Home namma chikmagalur chikamagalur ಅಂತರಘಟ್ಟೆ ಗ್ರಾಮದಲ್ಲಿ ಸರಣಿ ಕಳ್ಳತನ
chikamagalurHomeLatest Newsnamma chikmagalur

ಅಂತರಘಟ್ಟೆ ಗ್ರಾಮದಲ್ಲಿ ಸರಣಿ ಕಳ್ಳತನ

Share
Share

ಅಜ್ಜಂಪುರ:  ತಾಲೂಕಿನ ಅಂತರಘಟ್ಟೆ ಗ್ರಾಮದಲ್ಲಿ ಒಂದೇ ರಾತ್ರಿ ಸರಣಿ ಕಳ್ಳತನ ನಡೆದಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ. ದುರ್ಗಾಂಬಾದೇವಿ ಸುಕ್ಷೇತ್ರವಾಗಿರುವ ಈ ಗ್ರಾಮದಲ್ಲಿ ರಾತ್ರಿ ಖದೀಮರು ಏಳು ಮನೆಗಳ ಬೀಗ ಮುರಿದು ನಗದು ಹಾಗೂ ಚಿನ್ನಾಭರಣಗಳನ್ನು ದೋಚಿದ್ದಾರೆ.

ಗ್ರಾಮದ ಶಂಕರನಾರಾಯಣ ಅವರ ಮನೆಯ ಗೇಟಿನ ಬೀಗ ಮುರಿದು ಒಳನುಗ್ಗಿದ ಕಳ್ಳರು, ಸುಮಾರು 50 ಸಾವಿರ ರೂಪಾಯಿ ನಗದು ಮತ್ತು ಒಂದು ಜೊತೆ ಚಿನ್ನದ ಕಿವಿ ಓಲೆಯನ್ನು ಕಳ್ಳತನ ಮಾಡಿದ್ದಾರೆ.

ಇದೇ ರೀತಿ ಕುಬೇರಪ್ಪ ಎಂಬುವವರ ಮನೆಯಿಂದ 5 ಸಾವಿರ ರೂಪಾಯಿಗಳನ್ನು ಕಳವು ಮಾಡಲಾಗಿದೆ. ಉಳಿದ ಐದು ಮನೆಗಳಲ್ಲೂ ಬೀಗ ಮುರಿಯಲಾಗಿದ್ದರೂ, ಅಲ್ಲಿ ಯಾವುದೇ ಬೆಲೆಬಾಳುವ ವಸ್ತುಗಳು ಸಿಗದ ಕಾರಣ ಕಳ್ಳರು ಬರಿಗೈಲಿ ವಾಪಸ್ಸಾಗಿದ್ದಾರೆ.

ಮನೆಯವರು ಊರಿನಲ್ಲಿ ಇಲ್ಲದ ಸಮಯವನ್ನು ಹೊಂಚು ಹಾಕಿ ಈ ಕೃತ್ಯ ಎಸಗಲಾಗಿದೆ. ಅಂತರಘಟ್ಟೆ ಗ್ರಾಮದಲ್ಲಿ ಇಂತಹ ಸರಣಿ ಕಳ್ಳತನದ ಪ್ರಕರಣ ಇದೇ ಮೊದಲು ಎನ್ನಲಾಗಿದ್ದು, ಗ್ರಾಮದ ಹಿರಿಯರು ಈ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಗ್ರಾಮದಲ್ಲಿ ಪೊಲೀಸ್ ಹೊರಠಾಣೆ ಇದ್ದರೂ ಇಷ್ಟು ದೊಡ್ಡ ಮಟ್ಟದ ಕಳ್ಳತನ ನಡೆದಿರುವುದು ನಿವಾಸಿಗಳಲ್ಲಿ ಭಯ ಹುಟ್ಟಿಸಿದೆ.

ಇಲ್ಲಿನ ದುರ್ಗಾಂಬಾ ದೇವಾಲಯದ ಹುಂಡಿಗಳಲ್ಲಿ ಲಕ್ಷಾಂತರ ರೂಪಾಯಿ ಹಣವಿದ್ದು, ಇತ್ತೀಚೆಗಷ್ಟೇ ಜಾತ್ರೆ ನಡೆದಿದ್ದರಿಂದ ಹುಂಡಿಗಳು ತುಂಬಿವೆ. ಹೀಗಾಗಿ ಮುಜರಾಯಿ ಇಲಾಖೆ ಹಾಗೂ ಪೊಲೀಸರು ದೇವಾಲಯಕ್ಕೆ ಸೂಕ್ತ ಬಂದೋಬಸ್ತ್ ಒದಗಿಸಬೇಕು. ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Serial theft in Antaraghatte village

Share

Leave a comment

Leave a Reply

Your email address will not be published. Required fields are marked *

Don't Miss

ವೈದ್ಯರ ಬೇಜವಾಬ್ದಾರಿತನಕ್ಕೆ ಮೂರು ತಿಂಗಳ ಹಸುಗೂಸು ಸಾವು

ಚಿಕ್ಕಮಗಳೂರು: ವೈದ್ಯರ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯದ ಆರೋಪಕ್ಕೆ ಮೂರು ತಿಂಗಳ ಹಸುಗೂಸೊಂದು ಬಲಿಯಾಗಿರುವ ಘಟನೆ ಚಿಕ್ಕಮಗಳೂರು ನಗರದ ಸರ್ಕಾರಿ ಜಿಲ್ಲಾ ಹೆರಿಗೆ ಆಸ್ಪತ್ರೆಯಲ್ಲಿ ನಡೆದಿದೆ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ನೀಡದೆ...

ಜಿಲ್ಲೆಯಾದ್ಯಂತ ಮೊಹರಂ ಹಬ್ಬ ಆಚರಣೆ

ಚಿಕ್ಕಮಗಳೂರು: ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಮುಸ್ಲಿಮರು ಜಿಲ್ಲೆಯಾದ್ಯಂತ ಶುಕ್ರವಾರ ಶ್ರದ್ದಾಭಕ್ತಿಯಿಂದ ಆಚರಿಸಿದರು. ಕಳೆದ ಎರಡು ದಿನಗಳಿಂದ ಉಪವಾಸವಿದ್ದ ಭಕ್ತರು ನಗರದ ಬಡಾವಣೆಗಳ ವಿವಿಧ ಮಸೀದಿಗಳಿಗೆ ಬೆಳಿಗ್ಗೆಯೇ ತೆರಳಿ...

Related Articles

ನೀವು ಬೆಳಿಗ್ಗೆ ಕಸ ಗುಡಿಸದಿದ್ದರೆ ದೇಶವೇ ನಡೆಯಲ್ಲ ಧೈರ್ಯವಾಗಿ ಹಕ್ಕು ಕೇಳಿ

ಚಿಕ್ಕಮಗಳೂರು:  “ನೀವು ಬೆಳಿಗ್ಗೆ ಎದ್ದು ಕಸ ಗುಡಿಸದಿದ್ದರೆ ಈ ದೇಶದ ಯಾವುದೇ ನಗರ, ಪಟ್ಟಣ, ಊರುಗಳು...

ಸರ್ಕಾರಿ ಕಚೇರಿಗಳಲ್ಲಿ ಇ-ಆಫೀಸ್ ಮೂಲಕವೇ ವ್ಯವಹರಿಸಿ

ಚಿಕ್ಕಮಗಳೂರು: ಪ್ರತೀ ಕಚೇರಿಗಳಲ್ಲೂ ಇ-ಆಫೀಸ್ ಮೂಲಕವೇ ಪತ್ರ ಹಾಗೂ ಕಡತಗಳನ್ನು ನಿರ್ವಹಿಸುವಂತೆ ಸರ್ಕಾರದ ಅಪರ ಮುಖ್ಯ...

ಕುಂದೂರು ಫಾರೆಸ್ಟ್‌ನ ಹೆಬ್ಬಾಳ ಗದ್ದೆಯಲ್ಲಿ ಗಂಡು ಕಾಡಾನೆ ಸಾವು

​ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ಒಂಟಿ ಗಂಡು ಕಾಡಾನೆಯೊಂದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ...

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು....