ಚಿಕ್ಕಮಗಳೂರು: ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವ ಘಟನೆ ಕೊಪ್ಪ ಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ.
ಶಮಿತಾ (೧೫) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಶನಿವಾರ ರಾತ್ರಿ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಭಾನುವಾರ ಬೆಳಗಿನ ಜಾವ ವಿದ್ಯಾರ್ಥಿಗಳು ಎದ್ದಾಗ ಪ್ರಕರಣ ಬೆಳ ಕಿಗೆ ಬಂದಿದೆ.
ಕೊಪ್ಪ ತಾಲೂಕು ಬೊಮ್ಲಾಪುರ ಗ್ರಾಮದ ವಿದ್ಯಾರ್ಥಿನಿ ಶಮಿತಾ ೬ನೇ ತರಗತಿಯಿಂದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು.
ವಿದ್ಯಾರ್ಥಿನಿ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ, ಈ ಸಂಬಂಧ ಕೊಪ್ಪ ಪೊ ಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Student hangs herself in residential school
Leave a comment