Home namma chikmagalur ಸೆ.24: ರೈತ ಸಂಘದ ಕಚೇರಿಯಲ್ಲಿ ಉಚಿತ ದಂತ-ನೇತ್ರ ಶಿಬಿರ
namma chikmagalurchikamagalurHomeLatest News

ಸೆ.24: ರೈತ ಸಂಘದ ಕಚೇರಿಯಲ್ಲಿ ಉಚಿತ ದಂತ-ನೇತ್ರ ಶಿಬಿರ

Share
Share

ಚಿಕ್ಕಮಗಳೂರು: ಕರ್ನಾಟಕ ರಾಜ್ಯ ರೈತ ಸಂಘ ತಾಲ್ಲೂಕು ಶಾಖೆ ಹೋರಾಟದೊಂದಿಗೆ ಸಾಮಾಜಿಕ ಸೇವಾ ಕಾರ್ಯ ಆರಂಭಿಸಲಾಗಿದ್ದು, ಇದರ ಭಾಗವಾಗಿ ಸೆ.೨೪ ರಂದು ಕೆ.ಎಂ ರಸ್ತೆಯ ತೇಗೂರು, ನಲ್ಲೂರು ಗೇಟ್ ಬಳಿ ಇರುವ ರೈತ ಸಂಘದ ಕಚೇರಿಯಲ್ಲಿ ಉಚಿತ ನೇತ್ರ ಮತ್ತು ದಂತ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ರೈತ ಸಂಘದ ತಾಲ್ಲೂಕು ಅಧ್ಯಕ್ಷ ವೈ.ಸಿ ಸುನಿಲ್ ಕುಮಾರ್ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಎಪಿಎಂಸಿ ಕಿಸಾನ್ ವರ್ತಕರ ಸಂಘ, ನೇಚರ್ ಕನ್ಸರ್‌ವೇಟಿವ್ ಟ್ರಸ್ಟ್ ಬಿಕ್ಕಿಮನೆ ಮತ್ತು ಪ್ರಸಾದ್ ನೇತ್ರಾಲಯ ಉಡುಪಿ ಇವರ ಸಂಯುಕ್ತಾಶ್ರಯದಲ್ಲಿ ಈ ಶಿಬಿರವನ್ನು ಏರ್ಪಡಿಸಲಾಗಿದೆ ಎಂದರು.
ಕಣ್ಣಿನ ಸಮೀಪ ದೃಷ್ಟಿ, ದೂರದೃಷ್ಟಿ, ರೆಟಿನಾ ಆರೋಗ್ಯ ಮತ್ತು ಕಾರ್ನಿಯಾ ಪೊರೆಯ ಆರೋಗ್ಯ, ಕಣ್ಣಿನಲ್ಲಿ ನೀರು ಸುರಿಯುವುದು, ಪಿಸಿರು ಬರುವುದು, ಕಣ್ಣು ಮೊಬ್ಬಾಗಿ ಕಾಣುವುದು ಮುಂತಾದ ಸಮಸ್ಯೆಗಳಿಗೆ ಪರೀಕ್ಷೆ ಮಾಡಿಸಿಕೊಂಡು ಅಂಧತ್ವ ನಿವಾರಣೆ ಮಾಡಿಕೊಳ್ಳುವಂತೆ ಮನವಿ ಮಾಡಿದರು.

೪೦ ವರ್ಷ ಮೇಲ್ಪಟ್ಟ ಎಲ್ಲರೂ ತಪ್ಪದೆ ನೇತ್ರ ತಪಾಸಣೆ ಮಾಡಿಸಿಕೊಳ್ಳುವುದು ಅಗತ್ಯವಾಗಿದ್ದು, ಈಗಾಗಲೇ ಕಣ್ಣಿನ ದೃಷ್ಟಿ ಸಮಸ್ಯೆಯಿಂದ ಬಳಲುತ್ತಿರುವವರು ತಪಾಸಣೆ ಮಾಡಿಸಿಕೊಂಡು ಅಗತ್ಯ ಇರುವವರಿಗೆ ಶಸ್ತ್ರಚಿಕಿತ್ಸೆಯನ್ನು ಮಾಡುವುದಾಗಿ ತಿಳಿಸಿದರು.
ಮದ್ಯಪಾನ ಮತ್ತು ತಂಬಾಕು ಸೇವನೆ ಮಾಡುವವರಲ್ಲಿ ಕಡಿಮೆ ರಕ್ತ ಚಲನೆ, ರಕ್ತನಾಳಗಳು ಸಂಕುಚಿತವಾಗುವ ಸಾಧ್ಯತೆ ಹೆಚ್ಚಾಗಿದ್ದು, ಅಂತಹವರು ಉಡುಪಿಯ ಪ್ರಸಾದ್ ನೇತ್ರಾಲಯದ ವೈದ್ಯರ ತಂಡ ಅತ್ಯಾಧುನಿಕ ತಂತ್ರಜ್ಞಾನದ ಸಲಕರಣೆಗಳೊಂದಿಗೆ ಆಗಮಿಸುತ್ತಿದೆ. ಇದರ ಸದುಪಯೋಗಪಡಿಸಿಕೊಳ್ಳುವಂತೆ ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಸಲಕರಣೆಗಳೊಂದಿಗೆ ಚಿಕ್ಕಮಗಳೂರಿನ ನೇಚರ್ ಕನ್ಸರ್‌ವೇಟಿವ್ ಟ್ರಸ್ಟ್‌ನ ಅಧ್ಯಕ್ಷರೂ, ದಂತ ವೈದ್ಯರೂ ಆದ ಡಾ. ಕೆ.ಸುಂದರಗೌಡ ಅವರ ತಂಡ ಆಗಮಿಸುತ್ತಿದ್ದು, ಹಲ್ಲಿನ ಆರೋಗ್ಯವನ್ನು ತಪಾಸಣೆ ಮಾಡಿ, ಹಲ್ಲುಗಳ ಸ್ವಚ್ಚತೆ ಮಾಡಿ ಮುಂದೆ ಹುಳುಕು ಹಲ್ಲು ಆಗದಂತೆ ಔಷದೋಪಚಾರ ನೀಡಲಿದೆ ಎಂದರು.

ಶಿಬಿರದಲ್ಲಿ ಭಾಗವಹಿಸುವವರು ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ, ಹಾಲಿ ವಾಸದ ವಿಳಾಸದ ದೃಢೀಕರಣ, ಮೊಬೈಲ್ ಸಂಖ್ಯೆ ನೀಡಬೇಕು. ನೇತ್ರ ಚಿಕಿತ್ಸೆಗೆ ಆಯ್ಕೆಯಾದವರಿಗೆ ಉಚಿತ ಊಟ, ವಸತಿ, ಸಾರಿಗೆ ವ್ಯವಸ್ಥೆಯೊಂದಿಗೆ ಉಡುಪಿಯ ಪ್ರಸಾದ್ ನೇತ್ರಾಲಯದಲ್ಲಿ ಉಚಿತ ಚಿಕಿತ್ಸೆ ನೀಡಿ ಲೆನ್ಸ್ ಅಳವಡಿಸಿ ಶಿಬಿರದ ಸ್ಥಳಕ್ಕೆ ಬಿಡಲಿದ್ದಾರೆ ಎಂದು ಹೇಳಿದರು.

ಈ ಶಿಬಿರದಲ್ಲಿ ರೈತರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ನೇತ್ರ ಮತ್ತು ದಂತದ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕೆಂದು ವಿನಂತಿಸಿದರು. ಪತ್ರಿಕಾಗೋಷ್ಠಿಯಲ್ಲಿ ಡಾ. ಕೆ. ಸುಂದರಗೌಡ, ಕೆ.ಕೆ ಕೃಷ್ಣೇಗೌಡ, ಆನಂದ್, ಹೊನ್ನೇಗೌಡ, ಚಂದ್ರಶೇಖರ್, ಪುನೀತ್, ನಜ್ಮಾ ಅಲಿ, ಅರುಣಾಕ್ಷಿ, ವೆಂಕಟೇಶ್, ಶ್ರೀಧರ್ ಉಪಸ್ಥಿತರಿದ್ದರು.

Sep. 24: Free dental and eye camp at the Farmers’ Association office

Share

Leave a comment

Leave a Reply

Your email address will not be published. Required fields are marked *

Don't Miss

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು ಜಾನುವಾರುಗಳು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರುವ ಘಟನೆ ನರಸಿಂಹರಾಜಪುರ ತಾಲೂಕಿನ ಗದ್ದೆಮನೆ ಕಾನೂರು ಗ್ರಾಮದಲ್ಲಿ ನಡೆದಿದೆ....

ಜಿಲ್ಲೆಯಲ್ಲಿ ಮಂತ್ರಿಯಾಗಲಿಲ್ಲ ರಗಳೆ ಬಿಟ್ಟಿಲ್ಲ

ಚಿಕ್ಕಮಗಳೂರು; ಮದುವೆ ಆಗಲಿಲ್ಲ, ಹುಚ್ಚು ಬಿಡಲಿಲ್ಲ ಎಂಬ ಸ್ಥಿತಿ ಮಂತ್ರಿ ಆಗಲಿಲ್ಲ, ಓಡಾಡುವುದು ತಪ್ಪಲಿಲ್ಲ.ಎಂಬ ದುಸ್ಥಿತಿ ಕಾಂಗ್ರೆಸ್ ಚುನಾಯಿತ ಪ್ರತಿನಿಧಿಗಳದ್ದು. ಜಿಲ್ಲೆಗೆ ಯಾವುದೇ ಕಾರಣಕ್ಕೂ ಮಂತ್ರಿಗಿರಿ ಸಿಗುವುದಿಲ್ಲ ಎಂಬುದಕ್ಕೆ ಕಾರಣ ನೀಡಿ...

Related Articles

ಪ್ರತ್ಯೇಕ ಭೀಕರ ರಸ್ತೆ ಅಪಘಾತ-9 ಕ್ಕೂ ಹೆಚ್ಚು ಮಂದಿ ಗಾಯ

ಚಿಕ್ಕಮಗಳೂರು:  ಜಿಲ್ಲೆಯ ವಿವಿಧೆಡೆ ಸಂಭವಿಸಿದ ಮೂರು ಪ್ರತ್ಯೇಕ ಭೀಕರ ರಸ್ತೆ ಅಪಘಾತಗಳಲ್ಲಿ ಶಾಲಾ ವಿದ್ಯಾರ್ಥಿನಿ ಹಾಗೂ...

ಆಗಸ್ಟ್ 21ರಿಂದ 25ರವರೆಗೆ ವಿಶ್ವ ಬಂಧುತ್ವದ ರಕ್ತದಾನ ಮಹಾ ಅಭಿಯಾನ

ಚಿಕ್ಕಮಗಳೂರು: ಬ್ರಹ್ಮಾಕುಮಾರೀಸ್ ಸಂಸ್ಥೆಯ ಪೂರ್ವ ಮುಖ್ಯ ಆಡಳಿತಾಧಿಕಾರಿಣಿ ರಾಜಯೋಗಿನಿ ಡಾ. ದಾದೀ ಪ್ರಕಾಶಮಣೀಜೀಯವರ 19ನೇ ಪುಣ್ಯಸ್ಮೃತಿ...

ಆಗಸ್ಟ್ 25ರಂದು ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಚಿಕ್ಕಮಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 25ರಂದು ರಾಜ್ಯದ...

ಸೆಪ್ಟೆಂಬರ್ 10ಕ್ಕೆ ಟಿ.ಡಿ. ರಾಜೇಗೌಡ-ಡಿ.ಎನ್. ಜೀವರಾಜ್ ಅಂತಿಮ ವಿಚಾರಣೆ

ಚಿಕ್ಕಮಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ...