ಚಿಕ್ಕಮಗಳೂರು: ಪರಿಶಿಷ್ಟರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನವನ್ನು ಪಂಚ ಗ್ಯಾರಂಟಿ ಯೋಜನೆಗಳಿಗೆ ಬಳಸಲು ನಿರ್ಧರಿಸಿರುವ ಸರ್ಕಾರದ ಕ್ರಮವನ್ನು ಬಿಜೆಪಿ ಎಸ್‌ಸಿ ಮೋರ್ಚಾ ಜಿಲ್ಲಾಧ್ಯಕ್ಷ ಕೆ.ಪಿ. ವೆಂಕಟೇಶ್ ಖಂಡಿಸಿದ್ದಾರೆ.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ೩೯ ಸಾವಿರ ಕೋಟಿ ರೂ ಎಸ್‌ಸಿ, ಎಸ್‌ಪಿ/ಟಿಎಸ್‌ಪಿ ಹಣವನ್ನು ಗ್ಯಾರಂಟಿ ಯೋಜನೆಗೆ ರಾಜ್ಯಸರ್ಕಾರ ಬಳಸಿರುವುದರ ವಿರುದ್ಧ ಆಜಾದ್ ವೃತ್ತದಲ್ಲಿ ಆ.೧೩ ರಂದು ಬೆಳಗ್ಗೆ ೧೧ ಗಂಟೆಗೆ ಪ್ರತಿಭಟನಾ ಧರಣಿಯನ್ನು ಆರಂಭಿಸಿ ಆ.೧೫ ರಂದು ಸ್ವತಂತ್ರ ದಿನಾಚರಣೆ ಕಾರ್ಯಕ್ರಮದಲ್ಲಿ ಕಪ್ಪುಪಟ್ಟಿ ಧರಿಸಿ ಬಾಗವಹಿಸುತ್ತೇವೆ ಎಂದು ಎಚ್ಚರಿಸಿದರು.
ಅಂಬೇಡ್ಕರ್ ಭವನ ಅಭಿವೃದ್ಧಿಗೆ ಹೆಚ್ಚಿನ ಅನುದಾನ ತಂದು ಸಂಪೂರ್ಣ ಅಭಿವೃದ್ಧಿಪಡಿಸಿ ಒಂದು ಮಾದರಿ ಅಂಬೇಡ್ಕರ್ ಭವನ ನಿರ್ಮಾಣ ಮಾಡಬೇಕೆಂದು ಸ್ಥಳೀಯ ಶಾಸಕ ಹೆಚ್.ಡಿ. ತಮ್ಮಯ್ಯ ಅವರನ್ನು ಆಗ್ರಹಿಸಿದರು.
ವಿಧಾನಸಭಾ ಕ್ಷೇತ್ರದಲ್ಲಿ ೫೨ ಅಂಬೇಡ್ಕರ್ ಭವನದಲ್ಲಿ ೨೭ ಕಾಮಗಾರಿಗಳು ನಿರ್ಮಾಣವಾಗಿಲ್ಲ, ಹೆಚ್ಚುವರಿಯಾಗಿ ೨೫ ಅಂಬೇಡ್ಕರ್ ಭವನ ನಿರ್ಮಿಸಲು ಒಟ್ಟು ೬ ಕೋಟಿ ಅನುದಾನದಲ್ಲಿ ೧ ಕೋಟಿ ರೂಗಳನ್ನು ಮಾತ್ರ ಸಂಬಂಧಪಟ್ಟ ಇಲಾಖೆಗೆ ಮಂಜೂರು ಮಾಡಲಾಗಿದೆ ಎಂದು ವಿವರಿಸಿದರು.
ಈವರೆಗೆ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಕೈಗೊಳ್ಳಲಾಗುವ ಯೋಜನೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿಲ್ಲ. ಆಗಸ್ಟ್ ತಿಂಗಳಾದರೂ ನಿಗಮದಿಂದ ಯಾವುದೇ ಅಧಿಸೂಚನೆ ಹೊರಡಿಸಿಲ್ಲ ಎಂದು ಆರೋಪಿಸಿದರು.
ನಮ್ಮ ಹಕ್ಕಿಗಾಗಿ ಸಮಾಜದ ಪರವಾಗಿ ಸರ್ಕಾರದ ಗಮನ ಸೆಳೆಯಲು ಆಯೋಜಿಸಿರುವ ಈ ಪ್ರತಿಭಟನೆಯಲ್ಲಿ ದಲಿತ ಸಂಘರ್ಷ ಸಮಿತಿ ಹೊರತುಪಡಿಸಿ ದಲಿತಪರವಾದ ಚಿಂತಕರು, ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಸೀತಾರಾಂಭರಣ್ಯ, ಹಂಪಯ್ಯ, ಕೊಲ್ಲಾಬೋವಿ, ಕೇಶವ, ಬೀರಪ್ಪ, ಕೃಷ್ಣಮೂರ್ತಿ, ರೇವನಾಥ್ ಉಪಸ್ಥಿತರಿದ್ದರು.
Silent protest by BJP SC Morcha
Leave a comment