Home namma chikmagalur ಅ.17ಕ್ಕೆ ತರೀಕೆರೆಯಲ್ಲಿ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿ
namma chikmagalurHomeLatest NewsTarikere

ಅ.17ಕ್ಕೆ ತರೀಕೆರೆಯಲ್ಲಿ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿ

Share
Share

ಚಿಕ್ಕಮಗಳೂರು:  ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ತರೀಕೆರೆಯ ತಾಲ್ಲೂಕು ಆಡಳಿತ, ತರೀಕೆರೆ, ಅಜ್ಜಂಪುರ ತಾಲ್ಲೂಕು ಪಂಚಾಯಿತಿ, ತರೀಕೆರೆ ಪುರಸಭೆ, ಅಜ್ಜಂಪುರ ಪಟ್ಟಣ ಪಂಚಾಯಿತಿ ಇವುಗಳ ಸಂಯುಕ್ತ ಆಶ್ರಯದಲ್ಲಿ ೧೪ ಮತ್ತು ೧೭ ವಯೋಮಿತಿಯೊಳಗಿನ ಬಾಲಕ ಮತ್ತು ಬಾಲಕಿಯರ ಹೊನಲು ಬೆಳಕಿನ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭವು ಅಕ್ಟೋಬರ್ ೧೭ ರಂದು ಮಧ್ಯಾಹ್ನ ೨ ಗಂಟೆಗೆ ತರೀಕೆರೆಯ ಬಾಲಕರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆಯಲಿದೆ.

ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಹಾಗೂ ಮಾನ್ಯ ಉಪಮುಖ್ಯಮಂತ್ರಿ ಶ್ರೀ ಡಿ.ಕೆ.ಶಿವಕುಮಾರ್ ಅವರ ಘನ ಉಪಸ್ಥಿತಿಯಲ್ಲಿ ಮಾನ್ಯ ಇಂಧನ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಕೆ.ಜೆ.ಜಾರ್ಜ್ ಕ್ರೀಡಾಕೂಟ ಉದ್ಘಾಟಿಸುವರು. ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಶ್ರೀ ಮಧು ಬಂಗಾರಪ್ಪ ಕ್ರೀಡಾ ಧ್ವಜಾರೋಹಣ ನೆರವೇರಿಸಲಿದ್ದು, ವಿಧಾನ ಪರಿಷತ್ ಮಾನ್ಯ ಉಪ ಸಭಾಪತಿಗಳಾದ ಶ್ರೀ ಎಂ.ಕೆ.ಪ್ರಾಣೇಶ್ ಕ್ರೀಡಾ ಜ್ಯೋತಿ ಸ್ವೀಕಾರ ಮಾಡುವರು. ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಟಿ.ಡಿ.ರಾಜೇಗೌಡ ಪ್ರತಿಜ್ಞಾ ವಿಧಿ ಬೋಧನೆ ಮಾಡುವರು. ವಿಧಾನ ಪರಿಷತ್ ಸದಸ್ಯರು ಹಾಗೂ ಅನಿವಾಸಿ ಭಾರತೀಯ ಕೋಶದ ಉಪಾಧ್ಯಕ್ಷರಾದ ಡಾ.ಆರತಿ ಕೃಷ್ಣ ಹಾಗೂ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎಂ.ಶ್ರೀನಿವಾಸ್ ತಂಡಗಳ ಪರಿಚಯ ಮಾಡುವರು.

ಶಾಸಕರಾದ ಜಿ.ಹೆಚ್.ಶ್ರೀನಿವಾಸ್ ಅಧ್ಯಕ್ಷತೆ ವಹಿಸಲಿದ್ದು, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯಸಭೆ ಸದಸ್ಯರಾದ ಜೈರಾಮ್ ರಮೇಶ್, ಹಾಸನ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೇಯಸ್ ಎಂ.ಪಟೇಲ್, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಭೋಜೇಗೌಡ, ಶಾಸಕರುಗಳಾದ ಕೆ.ಎಸ್.ಆನಂದ್, ಹೆಚ್.ಡಿ.ತಮ್ಮಯ್ಯ, ನಯನ ಮೋಟಮ್ಮ, ವಿಧಾನ ಪರಿಷತ್ ಸದಸ್ಯರುಗಳಾದ ಸಿ.ಟಿ.ರವಿ, ಡಾ.ಧನಂಜಯ ಸರ್ಜಿ, ಭದ್ರಾ ಕಾಡಾ ಅಧ್ಯಕ್ಷರಾದ ಡಾ.ಕೆ.ಪಿ.ಅಂಶುಮಂತ್, ಕ.ರಾ.ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮದ ಅಧ್ಯಕ್ಷರಾದ ಬಿ.ಹೆಚ್.ಹರೀಶ್, ತರೀಕೆರೆ ಪುರಸಭೆ ಅಧ್ಯಕ್ಷರಾದ ವಸಂತಕುಮಾರ್ ಭಾಗವಹಿಸುವರು.

ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಠಾರಿಯಾ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿ.ರಶ್ಮಿ ಮಹೇಶ್, ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾದ ಸುರೋಳ್ಕರ್ ವಿಕಾಸ ಕಿಶೋರ್, ಸಮಗ್ರ ಶಿಕ್ಷಣ ಕರ್ನಾಟಕ ರಾಜ್ಯ ಯೋಜನಾ ನಿರ್ದೇಶಕರಾದ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾಧಿಕಾರಿ ಹಾಗೂ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿ ಸಮಿತಿಯ ಅಧ್ಯಕ್ಷರಾದ ಸಿ.ಎನ್.ಮೀನಾ ನಾಗರಾಜ್, ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ ಮತ್ತಿತರರು ಭಾಗವಹಿಸುವರು.

State-level volleyball tournament to be held in Tarikere on October 17

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...