Home namma chikmagalur chikamagalur ಸರಣಿ ಕಳ್ಳತನ ಪ್ರಕರಣ – ನಾಲ್ವರು ಅಂತರ-ಗ್ರಾಮ ಕಳ್ಳರ ಬಂಧನ
chikamagalurHomeLatest Newsnamma chikmagalur

ಸರಣಿ ಕಳ್ಳತನ ಪ್ರಕರಣ – ನಾಲ್ವರು ಅಂತರ-ಗ್ರಾಮ ಕಳ್ಳರ ಬಂಧನ

Share
Share

ಚಿಕ್ಕಮಗಳೂರು : ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಸರಣಿ ಕಳ್ಳತನ ಪ್ರಕರಣಗಳನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದೆ. ರೈತರ ಪಂಪ್‌ಸೆಟ್‌ಗಳಿಗೆ ಅಳವಡಿಸಲಾಗಿದ್ದ ಎಲೆಕ್ಟಿಕ್ ಮೋಟಾರ್ ಸ್ಟಾರ್ಟರ್ ಮತ್ತು ಕೇಬಲ್‌ಗಳನ್ನು ಕದಿಯುತ್ತಿದ್ದ ನಾಲ್ವರು ಅಂತರ-ಗ್ರಾಮ ಕಳ್ಳರನ್ನು ಪೊಲೀಸರು ಬಂಧಿಸಿದ್ದು, ಅವರಿಂದ ಕದ್ದ ಮಾಲು ಹಾಗೂ ಕೃತ್ಯಕ್ಕೆ ಬಳಸಿದ್ದ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಳವಾಡಿ, ಪಾಯಗೊಂಡನಹಳ್ಳಿ ಮತ್ತು ನಾಗರಹಳ್ಳಿ ಗ್ರಾಮಗಳಲ್ಲಿ ಇತ್ತೀಚೆಗೆ ಸರಣಿ ಕಳ್ಳತನಗಳು ವರದಿಯಾಗಿದ್ದವು. ಈ ಹಿನ್ನೆಲೆಯಲ್ಲಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು. ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಜಿತೇಂದ್ರ ಕುಮಾರ ದದ್ಮಾ ಐಪಿಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಜಯಕುಮಾರ ಹಾಗೂ ಚಿಕ್ಕಮಗಳೂರು ಉಪ ವಿಭಾಗದ ಪೊಲೀಸ್‌ ಉಪ ಅಧೀಕ್ಷಕರಾದ ಶ್ರೀ ನಾಗರಾಜ್ ರವರ ಮಾರ್ಗದರ್ಶನದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು.

ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಶೈಲಕುಮಾರ ಅವರ ನೇತೃತ್ವದಲ್ಲಿ ವಿಶೇಷ ತಂಡವು ವಿವಿಧ ಆಯಾಮಗಳಲ್ಲಿ ವೈಜ್ಞಾನಿಕ ತನಿಖೆ ನಡೆಸಿ ಆರೋಪಿಗಳನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದೆ. ಬಂಧಿತ ಆರೋಪಿಗಳನ್ನು ನವೀನ್ ಕುಮಾರ್ (34 ವರ್ಷ), ಸುನೀಲ್ (32 ವರ್ಷ), ಸುನೀಲ್ (33 ವರ್ಷ) ಮತ್ತು ಅನಿಲ್ (28 ವರ್ಷ) ಎಂದು ಗುರುತಿಸಲಾಗಿದೆ.

ಬಂಧಿತರಿಂದ ಸುಮಾರು 20,000 ರೂಪಾಯಿ ಬೆಲೆ ಬಾಳುವ 120 ಮೀಟರ್ ಉದ್ದದ ಕೇಬಲ್ ವೈರ್ ಹಾಗೂ 10,000 ರೂಪಾಯಿ ಮೌಲ್ಯದ ಮೋಟಾರ್ ಸ್ಟಾರ್ಟರ್ ಬಾಕ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಇದರೊಂದಿಗೆ ಕಳ್ಳತನದ ಕೃತ್ಯ ಎಸಗಲು ಆರೋಪಿಗಳು ಬಳಸುತ್ತಿದ್ದ 1,15,000 ರೂಪಾಯಿ ಮೌಲ್ಯದ ಮೂರು ಬೈಕ್‌ಗಳನ್ನು ಸಹ ಪೊಲೀಸರು ಜಪ್ತಿ ಮಾಡಿದ್ದಾರೆ.

ಬಂಧಿತ ನಾಲ್ಕೂ ಜನ ಆರೋಪಿಗಳನ್ನು ಘನ ನ್ಯಾಯಾಲಯದ ಆದೇಶದಂತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಅತ್ಯಂತ ಚುರುಕಾಗಿ ಕಾರ್ಯನಿರ್ವಹಿಸಿ, ಕಳ್ಳತನ ಪ್ರಕರಣಗಳನ್ನು ಶೀಘ್ರವಾಗಿ ಭೇದಿಸಿದ ಅಪರಾಧ ವಿಭಾಗದ ತನಿಖಾ ತಂಡದ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕರ್ತವ್ಯ ನಿಷ್ಠೆಯನ್ನು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಅಧೀಕ್ಷಕರು ಶ್ಲಾಘಿಸಿದ್ದಾರೆ.

Serial theft case – Four inter-village thieves arrested

Share

Leave a comment

Leave a Reply

Your email address will not be published. Required fields are marked *

Don't Miss

ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿದ ರೈತರ ಸ್ಥಿತಿ ಅವಲೋಕಿಸಿದ ಸಚಿವ ಜಾರ್ಜ್

ಚಿಕ್ಕಮಗಳೂರು: ಸಕಾಲದಲ್ಲಿ ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿರುವ ರೈತರು, ಒಣಗಿ ನಿಂತಿರುವ ಭೂಮಿ, ಮಳೆಯ ನಿರೀಕ್ಷೆಯಲ್ಲಿ ಬಿತ್ತನೆ ಮಾಡಿದ್ದ ಬೀಜಗಳು ಮೊಳಕೆ ಒಡೆಯದೆ ಬಿಸಿಲಿನ ಝಳಕ್ಕೆ ಸಿಲುಕಿ ಸುಟ್ಟುಹೋಗಿರುವುದನ್ನು ಜಿಲ್ಲಾ ಉಸ್ತುವಾರಿ ಸಚಿವ...

ಸಚಿವ ಕೆ.ಜೆ. ಜಾರ್ಜ್ ಬೆಂಗಾವಲು ವಾಹನ ಅಪಘಾತ

ಚಿಕ್ಕಮಗಳೂರು : ಅಜ್ಜಂಪುರ ಜಿಲ್ಲೆಯ ಬಯಲುಸೀಮೆ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ವೀಕ್ಷಣೆಗಾಗಿ ಪ್ರವಾಸದಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರ ಬೆಂಗಾವಲು (Escort) ವಾಹನ ಅಪಘಾತಕ್ಕೀಡಾದ ಘಟನೆ ಅಜ್ಜಂಪುರ ಪಟ್ಟಣದಲ್ಲಿ...

Related Articles

ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆ ಮಲೆನಾಡಿಗೆ ಕಂಟಕ

ಚಿಕ್ಕಮಗಳೂರು: ಪಶ್ಚಿಮ ಘಟ್ಟ ವ್ಯಾಪ್ತಿಯ ರಾಜ್ಯದ ೧೦ ಜಿಲ್ಲೆಗಳ ೨೦ ಸಾವಿರಕ್ಕೂ ಅಧಿಕ ಚದರ ಕಿಲೋ...

ಅಂಗಾಂಗ ದಾನ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿ

ಚಿಕ್ಕಮಗಳೂರು: ಅಂಗಾಂಗ ದಾನ ಮಾಡಿ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿಯಾಗಿದೆ ಎಂದು ನಗರಸಭೆ ಪೌರಾಯುಕ್ತ...

ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು. ಕೊಪ್ಪ...

ಫಸಲ್ ಬಿಮಾ ನೋಂದಣಿ ಹೆಚ್ಚಿಸಲು ಜಿಲ್ಲಾಧಿಕಾರಿ ನಿರ್ದೇಶನ

ಚಿಕ್ಕಮಗಳೂರು: ಫಸಲ್ ಬಿಮಾ ಯೋಜನೆಯಡಿ ನೋಂದಣಿ ಕಡಿಮೆಯಾಗಿದ್ದು, ತಕ್ಷಣ ಅಗತ್ಯ ಪ್ರಚಾರ ಕೈಗೊಂಡು ರೈತರ ಮನವೊಲಿಸಿ...