Home namma chikmagalur chikamagalur ಕಬ್ಬಡ್ಡಿ ಪಂದ್ಯಾವಳಿ ಎಸ್‌ಟಿಜೆ ಕಾಲೇಜಿನ ವಿದ್ಯಾರ್ಥಿನಿಯರು ರಾಷ್ಟ್ರಮಟ್ಟಕ್ಕೆ ಆಯ್ಕೆ
chikamagalurHomeLatest Newsnamma chikmagalur

ಕಬ್ಬಡ್ಡಿ ಪಂದ್ಯಾವಳಿ ಎಸ್‌ಟಿಜೆ ಕಾಲೇಜಿನ ವಿದ್ಯಾರ್ಥಿನಿಯರು ರಾಷ್ಟ್ರಮಟ್ಟಕ್ಕೆ ಆಯ್ಕೆ

Share
Share

ಚಿಕ್ಕಮಗಳೂರು:  ಸಿರಿಗೆರೆ ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಮಹಿಳಾ ಪದವಿ ಪೂರ್ವ ಕಾಲೇಜಿನ ಕುಮಾರಿ ಚಂದನ ಹಾಗೂ ಕುಮಾರಿ ತನುಶ್ರೀ ಇವರುಗಳು ರಾಜ್ಯಮಟ್ಟದ ಕಬ್ಬಡ್ಡಿಯಲ್ಲಿ ಜಯಗಳಿಸಿ ರಾಷ್ಟ್ರೀಯ ಮಟ್ಟದ ಕಬ್ಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆಯಾಗಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ ಎಂದು ಶಾಲೆಯ ಸ್ಥಳೀಯ ಸಲಹಾ ಸಮಿತಿ ಅಧ್ಯಕ್ಷ ಡಾ. ವಿನಾಯಕ ಸಿಂದಿಗೆರೆ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಇಬ್ಬರು ವಿದ್ಯಾರ್ಥಿನಿಯರನ್ನು ಪರಮ ಪೂಜ್ಯ ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಅಭಿನಂದಿಸಿ ಆಶಿರ್ವದಿಸಿದ್ದಾರೆ ಎಂದರು.

ಭುವನೇಶ್ವರಿ ಪ್ರೌಢಶಾಲೆಯ ೧೦ನೇ ತರಗತಿಯ ವರ್ಷ, ೮ನೇ ತರಗತಿಯ ಸಿಂಚನ, ೯ನೇ ತರಗತಿ ಅಂಕಿತ ಇವರುಗಳು ಮಿನಿ ಒಲಂಪಿಕ್‌ನಲ್ಲಿ ಗೆಲುವು ಸಾಧಿಸಿದ್ದು, ಬಿ.ಎಲ್ ಪ್ರಿಯಾಂಕ ಇವರು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆಂದು ಹೇಳಿದರು.

ಈ ವಿದ್ಯಾರ್ಥಿನಿಯರ ಸಾಧನೆಗೆ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕರಾಗಿರುವ ಕೆ.ಟಿ.ವೆಂಕಟೇಶ್, ಎನ್.ಎಂ ನಾಗರಾಜ್, ಕಬ್ಬಡ್ಡಿ ತರಬೇತುದಾರರಾದ ಮಂಜುನಾಥ್ ಹಾಗೂ ಪಿ.ಮಹೇಶ್ ಇವರುಗಳ ನಿರಂತರ ತರಬೇತಿ ಕಾರಣವಾಗಿದೆ ಎಂದು ತಿಳಿಸಿದರು.

ಗ್ರಾಮೀಣ ಭಾಗದ ಪ್ರತಿಭೆಗಳು ಉತ್ತಮ ತರಬೇತಿ ಮತ್ತು ಮಾರ್ಗದರ್ಶನ ದೊರಕಿದರೆ ರಾಷ್ಟ್ರಮಟ್ಟದಲ್ಲಿ ಜಿಲ್ಲೆಯನ್ನು ಪ್ರತಿನಿಧಿಸುತ್ತಾರೆಂಬುದಕ್ಕೆ ಈ ಬಾಲಕಿಯರು ಸ್ಪಷ್ಟ ನಿದರ್ಶನವಾಗಿದ್ದು, ಈ ಸಾಧನೆಗೆ ಶಾಲೆಯ ಎಲ್ಲಾ ಶಿಕ್ಷಕರು, ಪ್ರಾಂಶುಪಾಲರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆಂದರು.

ಈ ವಿದ್ಯಾರ್ಥಿನಿಯರು ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಜಯಗಳಿಸಿ ಜಿಲ್ಲೆಗೆ, ಕಾಲೇಜಿಗೆ, ಪೋಷಕರಿಗೆ ಕೀರ್ತಿ ತರಲಿ ಎಂದು ಶುಭ ಹಾರೈಸಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಾಚಾರ್ಯ ಶಿವನಗೌಡ ಕೆ ಸುರಕೋಡ, ಆಶಾಮಲ್ಲೇಶ್, ಭಾರತಿ, ಬಿ. ಚೇತನ, ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.

STJ College students selected for national level kabaddi tournament

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು ಕನ್ನಡ ನಾಮಫಲಕ ಇರುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ನಗರಸಭೆಯಿಂದ ನಾಮಫಲಕಗಳನ್ನು ತೆರವುಗೊಳಿಸಿ ಕಾನೂನು ರೀತಿ...

ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಸಂಬಂಧಿಕರ...

Related Articles

ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ-20 ಸಾವಿರ ನಗದು ಕಳವು

ಚಿಕ್ಕಮಗಳೂರು: ಮನೆಯ ಬೀರುವಿನಲ್ಲಿ ಇರಿಸಿದ್ದ ಸುಮಾರು ೨೮ ಗ್ರಾಂ ಚಿನ್ನಾಭರಣ ಹಾಗೂ ?೨೦ ಸಾವಿರ ನಗದು...

ವೃದ್ದಾಪ್ಯ, ಅಂಗವಿಕಲ ವೇತನ ವಿಳಂಬ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದಾಪ್ಯ, ವಿಧವಾ, ವಿಕಲಚೇತನ ಹಾಗೂ ಬಿಪಿಎಲ್ ಕಾರ್ಡ್ ರದ್ದು ಪಡಿಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ...

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ....

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ...