಶಿವಮೂರ್ತಿ (೫೦) ಬೈಕ್ ಶೋ ರೂಮ್‌ವೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಹೃದಯಾಘಾತಗೊಂಡು ಮೃತಪಟ್ಟಿದ್ದಾರೆ.
ನಗರದ ಬೇಲೂರು ರಸ್ತೆಯಲ್ಲಿರುವ ಬೈಕ್ ಶೋ ರೂಮ್‌ನಲ್ಲಿ ಶಿವಮೂರ್ತಿ ಸೆಕ್ಯೂರಿಟಿ ಗಾರ್ಡ್‌ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಎಂದಿನಂತೆ ಕೆಲಸಕ್ಕೆ ಹಾಜರಾಗಿದ್ದು, ಕರ್ತವ್ಯ ನಿರ್ವಹಿಸುತ್ತಿರುವ ವೇಳೆ ಹೃದಯಾಘಾತದಿಂದ ಮೃತಪಟ್ಟಿದ್ದು, ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Security guard suffers heart attack on the spot
Leave a comment