Home namma chikmagalur chikamagalur ಶೃಂಗೇರಿಯ ಅಂಚೆ ಮತಗಳ ಎಣಿಕೆ-ಜಿಲ್ಲಾಧಿಕಾರಿ ದಿಢೀರ್ ವರ್ಗಾವಣೆ
chikamagalurHomeLatest Newsnamma chikmagalur

ಶೃಂಗೇರಿಯ ಅಂಚೆ ಮತಗಳ ಎಣಿಕೆ-ಜಿಲ್ಲಾಧಿಕಾರಿ ದಿಢೀರ್ ವರ್ಗಾವಣೆ

Share
Share

ಚಿಕ್ಕಮಗಳೂರು: ಜಿಲ್ಲಾಧಿಕಾರಿಯಾಗಿದ್ದ ಎನ್.ಎಂ. ನಾಗರಾಜ್ ಅವರ ದಿಢೀರ್ ವರ್ಗಾವಣೆ ಜಿಲ್ಲಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದೆ. ಮಲೆನಾಡು, ಅರೆಮಲೆನಾಡು ಮತ್ತು ಬಯಲುಸೀಮೆ ಒಳಗೊಂಡ ಜಿಲ್ಲೆಯ ಆಡಳಿತ ಹಳಿ ಹತ್ತುವಷ್ಟರಲ್ಲೇ, ಅಧಿಕಾರ ವಹಿಸಿಕೊಂಡ ಕೇವಲ ನಾಲ್ಕು ತಿಂಗಳಿಗೆ ಅವರನ್ನು ಬೆಂಗಳೂರಿಗೆ ಎತ್ತಂಗಡಿ ಮಾಡಿರುವುದು ಹಲವು ಚರ್ಚೆಗೆ ದಾರಿ ಮಾಡಿಕೊಟ್ಟಿದೆ.

ಈ ಹಠಾತ್ ವರ್ಗಾವಣೆಯ ಹಿಂದೆ ಇತ್ತೀಚೆಗೆ ನಡೆದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ವೇಳೆ ಉಂಟಾದ ಗೊಂದಲವೇ ಪ್ರಮುಖ ಕಾರಣ ಎಂಬ ಮಾತುಗಳು ಕೇಳಿಬರುತ್ತಿವೆ.
ಶೃಂಗೇರಿಯ ಅಂಚೆ ಮತಗಳ ಎಣಿಕೆಗೂ ಮುನ್ನ ಬ್ಯಾಲೆಟ್ ಬಾಕ್ಸ್ ಓಪನ್ ಮಾಡಲಾಗಿತ್ತು ಎಂಬ ಗಂಭೀರ ಆರೋಪ ಕೇಳಿಬಂದಿತ್ತು.

ಮತ ಮರು ಎಣಿಕೆಯ ದಿನ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಶೃಂಗೇರಿ ಶಾಸಕ ರಾಜೇಗೌಡ ತಕ್ಷಣವೇ ಮತ ಎಣಿಕೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವಂತೆ ಒತ್ತಾಯಿಸಿದ್ದರೂ ಅಲ್ಲದೆ, ಈ ಇಡೀ ಗೊಂದಲದ ಪ್ರಕರಣವನ್ನು ಹೈಕೋರ್ಟ್ ಗಮನಕ್ಕೆ ತಂದು, ನ್ಯಾಯಾಲಯದ ಕಾನೂನಾತ್ಮಕ ನಿರ್ದೇಶನ ಪಡೆದ ಬಳಿಕವಷ್ಟೇ ಮುಂದಿನ ಮತ ಎಣಿಕೆ ನಡೆಸಬೇಕು ಎಂದು ಪಟ್ಟು ಹಿಡಿದ್ದರು. ಸೂಕ್ಷ್ಮತೆಯಿಂದ ಕೂಡಿದ್ದ ಈ ಮರು ಎಣಿಕೆ ಪ್ರಕ್ರಿಯೆಯಲ್ಲಿ 12 ಅಂಚೆ ಮತಗಳು ನಾಪತ್ತೆಯಾಗಿದ್ದು ಅನುಮಾನ ಮೂಡಿಸಿತ್ತು.

ಒಟ್ಟಾರೆ ಇಡೀ ಪ್ರಕ್ರಿಯೆ ನಿಭಾಯಿಸುವಲ್ಲಿ ಜಿಲ್ಲಾಡಳಿತ ವಿಫಲವಾಯಿತೇ ಮತ್ತು ಇದೇ ಕಾರಣಕ್ಕೆ ಡಿಸಿ ನಾಗರಾಜ್ ಅವರು ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿ ವರ್ಗಾವಣೆಯಾಗಿದ್ದಾರೆಯೇ ಎಂಬ ಪ್ರಶ್ನೆ ಈಗ ಕಾಫಿನಾಡಿನಲ್ಲಿ ಸಂಚಲನ ಸೃಷ್ಟಿಸಿದೆ. ಸದ್ಯ ಗುಲ್ಬರ್ಗಾ ಜಿಲ್ಲಾ ಪಂಚಾಯಿತಿ ಸಿಇಓ ಆಗಿದ್ದ ಭನ್ವರ್ ಸಿಂಗ್ ಮೀನ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದ್ದು, ಈ ಬೆಳವಣಿಗೆಗಳ ಮಧ್ಯೆ ನೂತನ ಡಿಸಿ ಜಿಲ್ಲೆಯನ್ನು ಹೇಗೆ ಮುನ್ನಡೆಸಲಿದ್ದಾರೆ ಎಂಬ ಕುತೂಹಲ ಮೂಡಿದೆ.

Sringeri postal votes counted – District Magistrate transferred suddenly

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...