Home Crime News ಜಲಪಾತದ ಬಳಿ ಸೆಲ್ಫಿ – ಬಿ.ಇ ವಿದ್ಯಾರ್ಥಿ ಸಾವು
Crime NewschikamagalurHomeLatest Newsnamma chikmagalur

ಜಲಪಾತದ ಬಳಿ ಸೆಲ್ಫಿ – ಬಿ.ಇ ವಿದ್ಯಾರ್ಥಿ ಸಾವು

Share
Share

ಚಿಕ್ಕಮಗಳೂರು: ಜಲಪಾತದ ಬಳಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವಾಗ ಕಾಲು ಜಾರಿ ಬಿದ್ದು ಬಿ.ಇ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಸಮೀಪದ ಕಾಮೇನಹಳ್ಳಿ ಜಲಪಾತದ (Kamenahalli Falls) ಬಳಿ ನಡೆದಿದೆ.

ಮೃತನನ್ನ ವರುಣ್ ದೇಸಾಯಿ (19) ಎಂದು ಗುರುತಿಸಲಾಗಿದೆ. ಮೂಲತಃ ಬೆಳಗಾವಿ ಮೂಲದ ವರುಣ್ ಚಿಕ್ಕಮಗಳೂರು ನಗರದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೊದಲ ವರ್ಷದ ಬಿಇ (B.E) ಓದುತ್ತಿದ್ದ. ಶುಕ್ರವಾರ ಸಂಜೆ ಐವರು ಸ್ನೇಹಿತರ ಜೊತೆ ಮೂರು ಬೈಕಿನಲ್ಲಿ ಕಾಮೇನಹಳ್ಳಿ ಜಲಪಾತದ ಬಳಿ ಹೋಗಿದ್ದ.

ಈ ವೇಳೆ ಜಲಪಾತದ ಪ್ರದೇಶದ ಅರಿವಿಲ್ಲದೆ ಜಲಪಾತದ ಬಳಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವಾಗ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾನೆ.

ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳಿಯರು ರಾತ್ರಿವರೆಗೂ ಮೃತದೇಹಕ್ಕಾಗಿ ಶೋಧ ನಡೆಸಿದ್ದಾರೆ. ಆದರೆ ಮೃತದೇಹ ಪತ್ತೆಯಾಗಿಲ್ಲ. ಇಂದು ಬೆಳಗ್ಗೆ ವರುಣ್ ಮೃತದೇಹ ಪತ್ತೆಯಾಗಿದೆ.

ಘಟನೆ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಹಾಗೂ ಸ್ಥಳೀಯರು ಬೇರೆ ಊರಿನಿಂದ ಓದಲು ಬರುವ ವಿದ್ಯಾರ್ಥಿಗಳು ಪರಿಚಿಯವಿಲ್ಲದ ಪ್ರದೇಶ, ನೀರು, ಜಲಪಾತ, ಗುಡ್ಡದಂತಹ ಪ್ರದೇಶಗಳ ಬಳಿ ಹೋಗುವಾಗ ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡಿದ್ದಾರೆ.

Selfie near waterfall – B.E student dies

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...