Home namma chikmagalur chikamagalur ನದಿ ಸ್ನಾನಕ್ಕೆ ತೆರಳಿದ್ದ ವಿದ್ಯಾರ್ಥಿ ಮುಳುಗಿ ಸಾವು
chikamagalurHomeLatest Newsnamma chikmagalur

ನದಿ ಸ್ನಾನಕ್ಕೆ ತೆರಳಿದ್ದ ವಿದ್ಯಾರ್ಥಿ ಮುಳುಗಿ ಸಾವು

Share
Share

ಜಯಪುರ: ಜಯಪುರದ ಸತ್ಯ ಸಾಯಿ ಶಿಕ್ಷಣ ಸಂಸ್ಥೆಯಲ್ಲಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬನು ನದಿ ಸ್ನಾನಕ್ಕೆ ತೆರಳಿದ ವೇಳೆ ಮುಳುಗಿ ಸಾವನ್ನಪ್ಪಿರುವ ದುರ್ಘಟನೆ ಭಾನುವಾರ ಸಂಭವಿಸಿದೆ.

ಮೃತ ವಿದ್ಯಾರ್ಥಿಯನ್ನು ಅನಿಕೇತ್ (13) ಎಂದು ಗುರುತಿಸಲಾಗಿದೆ. ಪುತ್ತೂರು ಮೂಲದ ಈತ ಕಳೆದ ಎರಡು ವರ್ಷಗಳಿಂದ ಜಯಪುರದ ಸತ್ಯಸಾಯಿ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಪ್ರಸ್ತುತ ಏಳನೇ ತರಗತಿಯಲ್ಲಿ ಓದುತ್ತಿದ್ದನು.

ಭಾನುವಾರ ಮಧ್ಯಾಹ್ನ ಮೂವರು ಶಿಕ್ಷಕರು ಹಾಗೂ ಸುಮಾರು 20 ವಿದ್ಯಾರ್ಥಿಗಳೊಂದಿಗೆ ನದಿ ಸ್ನಾನಕ್ಕೆ ತೆರಳಿದ ವೇಳೆ ಅನಿಕೇತ್ ಆಕಸ್ಮಿಕವಾಗಿ ನೀರಲ್ಲಿ ಮುಳುಗಿದ್ದಾನೆ. ತಕ್ಷಣವೇ ಆತನನ್ನು ರಕ್ಷಿಸಿ ಜಯಪುರದ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ಈ ಕುರಿತು ಜಯಪುರ ಪೊಲೀಸ್ ಠಾಣೆಯ ಪಿ ಎಸ್ ಐ ರವೀಶ್ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Student drowns while taking a bath in river

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ...

ದೇಶ ವ್ಯಾಪ್ತಿ ಛಾತ್ರೋನ್ ಕಿ ಗೂಂಚ್ ವಿದ್ಯಾರ್ಥಿ ಆಂದೋಲನ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಛಾತ್ರೋನ್ ಕಿ ಗೂಂಚ್ ಎಂಬ ದೇಶ ವ್ಯಾಪಿ...

ಕುಡಿಯುವ ನೀರು-ಜಾನುವಾರು ಮೇವಿಗೆ ಕೊರತೆಯಾಗದಂತೆ ಕ್ರಮಕ್ಕೆ ಸೂಚನೆ

ಚಿಕ್ಕಮಗಳೂರು: ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಇಂಧನ, ಪ್ರವಾಸೋದ್ಯಮ ಹಾಗೂ ಚಿಕ್ಕಮಗಳೂರು...

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು...