Home Crime News ಕಳವಾದ ̇8.76 ಲಕ್ಷ ರೂ.ಮೌಲ್ಯದ ಚಿನ್ನಾಭರಣ ವಶ
Crime NewsHomeLatest Newsnamma chikmagalurTarikere

ಕಳವಾದ ̇8.76 ಲಕ್ಷ ರೂ.ಮೌಲ್ಯದ ಚಿನ್ನಾಭರಣ ವಶ

Share
Share

ಚಿಕ್ಕಮಗಳೂರು: ತರೀಕೆರೆ ಪೊಲೀಸರ ಕಾರ್ಯಾಚರಣೆಯಿಂದ ೨೪ ಘಂಟೆಯೊಳಗೆ ಮನೆಗಳ್ಳನ ಮಾಡಿದ ವ್ಯಕ್ತಿಗಳನ್ನು ಬಂಧಿಸಿರುವ ಪೊಲೀಸರು ೮.೭೬ ಲಕ್ಷ ರೂ.ಮೌಲ್ಯದ ಚಿನ್ನಾಭರಣಗಳು ಹಾಗೂ ೮.೯೦ ನಗದನ್ನು ವಶಪಡಿಸಿಕೊಂಡಿದ್ದಾರೆ.

ತರೀಕೆರೆಯ ಕೋಡಿಕ್ಯಾಂಪ್ ೯ನೇ ತಿರುವಿನ ಚಿಕ್ಕೇರೆಯ ತವಕ್ಕಲ್‌ಮುಸ್ತಾನ್ ಅವರ ಮನೆಯ ಶೀಟ್ ತೆಗೆದು ಡಿ ೨೦ರಂದು ಒಳನುಗ್ಗಿರುವ ಕಳ್ಳರು ೭೩.೫ ಗ್ರಾಂ ಚಿನ್ನಾಭರಣಗಳನ್ನು ಹಾಗೂ ೮.೯೦ ನಗದು ಹಣವನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿದ್ದರು. ಮನೆಯ ಮಾಲೀಕ ನೀಡಿದ ದೂರನ್ನು ತರೀಕೆರೆಪಟ್ಟಣ ಪೊಲೀಸರು ದಾಖಲಿಸಿಕೊಂಡಿದ್ದರು.

ಈ ಪ್ರಕರಣದ ಆರೋಪಿಯನ್ನು ಕೂಡಲೇ ಪತ್ತೆಹಚ್ಚುವಂತೆ ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಡಾ.ವಿಕ್ರಮ್ ಅಮಟೆ ಅವರು ತರೀಕೆರೆ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಗಳ ವಿಶೇಷ ತಂಡವನ್ನು ರಚಿಸಿದ್ದರು. ಕೂಡಲೇ ಕಾರ್ಯಪ್ರವೃತ್ತದ ತಂಡ ಕೋಡಿಕ್ಯಾಂಪ್ ಚಿಕ್ಕೆರೆಯ ಸಯ್ಯದ್‌ಸಾಧಿಕ್ ಎಂಬಾತನನ್ನು ಇಂದು ಬಂಧಿಸಿ ಆರೋಪಿಯಿಂದ ಕಳ್ಳತನ ಮಾಡಿದ್ದ ಸುಮಾರು ೮.೭೬ ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಹಾಗೂ ೮.೯೦ ಲಕ್ಷ ರೂ. ನಗದದನ್ನು ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಈ ವಿಶೇಷ ಕಾರ್ಯಾಚರಣೆಯು ಎಸ್ಪಿ ಡಾ.ವಿಕ್ರಮ್‌ಅಮಟೆ, ಹೆಚ್ಚುವರಿ ಪೊಲೀಸ್ ಮುಖ್ಯಾಧಿಕಾರಿ ಸಿ.ಟಿ. ಜಯಕುಮಾರ್, ತರೀಕೆರೆ ಡಿವೈಎಸ್‌ಪಿ ಪರಶುರಾಮಪ್ಪ, ಅವರ ಮಾರ್ಗದರ್ಶನದಲ್ಲಿ ತರೀಕೆರೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಮಚಂದ್ರನಾಯಕ, ಠಾಣಾಧಿಕಾರಿಗಳಾದ ನಾಗೇಂದ್ರನಾಯ್ಕ್ ,ಮಂಜುನಾಥ್ ಮನ್ನಂಗಿ , ದೇವೇಂದ್ರ ರಾಥೋಡ್, ಎ.ಎಸ್.ಐ ರವಿ,ಮುಖ್ಯಪೇದೆ ಪ್ರಕಾಶ್ ಹಾಗೂ ಸಿಬ್ಬಂದಿಗಳಾದ, ರುದ್ರೇಶ್, ರಿಯಾಜ್, ಧನಂಜಯಸ್ವಾಮಿ, ಮಧು, ಕಾಂತರಾಜು, ರಾಜೇಶ, ಶ್ರೀನಿವಾಸ ಅವರುಗಳ ಕಾರ್ಯವನ್ನು ಜಿಲ್ಲಾಪೊಲೀಸ್ ಮುಖ್ಯಾಧಿಕಾರಿಗಳು ಶ್ಲಾಘಿಸಿದ್ದಾರೆ.

Stolen gold jewellery worth Rs. 8.76 lakh recovered

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು ಕನ್ನಡ ನಾಮಫಲಕ ಇರುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ನಗರಸಭೆಯಿಂದ ನಾಮಫಲಕಗಳನ್ನು ತೆರವುಗೊಳಿಸಿ ಕಾನೂನು ರೀತಿ...

ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಸಂಬಂಧಿಕರ...

Related Articles

ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ-20 ಸಾವಿರ ನಗದು ಕಳವು

ಚಿಕ್ಕಮಗಳೂರು: ಮನೆಯ ಬೀರುವಿನಲ್ಲಿ ಇರಿಸಿದ್ದ ಸುಮಾರು ೨೮ ಗ್ರಾಂ ಚಿನ್ನಾಭರಣ ಹಾಗೂ ?೨೦ ಸಾವಿರ ನಗದು...

ವೃದ್ದಾಪ್ಯ, ಅಂಗವಿಕಲ ವೇತನ ವಿಳಂಬ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದಾಪ್ಯ, ವಿಧವಾ, ವಿಕಲಚೇತನ ಹಾಗೂ ಬಿಪಿಎಲ್ ಕಾರ್ಡ್ ರದ್ದು ಪಡಿಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ...

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ....

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ...