Home namma chikmagalur ಅರಣ್ಯ ಭೂಮಿಯ ಜನವಸತಿಗೆ ಪರಿಹಾರಾತ್ಮಕ ಭೂಮಿ ನೀಡಿ ಸಮಸ್ಯೆಗೆ ಪರಿಹಾರ
namma chikmagalurchikamagalurHomeLatest News

ಅರಣ್ಯ ಭೂಮಿಯ ಜನವಸತಿಗೆ ಪರಿಹಾರಾತ್ಮಕ ಭೂಮಿ ನೀಡಿ ಸಮಸ್ಯೆಗೆ ಪರಿಹಾರ

Share
Share

ಬೆಂಗಳೂರು:  ರಾಜ್ಯದ ಅರಣ್ಯ ಪ್ರದೇಶದಲ್ಲಿ ಹಲವು ದಶಕಗಳಿಂದ ಇರುವ ಜನವಸತಿ ಪ್ರದೇಶಗಳಿಗೆ ಪರಿಹಾರಾತ್ಮಕವಾಗಿ ಪರ್ಯಾಯ ಭೂಮಿ ಪಡೆದು, ಬಡ ಜನರ ಸಂಕಷ್ಟ ಪರಿಹರಿಸಲು ಕೇಂದ್ರ ಸರ್ಕಾರ ಮತ್ತು ಸುಪ್ರೀಂಕೋರ್ಟ್ ಮೊರೆ ಹೋಗಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಇಂಧನ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್, ಕಂದಾಯ ಸಚಿವ ಕೃಷ್ಣಬೈರೇಗೌಡ ಹಾಗೂ ಜನಪ್ರತಿನಿಧಿಗಳ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಸೆಕ್ಷನ್ 4 ಮತ್ತು ಪರಿಭಾವಿತ ಅರಣ್ಯಕ್ಕೆ ಸಂಬಂಧಿಸಿದಂತೆ ರಾಜ್ಯದಾದ್ಯಂತ ಸಮಸ್ಯೆ ಇದ್ದು, ಶಾಶ್ವತ ಪರಿಹಾರ ಕಲ್ಪಿಸಲು ಸರ್ಕಾರ ಕಂದಾಯ ಇಲಾಖೆ ಸಹಕಾರದೊಂದಿಗೆ ಮಾರ್ಗೋಪಾಯ ಹುಡುಕುತ್ತಿದೆ ಎಂದರು.

ಜನವಸತಿ ಪ್ರದೇಶ, ಸರ್ಕಾರಿ ಕಟ್ಟಡ, ಅಂಗನವಾಡಿ, ಖಾಸಗಿ ಪಟ್ಟಾ ಭೂಮಿಯನ್ನೂ ಡೀಮ್ಡ್ ಅರಣ್ಯದ ಪಟ್ಟಿಯಲ್ಲಿ ಸೇರಿಸಿ 2022ರಲ್ಲಿ ಎರಡನೇ ಬಾರಿ ಸುಪ್ರೀಂಕೋರ್ಟ್ ಗೆ ಪ್ರಮಾಣಪತ್ರ ಸಲ್ಲಿಸಲಾಗಿದೆ. ಈಗ ಕೊನೆಯ ಅವಕಾಶವನ್ನು ನ್ಯಾಯಾಲಯ ನೀಡಿದ್ದು, ಸಮರ್ಪಕವಾಗಿ ಜಂಟಿ ಸರ್ವೆ ನಡೆಸಿ ಪ್ರಮಾಣಪತ್ರ ಸಲ್ಲಿಸಿದರೆ ಸಮಸ್ಯೆಗೆ ಪರಿಹಾರ ದೊರಕುತ್ತದೆ. ಕಂದಾಯ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳು ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದರು.

ಸೆಕ್ಷನ್ 4 ಅಧಿಸೂಚನೆ ಆಗಿದ್ದರೂ ಸೆಕ್ಷನ್ 17 ಆಗದೆ ಇರುವ ಪ್ರಕರಣಗಳು ದಶಕಗಳಿಂದ ಬಾಕಿ ಉಳಿದಿದ್ದು, ವ್ಯವಸ್ಥಾಪನಾಧಿಕಾರಿ (ಎಫ್.ಎಸ್.ಓ.)ಗಳು ತ್ವರಿತವಾಗಿ ಇದನ್ನು ಇತ್ಯರ್ಥ ಮಾಡಬೇಕು. ಜನವಸತಿ, ಕೃಷಿ ಜಮೀನು ಇಲ್ಲದ ವಿಭಾಗಗಳನ್ನು ಕೂಡಲೇ ಸೆಕ್ಷನ್ 17ಕ್ಕೆ ಪರಿವರ್ತಿಸಿ ಅರಣ್ಯ ಎಂದು ಘೋಷಿಸಬೇಕು ಎಂದು ಸಲಹೆ ನೀಡಿದರು.

ಅರಣ್ಯ ಮತ್ತು ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಜಿಲ್ಲೆಯ ಶಾಸಕರು, ರೈತ ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು.

Solving the problem by providing compensatory land for forest land settlement

Share

Leave a comment

Leave a Reply

Your email address will not be published. Required fields are marked *

Don't Miss

ಗುಡುಗು-ಸಿಡಿಲಿನ ಭಾರಿ ಮಳೆಗೆ ಇಡೀ ನಗರ ತಲ್ಲಣ

ಚಿಕ್ಕಮಗಳೂರು: ಶುಕ್ರವಾರ ಮಧ್ಯರಾತ್ರಿ ಗುಡುಗು-ಸಿಡಿಲಿನ ಅಬ್ಬರದೊಂದಿಗೆ ಸುರಿದ ಭಾರಿ ಮಳೆಗೆ ಇಡೀ ನಗರ ತಲ್ಲಣಗೊಂಡಿದೆ. ಮರಗಳು ವಿದ್ಯುತ್ ಕಂಬಗಳ ಸಹಿತ ರಸ್ತೆಗೆ ಉರಳಿದವು. ಹಲವು ಕಟ್ಟಡಗಳ ಚಾವಣಿ ಹಾರಿ ಹೋಗಿವೆ. ಮಧ್ಯರಾತ್ರಿ...

ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ನೇಮಕ ನಿಯಮ ಬಾಹಿರ

ಚಿಕ್ಕಮಗಳೂರು: ಇತ್ತೀಚೆಗೆ ಡಿ. ರಾಮೇಗೌಡರವರನ್ನು ಕರ್ನಾಟಕ ರಾಜ್ಯ ರೈತ ಸಂಘದ ಚಿಕ್ಕಮಗಳೂರು ತಾಲ್ಲೂಕು ಘಟಕದ ಅಧ್ಯಕ್ಷನಾಗಿ ನೇಮಕ ಮಾಡಿರುವುದು ನಿಯಮ ಬಾಹಿರವಾಗಿದ್ದು, ಈ ಆಯ್ಕೆ ಅಮಾನ್ಯ ಎಂದು ಜಿಲ್ಲಾಧ್ಯಕ್ಷ ಮಹೇಶ್ ಹೇಳಿದರು....

Related Articles

‘ನಮ್ಮೂರಿಗೆ ರಸ್ತೆ ಅಭಿವೃದ್ಧಿ ಬೇಡ’ ಎಂದು ಗ್ರಾಮಸ್ಥರು….?

ಚಿಕ್ಕಮಗಳೂರು: ಸಾಮಾನ್ಯವಾಗಿ ಗ್ರಾಮಗಳಿಗೆ ರಸ್ತೆ ಬೇಕು, ಕುಡಿಯುವ ನೀರು ಬೇಕು, ವಿದ್ಯುತ್ ಬೇಕು ಎಂದು ಜನ...

ಜಿಲ್ಲೆಯಲ್ಲಿ ಅಧಿಕಗೊಂಡ ನಾಪತ್ತೆ ಪ್ರಕರಣಗಳು

ಚಿಕ್ಕಮಗಳೂರು: ಬೀರೂರು ಮತ್ತು ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ಪ್ರತ್ಯೇಕ ನಾಪತ್ತೆ ಪ್ರಕರಣಗಳು ದಾಖಲಾಗಿದ್ದು,...

ಮಲೆನಾಡಿನಲ್ಲಿ ಮತ್ತೆ ಅಪಾಯಕಾರಿ ಕಾಲುಸಂಕಗಳನ್ನೇ ಆಶ್ರಯ ಪಡೆದ ಗ್ರಾಮಸ್ಥರು

ಚಿಕ್ಕಮಗಳೂರು: ಕಾಫಿನಾಡಿನ ಮಲೆನಾಡು ಭಾಗದಲ್ಲಿ ನಕ್ಸಲ್ ಚಟುವಟಿಕೆಗಳು ಸ್ತಬ್ಧವಾಗುತ್ತಿದ್ದಂತೆ ಸರ್ಕಾರ ಅಲ್ಲಿನ ಕುಗ್ರಾಮಗಳನ್ನು ಸಂಪೂರ್ಣವಾಗಿ ಕೈಬಿಟ್ಟಿದೆ...

ಜೆಜೆಎಂನಲ್ಲಿ ನಕಲಿ ಛಾಪಾ ಕಾಗದ ಬಳಸಿ ಸರ್ಕಾರಕ್ಕೆ ವಂಚನೆ

ಶೃಂಗೇರಿ:  ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಜೆಜೆಎಂ (ಜಲ ಜೀವನ್ ಮಿಷನ್) ಹಾಗೂ ಟಾಸ್ಕ್ ಫೋರ್ಸ್...