Home namma chikmagalur chikamagalur ಕೆಎಸ್‌ಆರ್‌ಟಿಸಿ ಬಸ್‌ಗಾಗಿ ರಸ್ತೆಗಿಳಿದ ವಿದ್ಯಾರ್ಥಿಗಳು-ಗ್ರಾಮಸ್ಥರು
chikamagalurHomeLatest Newsnamma chikmagalur

ಕೆಎಸ್‌ಆರ್‌ಟಿಸಿ ಬಸ್‌ಗಾಗಿ ರಸ್ತೆಗಿಳಿದ ವಿದ್ಯಾರ್ಥಿಗಳು-ಗ್ರಾಮಸ್ಥರು

Share
Share

ಕಡೂರು: ಗ್ರಾಮೀಣ ಭಾಗದ ಕುಗ್ರಾಮಗಳಿಗೆ ಸಮರ್ಪಕ ಸಾರಿಗೆ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಮಹಿಳೆಯರು ಹಾಗೂ ಗ್ರಾಮಸ್ಥರು ರಸ್ತೆಗಿಳಿದು ಪ್ರತಿಭಟನೆ ನಡೆಸಿದ ಘಟನೆ ಕಡೂರು ತಾಲೂಕಿನ ಕಬ್ಬಳ್ಳಿ ಗೇಟ್ ಬಳಿ ನಡೆದಿದೆ.

ಸಖರಾಯಪಟ್ಟಣ-ಬಾಣಾವರ ಸಂಪರ್ಕಿಸುವ ಪ್ರಮುಖ ರಸ್ತೆಯನ್ನು ತಡೆದು ಪ್ರತಿಭಟನೆ ನಡೆಸಿದ ಸಾರ್ವಜನಿಕರು, ಕೆಎಸ್‌ಆರ್‌ಟಿಸಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಕಬ್ಬಳ್ಳಿ, ಗುಣಸಾಗರ, ಮಂಗೇನಹಳ್ಳಿ, ಸಿದ್ದಾಪುರ ಹಾಗೂ ಗೊಲ್ಲರಹಟ್ಟಿ ಗ್ರಾಮಗಳಿಗೆ ಸಮರ್ಪಕ ಬಸ್‌ ಸೌಲಭ್ಯವಿಲ್ಲದೆ ನಿತ್ಯ ನೂರಾರು ಮಂದಿ ಪರದಾಡುವಂತಾಗಿದೆ. ಅದರಲ್ಲೂ ಕಡೂರು ಹಾಗೂ ಚಿಕ್ಕಮಗಳೂರು ಪಟ್ಟಣಗಳಿಗೆ ವಿದ್ಯಾಭ್ಯಾಸಕ್ಕಾಗಿ ತೆರಳುವ ವಿದ್ಯಾರ್ಥಿಗಳು ಪ್ರತಿದಿನ ಸುಮಾರು ಆರು ಕಿ.ಮೀ. ನಡೆದುಕೊಂಡು ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಸಾರಿಗೆ ಸೌಲಭ್ಯ ಕಲ್ಪಿಸುವಂತೆ ಸಾರಿಗೆ ಇಲಾಖೆಗೆ ಹಲವು ಬಾರಿ ಮನವಿ ಸಲ್ಲಿಸಿ, ಗಡುವು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಒಂದು ವಾರದ ಹಿಂದೆಯೂ ಇದೇ ಸ್ಥಳದಲ್ಲಿ ರಸ್ತೆ ತಡೆದು ಬೃಹತ್ ಪ್ರತಿಭಟನೆ ನಡೆಸಿದ್ದರು.

ಆ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ್ದ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಮಂಗಳವಾರದಿಂದ ಬಸ್ ಸಂಚಾರ ಆರಂಭಿಸುವುದಾಗಿ ಭರವಸೆ ನೀಡಿದ್ದರು. ಅಲ್ಲದೆ, ಅಂದು ಪ್ರಾಯೋಗಿಕವಾಗಿ ಬಸ್ ಸಂಚಾರವನ್ನೂ ನಡೆಸಲಾಗಿತ್ತು. ಆದರೆ ನಂತರ ಬಸ್ ಹಾಗೂ ಸಿಬ್ಬಂದಿ ಕೊರತೆಯ ನೆಪವೊಡ್ಡಿ ನೀಡಿದ್ದ ಭರವಸೆಯನ್ನು ಈಡೇರಿಸಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದರು.

ಅಧಿಕಾರಿಗಳ ಈ ನಡೆಗೆ ತೀವ್ರ ಆಕ್ರೋಶಗೊಂಡ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಮತ್ತೊಮ್ಮೆ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಆಗಮಿಸಿದ ಸಖರಾಯಪಟ್ಟಣ ಪೊಲೀಸರು ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ ಸಂಧಾನಕ್ಕೆ ಮುಂದಾದರೂ ಅದು ವಿಫಲವಾಯಿತು.

ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಸಮರ್ಪಕ ಬಸ್‌ ವ್ಯವಸ್ಥೆ ಕಲ್ಪಿಸಬೇಕು. ಇಲ್ಲವಾದಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

‘ಬಸ್‌ ಸೌಲಭ್ಯ ಸಿಗುವವರೆಗೂ ಹೋರಾಟ ಕೈಬಿಡುವುದಿಲ್ಲ’ ಎಂದು ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ.

Students and villagers take to the road for KSRTC buses

Share

Leave a comment

Leave a Reply

Your email address will not be published. Required fields are marked *

Don't Miss

ಮನೆಯ ಹಿಂಭಾಗದಲ್ಲಿ ಬೆಳೆದಿದ್ದ 12.250 ಕೆ.ಜಿ. ಹಸಿ ಗಾಂಜಾ ವಶ

ತರೀಕೆರೆ: ತಾಲ್ಲೂಕಿನ ಬೆಟ್ಟತಾವರೆಕೆರೆ ಗ್ರಾಮದ ನಿವಾಸಿ ದಿನೇಶ್ ಎಂಬುವವರು ತಮ್ಮ ಮನೆಯ ಹಿಂಭಾಗದಲ್ಲಿ ಬೆಳೆದಿದ್ದ ಸುಮಾರು ೧೨.೨೫೦ ಕೆ.ಜಿ. ತೂಕದ ಹಸಿ ಗಾಂಜಾವನ್ನು ತರೀಕೆರೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪಿಎಸ್‌ಐ ಆನಂದ್ ಡಿ....

ಪತ್ನಿ ಕೊಲೆ ಮಾಡಿದ ಗಂಡನಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು: ಪತ್ನಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ಒಟ್ಟು ₹75 ಸಾವಿರ ದಂಡ...

Related Articles

ದೇಶವಿರೋಧಿ ಮನಸ್ಥಿತಿ ವಿರುದ್ಧ ಕಠಿಣ ಕ್ರಮ ಅಗತ್ಯ

ಮೂಡಿಗೆರೆ : ಕಾಫಿನಾಡಿನ ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಹಾಕಿ ವೈರಲ್ ಮಾಡಿದ್ದ ಪ್ರಕರಣಕ್ಕೆ...

ವಿಶೇಷ ಅಧಿವೇಶನದಲ್ಲಿ ಪಕ್ಷಭೇದ ಮರೆತು ಮಲೆನಾಡಿನ ಸಮಸ್ಯೆ ಚರ್ಚಿಸಲು ಒತ್ತಾಯ

ಚಿಕ್ಕಮಗಳೂರು: ಕಸ್ತೂರಿರಂಗನ್ ವರದಿ ಕುರಿತು ಚರ್ಚಿಸಲು ರಾಜ್ಯ ಸರ್ಕಾರ ಸೆ.21, 22 ಮತ್ತು 23ರಂದು ಮೂರು...

ಸಿ.ಎಸ್. ಸುಮಿತ್ರಾಗೆ ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕರ ವಿಶೇಷ ಪ್ರಶಸ್ತಿ

ಚಿಕ್ಕಮಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮುಚ್ಚುವ ಹಂತದಲ್ಲಿದ್ದ ಸರ್ಕಾರಿ ಶಾಲೆಗಳನ್ನು ಉಳಿಸಿ, ಅವುಗಳನ್ನು ಮಾದರಿ ಶಾಲೆಗಳನ್ನಾಗಿ ರೂಪಿಸುವಲ್ಲಿ...

ನಿಯಂತ್ರಣ ತಪ್ಪಿದ ಆಟೋ ರಿಕ್ಷಾ ಪಲ್ಟಿ-ಮಹಿಳೆ ಸಾವು

ಎನ್.ಆ‌ರ್.ಪುರ : ಅನಾರೋಗ್ಯದಿಂದ ಬಳಲುತ್ತಿದ್ದ ಸಂಬಂಧಿಕರನ್ನು ಮಾತನಾಡಿಸಿಕೊಂಡು ಊರಿಗೆ ಮರಳುತ್ತಿದ್ದ ಕುಟುಂಬಕ್ಕೆ ಮಾರ್ಗಮಧ್ಯೆಯೇ ಭೀಕರ ವಿಧಿ...