Home namma chikmagalur chikamagalur ಸಾಕು ನಾಯಿ ದಾಳಿಯಿಂದ ಏಳು ವರ್ಷದ ಮಗುವಿಗೆ ಗಾಯ
chikamagalurCrime NewsHomeLatest Newsnamma chikmagalur

ಸಾಕು ನಾಯಿ ದಾಳಿಯಿಂದ ಏಳು ವರ್ಷದ ಮಗುವಿಗೆ ಗಾಯ

Share
Share

ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಕೆ. ಕೆಳಗೂರು ಗ್ರಾಮದ ಕಾಫಿ ಎಸ್ಟೇಟ್ ಒಂದರಲ್ಲಿ ಸಾಕು ನಾಯಿಯೊಂದು ಏಕಾಏಕಿ ಬಾಲಕನ ಮೇಲೆ ದಾಳಿ ನಡೆಸಿದ್ದು, ಏಳು ವರ್ಷದ ಮಗು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದೆ.

ತಮಿಳುನಾಡು ಮೂಲದ ಕಾರ್ಮಿಕ ದಂಪತಿಗಳು ಕೆಲಸ ಅರಸಿ ಕಳಸ ತಾಲೂಕಿನ ಕೆ. ಕೆಳಗೂರು ಗ್ರಾಮದ ಕಾಫಿ ಎಸ್ಟೇಟ್‌ಗೆ ಬಂದಿದ್ದರು. ಏಳು ವರ್ಷದ ಮಗ ಮದನ್, ಎಸ್ಟೇಟ್ ಆವರಣದಲ್ಲಿದ್ದಾಗ ಅಲ್ಲೇ ಇದ್ದ ಸಾಕು ನಾಯಿಯೊಂದು ಹಠಾತ್ತನೆ ದಾಳಿ ಮಾಡಿದೆ. ನಾಯಿ ಬಾಲಕನ ಮೇಲೆರಗಿ ಕುತ್ತಿಗೆ ಮತ್ತು ಕಾಲಿನ ಭಾಗವನ್ನು ಬಲವಾಗಿ ಕಚ್ಚಿ ಗಂಭೀರವಾಗಿ ಗಾಯಗೊಳಿಸಿದೆ.

ನಾಯಿ ದಾಳಿಯಿಂದ ತೀವ್ರ ರಕ್ತಸ್ರಾವವಾಗಿ ಬಾಲಕನ ಸ್ಥಿತಿ ಚಿಂತಾಜನಕವಾಗಿದೆ. ತಕ್ಷಣವೇ ಮದನ್‌ನನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಗಾಯದ ತೀವ್ರತೆ ಹೆಚ್ಚಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಮಂಗಳೂರಿನಲ್ಲಿ ಬಾಲಕನಿಗೆ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಕಳಸ ಪೊಲೀಸ್‌ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರ್ಮಿಕರು ಕೆಲಸ ಮಾಡುವ ಜಾಗದಲ್ಲಿ ಸಾಕು ನಾಯಿಗಳ ಸುರಕ್ಷತೆಯ ಬಗ್ಗೆ ನಿರ್ಲಕ್ಷ್ಯ ವಹಿಸಲಾಗಿದೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಕಳಸ ಪೊಲೀಸ್ ಠಾಣೆ ದೂರು ದಾಖಲಾಗಿದೆ.

Seven-year-old child injured in pet dog attack

Share

Leave a comment

Leave a Reply

Your email address will not be published. Required fields are marked *

Don't Miss

ಡಾ.ಮಂಜುನಾಥ್ ಚಿಕ್ಕ‌ಮಗಳೂರು ಡಿಎಚ್ಒ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕ‌ಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ. ಈ ಹಿಂದೆ ಡಿಎಚ್ ಒ ಆಗಿದ್ದ ಅಶ್ವಥ್ ಬಾಬು ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಜಿಲ್ಲಾ ಸಂತಾನೋತ್ಪತ್ತಿ...

ಹಸಿರು ಚಾದರ್ ಅರ್ಪಿಸುವುದು ಹೊಸದಾಗಿ ಸೃಷ್ಟಿಸಿದ ಆಚರಣೆಯಲ್ಲ

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್ ದರ್ಗಾದ ಐತಿಹಾಸಿಕ ಸ್ವರೂಪ, ಧಾರ್ಮಿಕ ಆಚರಣೆಗಳು ಹಾಗೂ ಭಕ್ತರ ಹಕ್ಕುಗಳ ಕುರಿತು ಸಯ್ಯದ್ ಬುಡನ್ ಶಾ ಖಾದ್ರಿ ವಂಶಸ್ಥರು ಸ್ಪಷ್ಟನೆಯನ್ನು ನೀಡಿದ್ದಾರೆ. ಇತ್ತೀಚೆಗೆ...

Related Articles

ಕಳಸದಲ್ಲಿ ಕಾಡುಕೋಣ ದಾಳಿಗೆ ಮಹಿಳೆ ಬಲಿ

ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಬಿಳಗುಳಿ ಗ್ರಾಮದ ಸಮೀಪ ಕಾಡುಕೋಣ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ...

ರೈತ ಸಂಘ-ಹಸಿರು ಸೇನೆ ಸಂಘಟನೆಗೆ ನೂತನ ಪದಾಧಿಕಾರಿಗಳ ನೇಮಕ

ಚಿಕ್ಕಮಗಳೂರು: ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಗೆ ನೂತನ...

ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮುಂಗಾರು ಮಳೆ ತಡವಾಗಿ ಆರಂಭಗೊಂಡಿದ್ದರೂ ಇದೀಗ ಭರ್ಜರಿಯಾಗಿ ಸುರಿಯುತ್ತಿದ್ದು, ಮಲೆನಾಡು ಭಾಗದಲ್ಲಿ ಭಾರೀ...

ಕಳಸದಲ್ಲಿ ಬೃಹತ್ ಮರ ಬಿದ್ದು ಆಟೋರಿಕ್ಷಾ ಜಖಂ

ಕಳಸ: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗುಡ್ಡೆಮಕ್ಕಿ ಗ್ರಾಮದಲ್ಲಿ ಭಾರಿ ಗಾಳಿ-ಮಳೆಯ ಆರ್ಭಟಕ್ಕೆ ಸುಧೀರ್ ಆಚಾರ್...