Home Latest News ಬೆಳೆಗಾರರಿಗೆ ಕಿರುಕುಳ ನಿಲ್ಲಿಸದಿದ್ದರೆ ರಾಜ್ಯಮಟ್ಟದಲ್ಲಿ ಹೋರಾಟ
Latest NewschikamagalurHomenamma chikmagalur

ಬೆಳೆಗಾರರಿಗೆ ಕಿರುಕುಳ ನಿಲ್ಲಿಸದಿದ್ದರೆ ರಾಜ್ಯಮಟ್ಟದಲ್ಲಿ ಹೋರಾಟ

Share
Share

ಚಿಕ್ಕಮಗಳೂರು:  ನೂರಾರು ವರ್ಷದಿಂದ ಬೆಳೆಗಾರರ ಅನುಭವದಲ್ಲಿರುವ ಜಮೀನನ್ನು ಡೀಮ್ಡ್ ಫಾರೆಸ್ಟ್ ಎಂದು ಪಹಣಿಯಲ್ಲಿ ದಾಖಲು ಮಾಡಲು ಹೊರಟಿರುವ ಕ್ರಮ ಖಂಡನೀಯ ಇದರ ಹಿಂದೆ ಅಧಿಕಾರಿಗಳ ಷಡ್ಯಂತ್ರವಿದೆ ಎಂದು ಕಾಫಿ ಮಂಡಳಿ ಮಾಜಿ ಸದಸ್ಯ ಡಿ.ಎಂ.ವಿಜಯ್ ಆರೋಪಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ೧೯೮೦ ರ ಫಾರೆಸ್ಟ್ ಕನ್ಸರ್ವೇಟಿವ್ ಕಾಯಿದೆ ಮುಂದಿಟ್ಟುಕೊಂಡು ೧೯೮೦ ರ ನಂತರ ಮಂಜೂರಾಗಿ ಪೋಡಿಯಾಗಿರುವ ಜಮೀನುಗಳನ್ನು ವಜಾ ಮಾಡಲು ಅಧಿಕಾರಿಗಳು ಹೊರಟಿದ್ದಾರೆ. ಕಾಫಿ ಬೆಳೆಗಾರರ ಮೇಲೆ ಅರಣ್ಯ, ಕಂದಾಯ ಇಲಾಖೆ ಅಧಿಕಾರಿಗಳು ಗದಾಪ್ರಹಾರ ನಡೆಸುತ್ತಿದ್ದಾರೆ. ಇದನ್ನು ಮೆಟ್ಟಿ ನಿಲ್ಲಲು ಜಿಲ್ಲೆಯಲ್ಲಿ ಗಟ್ಟಿ ನಾಯಕತ್ವದ ಕೊರತೆ ಎದ್ದು ಕಾಣುತ್ತಿದೆ ಎಂದು ಜನಪ್ರತಿನಿಧಿಗಳ ವಿರುದ್ಧ ಹರಿಹಾಯ್ದರು.

ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಯಲ್ಲಿ ಮಾತ್ರ ಕಾಫಿ ಬೆಳೆಯಲಾಗುತ್ತಿದೆ. ಇದರಿಂದ ಅತಿಹೆಚ್ಚು ಜಿಎಸ್‌ಟಿ ತೆರಿಗೆ ಸಂಗ್ರಹವಾಗುತ್ತಿದೆ. ಉದ್ಯಮದಿಂದ ಹೆಚ್ಚುಉದ್ಯೋಗಾವಕಾಶ, ಅನುಕೂಲತೆ ಇದ್ದರೂ ಕೂಡ ೧೯೯೮ ರಿಂದ ಅಧಿಕಾರಿಗಳು ಕಾಫಿ ಬೆಳೆಗಾರರಿಗೆ ನಿರಂತರ ಕಿರುಕುಳ ನೀಡುತ್ತಿದ್ದಾರೆ. ಈ ಮಧ್ಯೆ ಬ್ಯಾಂಕ್‌ಗಳು ಬೆಳೆಗಾರರ ಮೇಲೆ ಸರ್ಫೇಸಿ ಕಾಯಿದೆ ಬಳಕೆ ಮಾಡುತ್ತಿದ್ದಾರೆ ಎಂದು ದೂರಿದರು.

ರಾಜ್ಯದಲ್ಲಿರುವ ಮೀಸಲು ಅರಣ್ಯವನ್ನೇ ರಕ್ಷಣೆ ಮಾಡದ ಅರಣ್ಯ ಅಧಿಕಾರಿಗಳು ಈಗ ಡೀಮ್ಡ್ ಫಾರೆಸ್ಟ್ ಯೋಜನೆ ಜಾರಿಗೆ ಮುಂದಾಗಿದ್ದಾರೆ. ಅಧಿಕಾರಿಗಳಿಗೆ ಬೆಳೆಗಾರರ ಮೇಲೆ ಹೊಟ್ಟೆಕಿಚ್ಚು ಅಸೂಹೆ ಇದ್ದಂತೆ ಕಾಣುತ್ತಿದೆ. ಯಾರದೋ ಬಳಿ ಸುಪ್ರೀಂಕೋರ್ಟಿಗೆ ಪಿಐಎಲ್ ರಿಟ್ ಪಿಟಿಷನ್ ಹಾಕಿಸಿ ಸುಪ್ರೀಂ ಆದೇಶ ಮುಂದಿಟ್ಟುಕೊಂಡು ಬೆಳೆಗಾರರಿಗೆ ಕಿರುಕುಳ ನೀಡುವುದೇ ಇವರ ಕಾಯಕವಾಗಿದೆ ಎಂದು ಆರೋಪಿಸಿದರು.

ಕಂದಾಯ ಭೂಮಿಯಾಗಿದ್ದ ಪ್ರದೇಶವನ್ನು ಡೀಮ್ಡ್ ಎಂದು ಘೋಷಿಸಿದ್ದಾರೆ. ಗೋಮಾಳ, ಕಾಫಿ ಖರಾಬು ಜಾಗವನ್ನು ೪(೧) ಅಧಿಸೂಚನೆ ಹೊರಡಿಸಿದ್ದಾರೆ. ೧೯೬೦-೭೦ ರಲ್ಲಿ ಜಮೀನು ಮಂಜೂರಾಗಿದ್ದರೂ ಪೋಡಿ ಕಾರ್ಯ ನಡೆಸಲು ಅರಣ್ಯ ಇಲಾಖೆ ಅಭಿಪ್ರಾಯ ಕೇಳುತ್ತಿದ್ದಾರೆ ಒಟ್ಟಾರೆ ಕೃಷಿ ಚಟುಚಟಿಕೆಗೆ ಅಡಚಣೆ ಮಾಡುವುದು ಇವರ ಕಾಯಕವಾಗಿದೆ ಎಂದು ಟೀಕಿಸಿದರು.

ಆಲ್ದೂರು ಸಮೀಪದ ಕೆಸವಿನ ಹಕ್ಲು ಗ್ರಾಮದಲ್ಲಿ ಕಲ್ಲುಗಣಿಗಾರಿಕೆ ನಡೆಸಲು ಅನುಮತಿ ನೀಡಿದ್ದರಿಂದ ಸುತ್ತಮುತ್ತಲ ಮನೆಗಳು ಬಿರುಕು ಬಿಟ್ಟಿವೆ. ಇಂತಹ ಅನಧಿಕೃತ ಕೆಲಸಕ್ಕೆ ಅರಣ್ಯ ಇಲಾಖೆ ಹೇಗೆ ಅನುಮತಿ ನೀಡಿದೆ ಎಂದು ಪ್ರಶ್ನಿಸಿದರು.

ಬೆಳೆಗಾರರಿಗೆ ನಿರಂತರ ಕಿರುಕುಳ ನೀಡುವುದನ್ನು ಅಧಿಕಾರಿಗಳು ತಕ್ಷಣಕ್ಕೆ ನಿಲ್ಲಿಸದಿದ್ದರೆ ರಾಜ್ಯಮಟ್ಟದಲ್ಲಿ ಹೋರಾಟ ರೂಪಿಸಲಿದ್ದೇವೆ ಎಂದು ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬೆಳೆಗಾರರಾದ ಸುನಿಲ್, ಚಂದ್ರಶೇಖರ್, ಪುಟ್ಟೇಗೌಡ, ಲವ ಮತ್ತಿತರರಿದ್ದರು

State-level protest if harassment of farmers does not stop

Share

Leave a comment

Leave a Reply

Your email address will not be published. Required fields are marked *

Don't Miss

ತರೀಕೆರೆ-ಕಡೂರು-ಚಿಕ್ಕಮಗಳೂರು: ಅದಲು-ಬದಲು ಕಾಂಗ್ರೆಸ್, ಬಿಜೆಪಿ ಕಿತ್ತಾಟ !

ಚಿಕ್ಕಮಗಳೂರು: ರಸ್ತೆ ಕಾಮಗಾರಿಗಳು, ಭದ್ರ ಉಪಕಣಿವೆ ಯೋಜನೆಗಳಿಗೆ ಕಾಂಗ್ರೆಸ್ ಶಾಸಕರುಗಳಲ್ಲಿ “ಸಿಟ್ಟು” ಮಡಿಗಟ್ಟಿದೆ. ಇದಕ್ಕೆ ಪ್ರತಿಯಾಗಿ ವಿಧಾನ ಪರಿಷತ್ ಸದಸ್ಯಮತ್ತು ಬಿಜೆಪಿ ಮುಖಂಡ ಸಿ.ಟಿ.ರವಿ ಹಾದಿ ರಂಪ,ಬೀದಿ ರಂಪ ಮಾಡಿಕೊಂಡು ದೂರುಪ್ರತಿದೂರು...

ಸ್ಥಳೀಯ ಶಾಸಕರ ಪ್ರಚೋದನಾಕಾರಿ ಹೇಳಿಕೆಯಿಂದ ಶಾಸಕ ಸಿ.ಟಿ ರವಿ ಹಲ್ಲೆಗೆ ಯತ್ನ

ಚಿಕ್ಕಮಗಳೂರು: ರಾಂಪುರ ರಸ್ತೆ ಕಾಮಗಾರಿ ವೀಕ್ಷಣೆ ಸಂದರ್ಭದಲ್ಲಿ ಸ್ಥಳೀಯ ಶಾಸಕರ ಪ್ರಚೋದನಾಕಾರಿ ಹೇಳಿಕೆ ಹಿನ್ನಲೆಯಲ್ಲಿ ಬಿಜೆಪಿ ಪಕ್ಷದ ಮುಖಂಡರು ಹಾಗೂ ವಿಧಾನಪರಿಷತ್ ಶಾಸಕ ಸಿ.ಟಿ ರವಿ ರವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು...

Related Articles

ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಜನಪ್ರತಿನಿಧಿಗಳಿಂದ ಸ್ವಾಗತ

ಚಿಕ್ಕಮಗಳೂರು:  ಬೇಸಿಗೆ ರಜೆ ಮುಗಿದು ಇಂದಿನಿಂದ ಶಾಲೆಗಳು ಪ್ರಾರಂಭಗೊಂಡಿದ್ದು, ಅತ್ಯಂತ ಹುರುಪಿನಿಂದ ಶಾಲೆಗಳಿಗೆ ಆಗಮಿಸಿದ ಮಕ್ಕಳಿಗೆ...

ಮತದಾರರ ಪಟ್ಟಿ ಶುದ್ಧೀಕರಣಕ್ಕೆ ಆದ್ಯತೆ ನೀಡಿ

ಚಿಕ್ಕಮಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗಳು ಸುಸೂತ್ರ ಹಾಗೂ ಪಾರದರ್ಶಕವಾಗಿ ನಡೆಯಬೇಕಾದರೆ ದೋಷಮುಕ್ತ ಮತದಾರರ ಪಟ್ಟಿ ಅತ್ಯಗತ್ಯ....

 ಮಕ್ಕಳ ಶಾಲಾ ಹಾಜರಾತಿ ಬಗ್ಗೆ ಪೋಷಕರು ನಿಗಾ ವಹಿಸಬೇಕು

ಚಿಕ್ಕಮಗಳೂರು: ಮಕ್ಕಳು ಪ್ರತಿದಿನ ತಪ್ಪದೆ ಶಾಲೆಗೆ ಹಾಜರಾಗಬೇಕು. ಶಿಕ್ಷಣದಲ್ಲಿ ನಿರಂತರತೆ ಅತ್ಯಂತ ಮುಖ್ಯವಾಗಿದ್ದು, ಪೋಷಕರು ಈ...

ನಿವೇಶನಕ್ಕಾಗಿ ಒತ್ತಾಯಿಸಿ 4ನೇ ದಿನಕ್ಕೆ ಮುಂದುವರೆದ ಧರಣಿ

ಮೂಡಿಗೆರೆ: ತಾಲೂಕಿನ ಮಣ್ಣಿಕೆರೆ ಗ್ರಾಮದಲ್ಲಿ ಟಿಯುಸಿಐ ಮತ್ತು ವಸತಿಗಾಗಿ ಹೋರಾಟ ವೇದಿಕೆ ವತಿಯಿಂದ ನಿವೇಶನ ರಹಿತರು...