Home Latest News ಶೃಂಗೇರಿ ಶಾಸಕ ಎಲ್ಲಿ : ಫಾರಿನ್ ಟೂರ್ ನಲ್ಲಿ : ಪ್ರತಿಭಟನಾಕಾರರ ವಿಭಿನ್ನ ಘೋಷಣೆ
Latest News

ಶೃಂಗೇರಿ ಶಾಸಕ ಎಲ್ಲಿ : ಫಾರಿನ್ ಟೂರ್ ನಲ್ಲಿ : ಪ್ರತಿಭಟನಾಕಾರರ ವಿಭಿನ್ನ ಘೋಷಣೆ

Share
Share

ಚಿಕ್ಕಮಗಳೂರು :

ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕರು ಎಲ್ಲಿ ನಮ್ಮ ಕ್ಷೇತ್ರದ ಶಾಸಕರು ವಿದೇಶದಲ್ಲಿ

ಹೀಗೆ ಪ್ರತಿಭಟನೆ ವೇಳೆ ಘೋಷಣೆ ಕೂಗಿ ತಮ್ಮದೇ ಕ್ಷೇತ್ರದ ಶಾಸಕ ಟಿ.ಡಿ ರಾಜೇಗೌಡ ವಿರುದ್ಧ ಈ ಚಳುವಳಿ ಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ವಿರುದ್ಧ ಮಲೆನಾಡಿಗರ ಪ್ರತಿಭಟನೆ ವೇಳೆ ಕೇಳಿ ಬಂದಿದೆ. ನೊಂದ ರೈತರು ಮತ್ತು ಕಾರ್ಮಿಕರ ಹಕ್ಕೊತ್ತಾಯ ಸಮಿತಿಯಿಂದ ಈ ಪ್ರತಿಭಟನೆ ನಡೆದಿದೆ.

ಶೃಂಗೇರಿ ವಿಧಾನಸಭಾ ಕ್ಷೇತ್ರದ ಕೊಪ್ಪ ತಾಲೂಕಿನ ಅಗಳಗಂಡಿ ಹಾಗೂ ಗುಡ್ಡೇತೋಟ ಪಂಚಾಯ್ತಿ ವ್ಯಾಪ್ತಿಯಲ್ಲಿ ಪ್ರತಿಭಟನೆ ನಡೆದಿದ್ದು ಬೆಳೆಹಾನಿ ಪರಿಹಾರದ ಹಣ ಬಿಡುಗಡೆ ಮಾಡಿಸುವಂತೆ ಆಗ್ರಹ ಕೇಳಿಬಂದಿದೆ. ನಿವೇಶನ ಇಲ್ಲದ ಜನರಿಗೆ ನಿವೇಶನ ನೀಡುವಂತೆ ಪ್ರತಿಭಟನಾ ಮೆರವಣಿಗೆ ವೇಳೆ ಒತ್ತಾಯ ಕೇಳಿ ಬಂದಿದೆ.‌ ಗ್ರಾಮದ ರಸ್ತೆಯಲ್ಲಿನ ಗುಂಡಿಗಳನ್ನು ಸಹಾ ಮುಚ್ಚುವಂತೆ ಆಗ್ರಹಿಸಿ ಪ್ರತಿಭಟನೆ ನಡೆದಿದೆ. ನೂರಾರು ಮಲೆನಾಡಿಗರು ರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕಮಗಳೂರಿನ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ ರಾಜೇಗೌಡ ಕೊಪ್ಪ ತಾಲೂಕಿನ ಅಭಿವೃದ್ಧಿ ಬಗ್ಗೆ ನಿರ್ಲಕ್ಷ ವಹಿಸಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪ ಮಾಡಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...