ಚಿಕ್ಕಮಗಳೂರು :
ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕರು ಎಲ್ಲಿ ನಮ್ಮ ಕ್ಷೇತ್ರದ ಶಾಸಕರು ವಿದೇಶದಲ್ಲಿ
ಹೀಗೆ ಪ್ರತಿಭಟನೆ ವೇಳೆ ಘೋಷಣೆ ಕೂಗಿ ತಮ್ಮದೇ ಕ್ಷೇತ್ರದ ಶಾಸಕ ಟಿ.ಡಿ ರಾಜೇಗೌಡ ವಿರುದ್ಧ ಈ ಚಳುವಳಿ ಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ವಿರುದ್ಧ ಮಲೆನಾಡಿಗರ ಪ್ರತಿಭಟನೆ ವೇಳೆ ಕೇಳಿ ಬಂದಿದೆ. ನೊಂದ ರೈತರು ಮತ್ತು ಕಾರ್ಮಿಕರ ಹಕ್ಕೊತ್ತಾಯ ಸಮಿತಿಯಿಂದ ಈ ಪ್ರತಿಭಟನೆ ನಡೆದಿದೆ.
ಶೃಂಗೇರಿ ವಿಧಾನಸಭಾ ಕ್ಷೇತ್ರದ ಕೊಪ್ಪ ತಾಲೂಕಿನ ಅಗಳಗಂಡಿ ಹಾಗೂ ಗುಡ್ಡೇತೋಟ ಪಂಚಾಯ್ತಿ ವ್ಯಾಪ್ತಿಯಲ್ಲಿ ಪ್ರತಿಭಟನೆ ನಡೆದಿದ್ದು ಬೆಳೆಹಾನಿ ಪರಿಹಾರದ ಹಣ ಬಿಡುಗಡೆ ಮಾಡಿಸುವಂತೆ ಆಗ್ರಹ ಕೇಳಿಬಂದಿದೆ. ನಿವೇಶನ ಇಲ್ಲದ ಜನರಿಗೆ ನಿವೇಶನ ನೀಡುವಂತೆ ಪ್ರತಿಭಟನಾ ಮೆರವಣಿಗೆ ವೇಳೆ ಒತ್ತಾಯ ಕೇಳಿ ಬಂದಿದೆ. ಗ್ರಾಮದ ರಸ್ತೆಯಲ್ಲಿನ ಗುಂಡಿಗಳನ್ನು ಸಹಾ ಮುಚ್ಚುವಂತೆ ಆಗ್ರಹಿಸಿ ಪ್ರತಿಭಟನೆ ನಡೆದಿದೆ. ನೂರಾರು ಮಲೆನಾಡಿಗರು ರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕಮಗಳೂರಿನ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ ರಾಜೇಗೌಡ ಕೊಪ್ಪ ತಾಲೂಕಿನ ಅಭಿವೃದ್ಧಿ ಬಗ್ಗೆ ನಿರ್ಲಕ್ಷ ವಹಿಸಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪ ಮಾಡಿದ್ದಾರೆ.
Leave a comment