ಚಿಕ್ಕಮಗಳೂರು: ರಾಜ್ಯ ಸರ್ಕಾರ, ಬಿಡಿಎ, ಸಿಡಿಎ, ಮೂಡ, ಗೃಹ ಮಂಡಳಿಗಳು ನೀಡಿರುವ ನಿವೇಶನಗಳಿಗಿಂತ ಹೆಚ್ಚಿನ ನಿವೇಶನಗಳನ್ನು ಅದೂ ಕಡಿಮೆ ಬೆಲೆಗೆ ಗೃಹ ನಿರ್ಮಾಣ ಸಹಕಾರ ಸಂಘಗಳು ರಾಜ್ಯಾದ್ಯಂತ ಸಾರ್ವಜನಿಕರಿಗೆ ನೀಡಿವೆ ಎಂದು ರಾಜ್ಯ ಸಹಕಾರಿ ವಸತಿ ಮಹಾಮಂಡಲದ ಅಧ್ಯಕ್ಷ ಎಸ್.ಟಿ. ಸೋಮಶೇಖರ್ ಹೇಳಿದರು.
ನಗರ ಗೃಹ ನಿರ್ಮಾಣ ಸಹಕಾರ ಸಂಘ ಶತಮಾನೋತ್ಸವದ ನೆನಪಿಗಾಗಿ ನಿರ್ಮಿಸಲಿರುವ ನೂತನ ಕಟ್ಟಡಕ್ಕೆ ನಗರದ ಡಿಸಿಸಿ ಬ್ಯಾಂಕ್ ಭವನದಲ್ಲಿ ಸೋಮವಾರ ಶಂಕುಸ್ಥಾಪನೆ ನೆರವೇರಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರಕ್ಕಿಂತ ಹೆಚ್ಚಿನ ನಿವೇಶನಗಳನ್ನು ಸಾರ್ವಜನಿಕರಿಗೆ ನೀಡಿರುವ ಬಹಳ? ಗೃಹ ನಿರ್ಮಾಣ ಸಹಕಾರ ಸಂಘಗಳು ರಾಜ್ಯದಲ್ಲಿ ಇನ್ನೂ ಜೀವಂತವಾಗಿವೆ, ಅತ್ಯಂತ ಕ?ಕರ ಪರಿಸ್ಥಿತಿಯಲ್ಲೂ ಅವು ಕಾರ್ಯನಿರ್ವಹಿಸುತ್ತಿವೆ, ಸಹಕಾರ ಸಂಘಗಳ ಅಭಿವೃದ್ಧಿ ಇತ್ತೀಚಿನ ದಿನಗಳಲ್ಲಿ ಕುಂಠಿತವಾಗುತ್ತಿದೆ ಎಂದರು. ಸಹಕಾರ ಸಂಘಗಳು ಉಳಿದು ಬೆಳೆಯುವುದು ಕ?ವಾಗಿರುವ ಇಂದಿನ ಸನ್ನಿವೇಶದಲ್ಲಿ ಚಿಕ್ಕಮಗಳೂರಿನ ಗೃಹ ನಿರ್ಮಾಣ ಸಹಕಾರ ಸಂಘ ೧೦೦ ವ?ಗಳನ್ನು ಕಾಣುತ್ತಿರುವುದು ಶ್ಲಾಘನೀಯ ಎಂದರು.
ಡಿಸಿಸಿ ಬ್ಯಾಂಕ್ ಅಭಿವೃದ್ಧಿಗೆ ಮಾಜಿ ಶಾಸಕ ಎಸ್.ಎಲ್. ಧರ್ಮೇಗೌಡ ಅವರ ಕೊಡುಗೆ ಅಪಾರವಾಗಿದೆ ಎಂದ ಅವರು ಶಾಸಕ ಎಚ್.ಡಿ. ತಮ್ಮಯ್ಯ, ವಿಧಾನ ಪರಿ?ತ್ ಸದಸ್ಯ ಎಸ್.ಎಲ್. ಬೋಜೇಗೌಡ ಮತ್ತು ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಹೆಚ್.ಎಂ. ನಾರಾಯಣ ಅವರ ಕಾರ್ಯ ಚಟುವಟಿಕೆಗಳನ್ನು ಪ್ರಶಂಶಿಸಿದರು.
ಶಾಸಕ ಎಚ್.ಡಿ. ತಮ್ಮಯ್ಯ ಮಾತನಾಡಿ ನಗರದಲ್ಲಿ ಸಣ್ಣದಾಗಿ ಆರಂಭಗೊಂಡ ಗೃಹ ನಿರ್ಮಾಣ ಸಹಕಾರ ಸಂಘ ನೂರು ವ?ಗಳ ಅವಧಿಯಲ್ಲಿ ಬಹಳ? ನಿವೇಶನ, ಮನೆ, ಸಾಲ ನೀಡುವ ಮೂಲಕ ಸಾವಿರಾರು ಜನರಿಗೆ ಬದುಕನ್ನು ಕಟ್ಟಿಕೊಟ್ಟಿದೆ ಎಂದರು.
ವಿಧಾನ ಪರಿ?ತ್ ಸದಸ್ಯ ಸಿ.ಟಿ. ರವಿ ಮಾತನಾಡಿ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಎಲ್ಲ ರೀತಿಯಲ್ಲೂ ಸಹಕರಿಸುವ ಭರವಸೆ ನೀಡಿದರು.
ವಿಧಾನಪರಿ?ತ್ ಸದಸ್ಯ ಎಸ್.ಎಲ್. ಭೋಜೇಗೌಡ ಮಾತನಾಡಿ ಸಹಕಾರ ಸಂಘಗಳ ಮೂಲಕ ಇಂದು ಕೃಷಿಕರು ಮತ್ತು ಕೃಷಿ ಕ್ಷೇತ್ರ ಉಳಿಯಬೇಕಾಗಿದೆ, ಸಹಕಾರ ಸಂಘಗಳ ಮೂಲಕ ಕೇವಲ ಶೇ ೨೭ರ? ಕೃಷಿಕರಿಗೆ ಮಾತ್ರ ಸಾಲ ನೀಡಲು ಸಾಧ್ಯವಾಗಿದೆ ಉಳಿದ ಶೇ ೭೩ ರ? ಕೃಷಿಕರಿಗೆ ಸಹಾಯ ಹಸ್ತ ಚಾಚಲು ಸಾಧ್ಯವಾಗಿಲ್ಲ ಎಂದು ವಿ?ದಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಹೆಚ್.ಎಂ. ನಾರಾಯಣ ಗೃಹ ನಿರ್ಮಾಣ ಸಹಕಾರ ಸಂಘ ಬೆಳೆಯಲು ಮತ್ತು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು.
ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮದ ಅಧ್ಯಕ್ಷ ಬಿ.ಎಚ್. ಹರೀಶ್, ವಿಧಾನಪರಿ?ತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ, ಜಿಪಂ ಮಾಜಿ ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ, ನಗರ ಸಭೆ ಅಧ್ಯಕ್ಷೆ ಶೀಲಾದಿನೇಶ್, ಸದಸ್ಯೆ ರೂಪಾಕುಮಾರ್, ಸಿಡಿಎ ಅಧ್ಯಕ್ಷ ಎಚ್.ಪಿ. ಮಂಜೇಗೌಡ, ಮಲೆನಾಡು ವಿದ್ಯಾ ಸಂಸ್ಥೆಯ ಅಧ್ಯಕ್ಷ ಎನ್, ಕೇಶವಮೂರ್ತಿ, ಉದ್ಯಮಿ ಡಾ ಅಪ್ಸರ್ ಹಿಂದೂಸ್ತಾನಿ, ಸಂಘದ ನಿರ್ದೇಶಕ ಎಲ್.ಕೆ. ವೇಣುಗೋಪಾಲ್, ಸುಮಾ ಪ್ರಸಾದ್. ಕನ್ನಡಸೇನೆ ಅಧ್ಯಕ್ಷ ಪಿ.ಸಿ. ರಾಜೇಗೌಡ ಉಪಸ್ಥಿತರಿದ್ದರು.
Service to the public by the Housing Cooperative Society
Leave a comment