Home Latest News ಕಳಚಿದ ಹಿರಿಯ ಕಮ್ಯುನಿಷ್ಟ್ ಕೊಂಡಿ : ಕಾರ್ಮಿಕ ಮುಖಂಡ ಗುಣಶೇಖರನ್ ನಿಧನ
Latest News

ಕಳಚಿದ ಹಿರಿಯ ಕಮ್ಯುನಿಷ್ಟ್ ಕೊಂಡಿ : ಕಾರ್ಮಿಕ ಮುಖಂಡ ಗುಣಶೇಖರನ್ ನಿಧನ

Share
Share

ಚಿಕ್ಕಮಗಳೂರು : ಕಮ್ಯುನಿಸ್ಟ್ ಪಕ್ಷ ಹಾಗೂ ಕಾರ್ಮಿಕ ಮುಖಂಡ ಕೆ.ಗುಣಶೇಖರನ್ (72) ನಿಧನರಾಗಿದ್ದಾರೆ. ಹಲವು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರ ನಿಧನದಿಂದ ಕಾರ್ಮಿಕ ವರ್ಗಕ್ಕೆ ತುಂಬಲಾರದ ನಷ್ಟವಾಗಿದೆ.
ಕೆ.ಗುಣಶೇಖರನ್ ತಂದೆ ಕೇಶವ ಮೇಸ್ತ್ರಿ 60 ರ ದಶಕದಲ್ಲಿ ತೋಟಕಾರ್ಮಿಕರ ಸಂಘಟನೆ ಪ್ರಾರಂಭಿಸಲು ಎಂ.ಸಿ.ನರಸಿಂಹನ್ ಜೊತೆ ಗೂಡಿದವರು ತಂದೆಯಂತೆ ಮಗನು ಸಂಘಟನೆ ಜೊತೆ ಜೊತೆಯಲ್ಲಿ ಬೆಳೆದವರು .

ಸಕಲೇಶಪುರದ ಕಾಡುಮನೆ ಎಸ್ಟೇಟ್ ನಲ್ಲಿ ಮಂಡಲ ಪಂಚಾಯತಿ ಉಪಾಧ್ಯಕ್ಷರಾಗಿ ನಂತರ ಚಿಕ್ಕಮಗಳೂರು ಜಿಲ್ಲೆಗೆ ಆಗಮಿಸಿ ತೋಟ ಕಾರ್ಮಿಕರ ಸಂಘಟನೆಯಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ಅಧ್ಯಕ್ಷರಾಗಿ ಪೂರ್ಣ ಅವಧಿ ಮುಖಂಡರಾಗಿ ಚಿಕ್ಕಮಗಳೂರು ಜಿಲ್ಲೆ ಅಷ್ಟೇ ಅಲ್ಲ ಹಾಸನ ಮತ್ತು ಕೊಡುಗು ಜಿಲ್ಲೆಯಲ್ಲಿ ಸಂಘಟನೆ ಕಟ್ಟಿದವರು.
ತೋಟ ಕಾರ್ಮಿಕರ ಜೊತೆಗೆ ರಬ್ಬರ್ ಕಾರ್ಮಿಕರನ್ನು ಸಂಘಟಿಸಿದವರು. ಕಮ್ಯೂನಿಸ್ಟ್‌ ಪಕ್ಷದ ರಾಜ್ಯ ಶಿಸ್ತು ಸಮಿತಿ ಸದಸ್ಯರಾಗಿ, ಕಾಫಿ ಬೋರ್ಡ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.
ಮಿತ ಭಾಷಿಯಾಗಿದ್ದ ಗುಣಶೇಖರನ್ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕಾರ್ಮಿಕರು ಗುಂಪು, ಗುಂಪಾಗಿ ಬರುತ್ತಿದ್ದರು. ಕಮ್ಯುನಿಸ್ಟ್ ಮುಖಂಡರು ಹಾಗೂ ವಿವಿಧ ಪಕ್ಷದ ಗಣ್ಯರು ಅಂತಿಮ ದರ್ಶನ ಪಡೆದರು.

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...