Home namma chikmagalur chikamagalur ಸಂತ್ರಸ್ತರಿಗೆ ನೆರವು ನೀಡಲು ರಾಜ್ಯ ಸರ್ಕಾರವು ತುರ್ತು ಕ್ರಮ
chikamagalurHomeLatest Newsnamma chikmagalur

ಸಂತ್ರಸ್ತರಿಗೆ ನೆರವು ನೀಡಲು ರಾಜ್ಯ ಸರ್ಕಾರವು ತುರ್ತು ಕ್ರಮ

Share
Share

ಚಿಕ್ಕಮಗಳೂರು: ಮಧ್ಯಪ್ರಾಚ್ಯದ ದೇಶಗಳಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಅಂತರಾಷ್ಟ್ರೀಯ ವಿಮಾನಯಾನ ಕಾರ್ಯಾಚರಣೆಯಲ್ಲಿ ಭಾರೀ ವ್ಯತ್ಯಯ ಉಂಟಾಗಿದ್ದು, ಇರಾನ್, ಇಸ್ರೇಲ್, ಲೆಬನಾನ್ ಮತ್ತು ಸೌದಿ ಅರೇಬಿಯಾ ಸೇರಿದಂತೆ ಹಲವು ದೇಶಗಳ ವಾಯುಪ್ರದೇಶವನ್ನು  ಮುಚ್ಚಲಾಗಿದೆ.

ಈ ಹಿನ್ನೆಲೆಯಲ್ಲಿ ಕರ್ನಾಟಕದ ಅನೇಕ ಪ್ರಯಾಣಿಕರು ಯುಎಇ ಸೇರಿದಂತೆ ವಿವಿಧ ದೇಶಗಳಲ್ಲಿ ಸಿಲುಕಿಕೊಂಡಿದ್ದು, ಸಂತ್ರಸ್ತರಿಗೆ ನೆರವು ನೀಡಲು ರಾಜ್ಯ ಸರ್ಕಾರವು ತುರ್ತು ಕ್ರಮಗಳನ್ನು ಕೈಗೊಂಡಿದೆ.

ಮುಖ್ಯಮಂತ್ರಿಗಳು ಮತ್ತು ಕಂದಾಯ ಸಚಿವರ ಸೂಚನೆಯಂತೆ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (SEOC) ಮತ್ತು ಎಲ್ಲಾ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರಗಳನ್ನು (DEOCs) 24×7 ಕಾರ್ಯನಿರ್ವಹಿಸುವಂತೆ ಸಕ್ರಿಯಗೊಳಿಸಲಾಗಿದೆ.

ಸಂಕಷ್ಟದಲ್ಲಿರುವ ಕನ್ನಡಿಗರ ಸಹಾಯಕ್ಕಾಗಿ ಇಸ್ರೇಲ್  (+972-54-7520711), ಇನಾನ್‌  (+989128109115), ಯುಎಇ (800-46342) 2 ಅರೇಬಿಯಾದಂತಹ ದೇಶಗಳಲ್ಲಿರುವ ಭಾರತೀಯ ರಾಯಭಾರ ಕಚೇರಿಗಳ ಹೆಲ್ಪಲೈನ್ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.

ಪೀಡಿತ ಪ್ರದೇಶಗಳಲ್ಲಿರುವ ಕನ್ನಡಿಗರು ಸ್ಥಳೀಯ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವುದರ ಜೊತೆಗೆ ‘ಸಾರಥಿ ಸಹಾಯತಾ’ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಲು ಮತ್ತು ವೀಸಾ ಸಂಬಂಧಿತ ಸಮಸ್ಯೆಗಳಿಗಾಗಿ FRRO ಅನ್ನು ಸಂಪರ್ಕಿಸಲು ತಿಳಿಸಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ನಿವಾಸಿಗಳು ಯಾವುದೇ ತುರ್ತು ನೆರವಿಗಾಗಿ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರದ ಸಂಖ್ಯೆ 08262-238950 ಅನ್ನು ಸಂಪರ್ಕಿಸಬಹುದು. ದೆಹಲಿಯಲ್ಲಿರುವ ಕರ್ನಾಟಕ ಭವನದ ತಂಡವು ಕೂಡ ಸಮನ್ವಯ ಕಾರ್ಯಕ್ಕಾಗಿ ಸನ್ನದ್ಧವಾಗಿದ್ದು, ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ.

State government takes urgent action to provide assistance to victims

Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ ಬೃಹತ್ ಬಂಡೆಯೊಂದು ಹಾಗೂ ಮರ ರಸ್ತೆ ಮೇಲೆ ಧರೆಗುರುಳಿದ ಪರಿಣಾಮ ಸುಮಾರು ಅರ್ಧ ಗಂಟೆ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

Related Articles

ಉಪ ಸಭಾಪತಿ ಸ್ಥಾನಕ್ಕೆ ಪ್ರಾಣೇಶ ರಾಜೀನಾಮೆ ಖಚಿತ

ಚಿಕ್ಕಮಗಳೂರು: ಉಪ ಸಭಾಪತಿ ಸ್ಥಾನಕ್ಕೆ ಎಂ,ಕೆ.ಪ್ರಾಣೇಶ್ ನಾಳೆ ರಾಜೀನಾಮೆನೀಡುತ್ತಾರೆ. ಕಳೆದ ನಾಲ್ಕುವರೆ ವರ್ಷಗಳಿಂದ ಪ್ರಾಣೇಶ್ ವಿಧಾನ...

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...