Home namma chikmagalur chikamagalur ಮೂಡಿಗೆರೆ ಚುನಾವಣಾ ಶಾಖೆಯಲ್ಲಿ ಸಿಬ್ಬಂದಿ ಕೊರತೆ
chikamagalurHomeLatest Newsnamma chikmagalur

ಮೂಡಿಗೆರೆ ಚುನಾವಣಾ ಶಾಖೆಯಲ್ಲಿ ಸಿಬ್ಬಂದಿ ಕೊರತೆ

Share
Share

ಮೂಡಿಗೆರೆ: ಜಿಲ್ಲೆಯ ಮೂಡಿಗೆರೆ ಸೇರಿದಂತೆ ಹಲವು ತಾಲೂಕು ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಚುನಾವಣಾ ಶಾಖೆಗಳು ಸಿಬ್ಬಂದಿಗಳ ಕೊರತೆಯಿಂದಾಗಿ ನಿಷ್ಕ್ರೀಯಗೊಂಡಿವೆ.

ಜಿಲ್ಲಾ ಪಂಚಾಯ್ತಿ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ಸಿದ್ದತೆ ಮಾಡಿಕೊಳ್ಳುತ್ತಿದೆ. ಇದಕ್ಕೆ ಪೂರಕವಾಗಿ ಕೆಲಸ ನಿರ್ವಹಿಸಬೇಕಾಗಿರುವ ಚುನಾವಣಾ ಶಾಖೆಗಳು ಸಿಬ್ಬಂದಿಗಳ ಕೊರತೆಯಿಂದಾಗಿ ನಿಷ್ಕ್ರೀಯಗೊಂಡಿವೆ.

ಮೂಡಿಗೆರೆ ತಾಲೂಕು ಚುನಾವಣಾ ಶಾಖೆಯಲ್ಲಿ ಸಿಬ್ಬಂದಿಗಳ ಕೊರತೆ ಎದುರಾಗಿದೆ. ಇಲ್ಲಿ ೪ ಮಂದಿ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸಬೇಕಾಗಿತ್ತು. ಹಾಲಿ ಶೀರಸ್ತೇದಾರ್ ಹಾಗೂ ಓರ್ವ ಆಪರೇಟರ್ ಮಾತ್ರ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇದರಿಂದಾಗಿ ಮತದಾರರ ಪಟ್ಟಿ ಪರಿಷ್ಕರಣೆ, ಮ್ಯಾಪಿಂಗ್, ಮತಗಟ್ಟೆ ವಿಂಗಡಣೆ, ಬಿಎಲ್ ಓ ನೇಮಕಕ್ಕೆ ಹಿನ್ನಡೆಯಾಗಿದೆ. ಇದಕ್ಕೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಶಾಖೆಗೆ ಪೂರ್ಣ ಪ್ರಮಾಣದಲ್ಲಿ ಸಿಬ್ಬಂದಿಗಳನ್ನು ಜಿಲ್ಲಾಡಳಿತ ನೇಮಕ ಮಾಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Staff shortage at Mudigere election branch

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ

ಚಿಕ್ಕಮಗಳೂರು:  ಜಿಲ್ಲಾ ನ್ಯಾಯಾಲಯಕ್ಕೆ ಬಂದಿರುವ ಬಾಂಬ್ ಬೆದರಿಕೆ ಇ-ಮೇಲ್ ಆತಂಕಕ್ಕೆ ಕಾರಣವಾಗಿದೆ. ಮಧ್ಯಾಹ್ನ 1.30 ರಿಂದ 3.30 ರ ಅವಧಿಯಲ್ಲಿ ಕೋರ್ಟ್ ಆವರಣವನ್ನು ಸ್ಫೋಟಿಸುವುದಾಗಿ ದುಷ್ಕರ್ಮಿಗಳು ಕಳುಹಿಸಿರುವ ಸಂದೇಶದಿಂದಾಗಿ ನ್ಯಾಯಾಲಯದ ಆವರಣದಲ್ಲಿ...

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರು ಪ್ರವೇಶ ಮಾಡಿ ಹೊಸ ಇತಿಹಾಸ ನಿರ್ಮಾಣಕ್ಕೆ ನಾಂದಿ ಹಾಡಿದ್ದಕ್ಕೆ ತಾಲೂಕು ಆಡಳಿತ ಸಾಕ್ಷಿಯಾಯಿತು....

Related Articles

ಶ್ರೀಈಶ್ವರ-ಚೌಡೇಶ್ವರಿ ದೇವಾಲಯಗಳಲ್ಲಿ ಆಭರಣ ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ ಎಸ್.ಡಿ. ಕೊಪ್ಪಲು ಗ್ರಾಮದ ಶ್ರೀಈಶ್ವರ ಹಾಗೂ ಚೌಡೇಶ್ವರಿ ದೇವಾಲಯಗಳಲ್ಲಿ ದೇವರ...

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ....

ಪೋಕ್ಸೋ ಪ್ರಕರಣ ಆರೋಪಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ

ಚಿಕ್ಕಮಗಳೂರು: ಬಣಕಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಆರೋಪಿ ತಪ್ಪಿತಸ್ಥನೆಂದು ಸಾಬೀತಾದ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ...

ಶಾಸಕಿ ನಯನಾ ಮೋಟಮ್ಮ ವಿರುದ್ಧ ಬಿ.ಕೆ. ಹರಿಪ್ರಸಾದ್ ದೂರು

ಚಿಕ್ಕಮಗಳೂರು: ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಸಂಚಲನ ಸೃಷ್ಟಿಯಾಗಿದ್ದು, ಹಿರಿಯ ನಾಯಕರು ಹಾಗೂ ಕಾರ್ಯಕರ್ತರು ಕಾಂಗ್ರೆಸ್...