Home namma chikmagalur chikamagalur ಹಿರಿಯ ನಾಗರಿಕರಿಗೆ 3.12 ಲಕ್ಷ ರೂ ವಂಚನೆ
chikamagalurCrime NewsHomeLatest Newsnamma chikmagalur

ಹಿರಿಯ ನಾಗರಿಕರಿಗೆ 3.12 ಲಕ್ಷ ರೂ ವಂಚನೆ

Share
Share

ಚಿಕ್ಕಮಗಳೂರು: ಸೈಬರ್ ಕ್ರಿಮಿನಲ್‌ಗಳ ಜಾಲಕ್ಕೆ ಸಿಲುಕಿ ಹಿರಿಯ ನಾಗರಿಕರೊಬ್ಬರು ಬರೋಬ್ಬರಿ 3.12 ಲಕ್ಷ ಕಳೆದುಕೊಂಡಿದ್ದಾರೆ. ನಗರದಲ್ಲಿ ವಾಸವಾಗಿರುವ 62 ವರ್ಷದ ವೆಂಕಟೇಶ್ ಇತ್ತೀಚೆಗೆ ಅವರ ಮೊಬೈಲ್‌ಗೆ ಬಂದಿದ್ದ ಒಂದು ಅಪರಿಚಿತ ಎಪಿಕೆ (APK) ಫೈಲ್ ಲಿಂಕ್ ಅನ್ನು ಅವರು ಅಜಾಗರೂಕತೆಯಿಂದ ಕ್ಲಿಕ್ ಮಾಡಿದ್ದರು.

ಈ ಒಂದು ಸಣ್ಣ ತಪ್ಪನ್ನೇ ಕಾಯುತ್ತಿದ್ದ ಖದೀಮರು, ಅವರ ಫೋನ್ನಲ್ಲಿದ್ದ ಡೇಟಾವನ್ನು ಅಕ್ರಮವಾಗಿ ಪ್ರವೇಶಿಸಿ ಕೆನರಾ ಬ್ಯಾಂಕ್ ಉಳಿತಾಯ ಖಾತೆಯಲ್ಲಿದ್ದ ಹಣವನ್ನು ಕ್ಷಣಾರ್ಧದಲ್ಲಿ ವರ್ಗಾಯಿಸಿಕೊಂಡಿದ್ದಾರೆ. ಬ್ಯಾಂಕ್‌ನಿಂದ ಹಣ ಕಡಿತವಾದ ಸಂದೇಶಗಳು ಬಂದಾಗ ಮಾತ್ರ ವೆಂಕಟೇಶ್ ಅವರಿಗೆ ತಾವು ವಂಚನೆಗೆ ಒಳಗಾಗಿರುವುದು ಅರಿವಿಗೆ ಬಂದಿದೆ.

ಈ ಕುರಿತು ಬ್ಯಾಂಕ್ ಕಸ್ಟಮರ್ ಕೇರ್ ಸಂಪರ್ಕಿಸಿದಾಗ, ಮಾಲ್‌ವೇರ್ ಮೂಲಕ ಡೇಟಾ ಕಳವು ಮಾಡಿ ಹಣ ದೋಚಿರುವ ಅಂಶ ದೃಢಪಟ್ಟಿದೆ. ಸದ್ಯ ಈ ಗಂಭೀರ ಪ್ರಕರಣದ ಕುರಿತು ಚಿಕ್ಕಮಗಳೂರು ನಗರದ ಸೈಬ‌ರ್ ಕ್ರೈಂ (ಸೆನ್) ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ವಂಚಕರ ಪತ್ತೆಗಾಗಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

Senior citizens cheated of Rs 3.12 lakh

Share

Leave a comment

Leave a Reply

Your email address will not be published. Required fields are marked *

Don't Miss

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ-ಜಿಲ್ಲಾಧಿಕಾರಿ

ಚಿಕ್ಕಮಗಳೂರು: ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಇದೇ ಮಾರ್ಚ್ ೧೮ ರಿಂದ ಪ್ರಾರಂಭವಾಗಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ತಿಳಿಸಿದರು. ಜಿ.ಪಂ.ನ ಅಬ್ದುಲ್...

ಜಿಲ್ಲೆಯಲ್ಲಿ ಗೃಹಬಳಕೆ ಸಿಲಿಂಡರ್‌ಗೆ ಕೊರತೆ ಇಲ್ಲ

ಚಿಕ್ಕಮಗಳೂರು, ಮಾ.೧೩: ಜಿಲ್ಲೆಯಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿರುವುದನ್ನು ದೃಢಪಡಿಸಿ ಎಂದಿನಂತೆ ಎಲ್‌ಪಿಜಿ ವಿತರಕರು ಗ್ರಾಹಕರ ಮನೆಬಾಗಿಲಿಗೆ ಸರಬರಾಜು ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯಲ್ಲಿ...

Related Articles

ವಿದ್ಯುತ್ ಸ್ಪರ್ಶಕ್ಕೆ ಯುವಕನ ಧಾರುಣ ಸಾವು

ಅಜ್ಜಂಪುರ: ವಿದ್ಯುತ್ ಸ್ಪರ್ಶದಿಂದ ಪ್ರವೀಣ್ ಎಂಬ ಯುವಕ ಮೃತಪಟ್ಟಿದ್ದಾನೆ ಸೊಕ್ಕೆ ಪರಮೇಶಣ್ಣ ಅವರ ಮಗ. ಹೆಬ್ಬೂರು...

ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಮನಸೋಇಚ್ಛೆ ಹಲ್ಲೆ

ಮೂಡಿಗೆರೆ:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದಲ್ಲಿರುವ ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ...

ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ 25ಕ್ಕೂ ಹೆಚ್ಚುಕಡೆ ಬೆಂಕಿ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು  ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ...

3.50 ಕೋಟಿ ರೂ ವೆಚ್ಚದ ವಿವಿಧ ರಸ್ತೆಗಳ ಲೋಕಾರ್ಪಣೆ

ಚಿಕ್ಕಮಗಳೂರು:  ಬಡವರ ಬಗ್ಗೆ ಕಾಳಜಿ ಇಲ್ಲದ ಕೇಂದ್ರ ಸರ್ಕಾರ ಧರ್ಮ ಧರ್ಮಗಳ ಮಧ್ಯೆ ವಿಷಬೀಜ ಬಿತ್ತಿ...