Home namma chikmagalur chikamagalur ಸಾಂಬಾರ್ ಮಾಡಿಲ್ಲ ಎಂಬ ಕಾರಣಕ್ಕೆ ಸೋದರಿ- ಆಕೆಯ ಮಗಳ ಮೇಲೆ ಹಲ್ಲೆ
chikamagalurCrime NewsHomeLatest Newsnamma chikmagalur

ಸಾಂಬಾರ್ ಮಾಡಿಲ್ಲ ಎಂಬ ಕಾರಣಕ್ಕೆ ಸೋದರಿ- ಆಕೆಯ ಮಗಳ ಮೇಲೆ ಹಲ್ಲೆ

Share
Share

ಚಿಕ್ಕಮಗಳೂರು: ಮೂಡಿಗೆರೆಯಲ್ಲಿ, ಸಾಂಬಾರ್ ಮಾಡಿಲ್ಲ ಎಂಬ ಕಾರಣಕ್ಕೆ ನಾಗರಾಜ್ ಎಂಬ ವ್ಯಕ್ತಿ ಕುಡಿದು ಬಂದು ತನ್ನ ಸೋದರಿ ಮತ್ತು ಆಕೆಯ ಮಗಳ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಸ್ಥಳೀಯರು ಜಗಳ ಬಿಡಿಸಲು ಹೋದಾಗ ಅವರ ಮೇಲೂ ಹಲ್ಲೆಗೆ ಮುಂದಾಗಿದ್ದು, ಕೊನೆಗೆ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.

ಸಾಂಬಾರ್ ಮಾಡಿಲ್ಲ ಎಂಬ ಕಾರಣಕ್ಕೆ ಸೋದರಿಯ ಪುತ್ರಿ ಮೇಲೆ ಹಲ್ಲೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಾಂದಿ ಎಂಬಲ್ಲಿ ಘಟನೆ ನಡೆದಿದೆ.

ನಾಗರಾಜ್ ಎಂಬಾತನೇ ಸೋದರಿ ಮಗಳ ಮೇಲೆ ಹಲ್ಲೆಗೆ ಯತ್ನಿಸಿದ ವ್ಯಕ್ತಿ. ಚಿತ್ರದುರ್ಗ ಮೂಲದ ನಾಗರಾಜು ಕುಟುಂಬ ಸಮೇತ ಕೂಲಿ ಕೆಲಸಕ್ಕಾಗಿ ಚಿಕ್ಕಮಗಳೂರು ಜಿಲ್ಲೆಗೆ ಆಗಮಿಸಿದ್ದು, ಕಡೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಈತ ವಾಸವಾಗಿದ್ದಾನೆ.

ಸಾಂಬಾರ್ ಮಾಡಿಲ್ಲ ಅಂತಾ ಕುಡಿದು ಬಂದು ಅಕ್ಕ-ಅಕ್ಕನ ಮಗಳ ಮೇಲೆ ಹಲ್ಲೆಗೆ ನಾಗರಾಜ್ ಮುಂದಾಗಿದ್ದಾನೆ. ಮನೆಯಿಂದ ಹೊರಬಂದು ರಸ್ತೆ ಬದಿ ನಿಂತು ಸುಮಾರು ಸಮಯ ಜಗಳ ಮಾಡಿದ್ದಾನೆ. ಅಕ್ಕ ಅಂಜಲಿ, ಮಗಳು ಮೌಲ್ಯ ಮೇಲೆ ನಾಗರಾಜ್ ದೌರ್ಜನ್ಯ ನಡೆಸುತ್ತಿದ್ದನು.

ಈ ವೇಳೆ ಜಗಳ ಬಿಡಿಸಲು ಹೋದ ಸ್ಥಳೀಯರು ಮೇಲೂ ನಾಗರಾಜು ಹಲ್ಲೆಗೆ ಮುಂದಾಗಿದ್ದಾನೆ. ಕೆಲವರು ಜಗಳದ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆಹಿಡಿದುಕೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಆಲ್ಲೂರು ಪೊಲೀಸರು ನಾಗರಾಜುನನ್ನು ವಶಕ್ಕೆ ಪಡೆದಕೊಂಡಿದ್ದಾರೆ.

Sister-in-law attacks her daughter for not making sambar

Share

Leave a comment

Leave a Reply

Your email address will not be published. Required fields are marked *

Don't Miss

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು ಹೊಸ ವಿವಾದ ಮುನ್ನೆಲೆಗೆ ಬಂದಿದೆ. ದತ್ತಪೀಠದಿಂದ ಸುಮಾರು 6 ಕಿಲೋಮೀಟರ್ ದೂರದಲ್ಲಿರುವ ಮಾಣಿಕ್ಯಧಾರಕ್ಕೆ ತೆರಳುವ...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು ನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘವು ನಗರದ ಹನುಮಂತಪ್ಪ ವೃತ್ತದಿಂದ ಆಜಾದ್‌ಪಾರ್ಕ್ ವೃತ್ತದವರೆಗೆ...

Related Articles

ರಾಜ್ಯ ಪರಿಸರ ಮೌಲ್ಯಮಾಪನ ಸಮಿತಿಯು ದೇಶದಲ್ಲೇ ನಂ.1ನೇ ಸ್ಥಾನ

ಚಿಕ್ಕಮಗಳೂರು: ಪರಿಸರದ ಮೇಲೆ ಹಾನಿ, ಒತ್ತಡ ತಡೆಯುವ ನಿಟ್ಟಿನಲ್ಲಿ ಈವರೆಗೆ ಯಾವುದೇ ಕೈಗಾರಿಕೆ ಅಥವಾ ಕಟ್ಟಡ...

ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಪ್ರಕರಣ ದಾಖಲು

ಚಿಕ್ಕಮಗಳೂರು: ಸೈಬರ್ ಕ್ರೈಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳ ಲೈಂಗಿಕ ಶೋಷಣೆಯ ಅಶ್ಲೀಲ...

ಬಾಹ್ಯಾಕಾಶ ಕ್ಷೇತ್ರದಲ್ಲಿ ಆಲ್ದೂರಿನ ಯುವಕನ ಸಾಧನೆ

ಚಿಕ್ಕಮಗಳೂರಿನ ಆಲ್ದೂರು ಗ್ರಾಮದ ಅವೈಸ್ ಅಹ್ಮದ್, ತಮ್ಮ ‘Pixxeಟ’ ಸ್ಟಾರ್ಟ್‌ಅಪ್ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ...

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ...