Home namma chikmagalur chikamagalur ಜ.28 ರಿಂದ 11 ದಿನ ಜಿಲ್ಲಾದ್ಯಂತ ಕ್ರೀಡಾಶಾಲೆಗೆ ಆಯ್ಕೆ
chikamagalurHomeLatest Newsnamma chikmagalur

ಜ.28 ರಿಂದ 11 ದಿನ ಜಿಲ್ಲಾದ್ಯಂತ ಕ್ರೀಡಾಶಾಲೆಗೆ ಆಯ್ಕೆ

Share
Share

ಚಿಕ್ಕಮಗಳೂರು: ೨೦೨೬-೨೭ನೇ ಸಾಲಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ನಡೆಸುತ್ತಿರುವ ಚಿಕ್ಕಮಗಳೂರು ಜಿಲ್ಲಾ ಕ್ರೀಡಾ ಶಾಲೆಗೆ ಅಥ್ಲೆಟಿಕ್ಸ್, ವಾಲಿಬಾಲ್ ಮತ್ತು ಜೂಡೋ ಕ್ರೀಡೆಗಳಿಗೆ ಅರ್ಹ ಕ್ರೀಡಾಪಟುಗಳನ್ನು ಆಯ್ಕೆ ಮಾಡಲು ಜನವರಿ ೨೮ ರಿಂದ ಫೆಬ್ರವರಿ ೯ರವರೆಗೆ ಜಿಲ್ಲೆಯ ತಾಲ್ಲೂಕುಗಳಲ್ಲಿ ಸಂದರ್ಶನಗಳನ್ನು ಆಯೋಜಿಸಲಾಗಿದೆ.

ಅಭ್ಯರ್ಥಿಗಳು ೨೦೨೬-೨೭ನೇ ಶೈಕ್ಷಣಿಕ ವರ್ಷದಲ್ಲಿ ೫ನೇ ತರಗತಿಗೆ ಸೇರ್ಪಡೆಗೊಳ್ಳಲು ಅರ್ಹರಿರಬೇಕು. ಮುಂದಿನ ಜೂನ್ ೧ಕ್ಕೆ ೧೧ ವರ್ಷದೊಳಗಿದ್ದು ಪ್ರಸ್ತುತ ೪ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು. ಇಲಾಖೆಯ ನಾರ್ಮ್ಸ್ ಪ್ರಕಾರ ಆಯ್ಕೆ ನಡೆಯಲಿದ್ದು, ಆಯ್ಕೆಯಾದ ಕ್ರೀಡಾಪಟುಗಳಿಗೆ ಜಿಲ್ಲಾ ಕ್ರೀಡಾ ಶಾಲೆಗೆ ಪ್ರವೇಶ ಕಲ್ಪಿಸಲಾಗುವುದು.

ಜನವರಿ ೨೮ ರಂದು ಬೆಳಿಗ್ಗೆ ೧೦.೩೦ಕ್ಕೆ ಮೂಡಿಗೆರೆ ತಾಲ್ಲೂಕು ಗೋಣಿಬೀಡು ಹೊಯ್ಸಳ ಪ್ರೌಢಶಾಲೆ, ಮೂಡಿಗೆರೆಯ ಹೊಯ್ಸಳ ಕ್ರೀಡಾಂಗಣದಲ್ಲಿ ಮಧ್ಯಾಹ್ನ ೨.೩೦ಕ್ಕೆ, ೨೯ ರಂದು ಬೆಳಿಗ್ಗೆ ೧೦.೩೦ಕ್ಕೆ ಗಬ್ಗಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮಧ್ಯಾಹ್ನ ೨.೩೦ಕ್ಕೆ ನಿಡುವಾಳೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ೩೦ ಹಾಗೂ ೩೧ ರಂದು ಬೆಳಿಗ್ಗೆ ೧೦.೩೦ಕ್ಕೆ ಚಿಕ್ಕಮಗಳೂರಿನ ಸುಭಾಷ್‌ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಆಯ್ಕೆ ಪ್ರಕ್ರಿಯೆಗಳು ನಡೆಯಲಿವೆ.

ಫೆಬ್ರವರಿ ೨ ರಂದು ಬೆಳಿಗ್ಗೆ ೧೦.೩೦ಕ್ಕೆ ಲಿಂಗದಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮಧ್ಯಾಹ್ನ ೨.೩೦ಕ್ಕೆ ಬೀರೂರಿನ ಕೆ.ಎಲ್.ಕೆ. ಪ್ರೌಢಶಾಲೆ, ೩ ರಂದು ಬೆಳಿಗ್ಗೆ ೧೦.೩೦ಕ್ಕೆ ತರೀಕೆರೆ ತಾಲ್ಲೂಕಿನ ಲಕ್ಕವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮಧ್ಯಾಹ್ನ ೨.೩೦ಕ್ಕೆ ಎಂ.ಸಿ.ಹಳ್ಳಿಯ ಸರ್ಕಾರಿ ಪ್ರೌಢಶಾಲೆ, ೪ ರಂದು ಬೆಳಿಗ್ಗೆ ೧೦.೩೦ಕ್ಕೆ ಕಡೂರು ತಾಲ್ಲೂಕಿನ ಪಂಚನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮಧ್ಯಾಹ್ನ ೨.೩೦ಕ್ಕೆ ಸಿಂಗಟಗೆರೆ ಸರ್ಕಾರಿ ಪ್ರೌಢಶಾಲೆ, ಫೆಬ್ರವರಿ ೫ ರಂದು ಬೆಳಿಗ್ಗೆ ೧೦.೩೦ಕ್ಕೆ ಅಜ್ಜಂಪುರ ಸರ್ಕಾರಿ ಪ್ರೌಢಶಾಲೆ, ಮಧ್ಯಾಹ್ನ ೨.೩೦ಕ್ಕೆ ಅಜ್ಜಂಪುರ ತಾಲ್ಲೂಕಿನ ಸೊಕ್ಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ೬ ರಂದು ಬೆಳಿಗ್ಗೆ ೧೦.೩೦ಕ್ಕೆ ಶೃಂಗೇರಿ ತಾಲ್ಲೂಕಿನ ನೆಮ್ಮಾರು ಸರ್ಕಾರಿ ಪ್ರೌಢಶಾಲೆ, ೭ ರಂದು ಬೆಳಿಗ್ಗೆ ೧೦.೩೦ಕ್ಕೆ ನರಸಿಂಹರಾಜಪುರದ ಶ್ರೀ ಕುವೆಂಪು ಕ್ರೀಡಾಂಗಣ, ೯ ರಂದು ಬೆಳಿಗ್ಗೆ ೧೦.೩೦ಕ್ಕೆ ಕೊಪ್ಪ ತಾಲ್ಲೂಕಿನ ಕಮ್ಮರಡಿ ಸರ್ಕಾರಿ ಪ್ರೌಢಶಾಲೆ, ಮಧ್ಯಾಹ್ನ ೨.೩೦ಕ್ಕೆ ಕೊಪ್ಪದ ಜೆಎಂಜೆ ಆಟದ ಮೈದಾನ (ಬಸ್ ನಿಲ್ದಾಣ ಹಿಂಭಾಗ) ಆಯ್ಕೆ ಪ್ರಕ್ರಿಯೆಗಳು ನಡೆಯಲಿವೆ.

ಆಯ್ಕೆಯ ಸಮಯದಲ್ಲಿ ಜನ್ಮ ದಿನಾಂಕ ಪ್ರಮಾಣಪತ್ರ, ಕ್ರೀಡಾ ಸಾಧನೆ ಬಗ್ಗೆ ದಾಖಲೆಗಳನ್ನು ಹಾಜರುಪಡಿಸಬೇಕು. ಹೆಚ್ಚಿನ ವಿವರಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕರನ್ನು ಖುದ್ದಾಗಿ ಅಥವಾ ದೂರವಾಣಿ (೦೮೨೬೨-೨೯೫೭೨೪) ಮೂಲಕ ಹಾಗೂ ಆಯಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿಗಳನ್ನು ಸಂಪರ್ಕಿಸಬಹುದು. ಆಯ್ಕೆಯಲ್ಲಿ ಬಾಲಕ, ಬಾಲಕಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.

Selection for sports schools across the district for 11 days from January 28

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...