Home Latest News ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಬೇಕು
Latest NewschikamagalurHomenamma chikmagalur

ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಬೇಕು

Share
Share

ಚಿಕ್ಕಮಗಳೂರು: ವಿದ್ಯಾರ್ಥಿಗಳು ತಮ್ಮ ಭವಿಷ್ಯದ ದೃಷ್ಟಿಯಿಂದ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಬೇಕು ಎಂದು ಶಾಸಕ ಎಚ್,ಡಿ, ತಮ್ಮಯ್ಯ ಸಲಹೆ ಮಾಡಿದರು.

ನಗರದ ಐಡಿಎಸ್ ಜಿ ಸರ್ಕಾರಿ ಕಾಲೇಜಿನಲ್ಲಿ ಬುಧವಾರ ನಡೆದ ಕ್ರೀಡಾ, ಸಾಂಸ್ಕೃತಿಕ, ಎನ್‌ಎಸ್‌ಎಸ್, ಎನ್ ಸಿ ಸಿ, ಯುವ ರೆಡ್ ಕ್ರಾಸ್, ರೋವರ್ಸ್ ಮತ್ತು ರೇಂಜರ್ಸ್ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳುವುದರಿಂದ ವಿದ್ಯಾರ್ಥಿಗಳು ಸರ್ವಾಂಗೀಣವಾಗಿ ಬೆಳೆಯಲು ಸಹಕಾರಿಯಾಗುತ್ತದೆ, ಮಾನಸಿಕ ಮತ್ತು ದೈಹಿಕವಾಗಿ ಸದೃಢವಾಗಲು ಸಾಧ್ಯವಾಗುತ್ತದೆ, ಅನುಭವ ಬರುತ್ತದೆ ಎಂದರು.

ವಿದ್ಯಾರ್ಥಿ ಜೀವನದಲ್ಲಿ ಸಾಕಷ್ಟು ಆಕರ್ಷಣೆಗಳಿರುತ್ತವೆ, ಅವುಗಳಿಗೆ ಬಲಿಯಾಗದೇ ವಿದ್ಯಾರ್ಥಿ ಜೀವನವನ್ನು ಸದ್ಬಳಕೆ ಮಾಡಿಕೊಳ್ಳಬೇಕು, ಸಿಕ್ಕ ಅವಕಾಶವನ್ನು ಬಳಸಿಕೊಂಡು ತಮ್ಮ ಭವಿಷ್ಯವನ್ನು ಉಜ್ವಲ ಗೊಳಿಸಿಕೊಳ್ಳಬೇಕು, ಸಖರಾಯ ಪಟ್ಟಣದ ಅವದೂತರ ಮಾತಿನಂತೆ ಕ್ಷಣಿಕ ಸುಖಕ್ಕೆ ಆಸೆ ಪಡದೇ, ಶಾಶ್ವತವಾದ ಸುಖದ ಗಳಿಕೆಗೆ ಪ್ರಯತ್ನಿಸಬೇಕು ಎಂದು ಕಿವಿಮಾತು ಹೇಳಿದರು.

ಸಿ ಪಿ ಐ ಜಿಲ್ಲಾ ಕಾರ್ಯದರ್ಶಿ ರಾಧಾ ಸುಂದರೇಶ್ ಮಾತನಾಡಿ ವಿದ್ಯಾರ್ಥಿಗಳು ಸ್ವಾವಲಂಬಿಗಳಾಗಿ ಬದುಕುವುದನ್ನು ಕಲಿಯಬೇಕು, ಶ್ರದ್ಧೆ ಮತ್ತು ಪರಿಶ್ರಮದಿಂದ ವಿದ್ಯಾರ್ಜನೆ ಮಾಡಬೇಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲೆ ಡಾ. ಆರ್,ಎ, ಪುಷ್ಪ ಭಾರತಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು.

ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು, ಕ್ರೀಡಾಪಟುಗಳನ್ನು, ಸಮಾರಂಭದಲ್ಲಿ ಸನ್ಮಾನಿಸಲಾಯಿತು, ಪಿ ಎಚ್ ಡಿ ಪದವಿಗೆ ಪಾತ್ರರಾದ ಅರ್ಥಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ, ಕೆ, ಎನ್, ಲಕ್ಷ್ಮಿಕಾಂತ್ ಅವರನ್ನು ಗೌರವಿಸಲಾಯಿತು.

ವಾರ್ಷಿಕೋತ್ಸವದ ಅಂಗವಾಗಿ ನಡೆಸಲಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಆದಿಲ್, ಉಮೇಶ್, ಸುಮಂತ್, ರಾಜಶೇಖರ್, ಟಿ, ಪಿ, ನಾರಾಯಣ್, ಸಾಂಸ್ಕೃತಿಕ ವೇದಿಕೆಯ ಸಂಚಾಲಕ ಎನ್, ಸೋಮಶೇಖರ್, ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿಗಳಾದ ಎನ್, ಸತೀಶ್, ಡಾ, ಎಂ, ಜೆ, ಮೋಹನ್ ಕುಮಾರ್, ಕ್ರೀಡಾ ವಿಭಾಗದ ಸಂಚಾಲಕ ಕೆ, ಸಿ, ಕುಮಾರಸ್ವಾಮಿ, ಯುವ ರೆಡ್ ಕ್ರಾಸ್ ಸಂಚಾಲಕ ಡಾ, ಎಂ, ಲೋಕೇಶ್, ಎನ್ ಸಿ ಸಿ ಅಧಿಕಾರಿ ಹೆಚ್, ಡಿ, ಕಾಂತರಾಜು ಉಪಸ್ಥಿತರಿದ್ದರು.

ಇದೇ ವೇಳೆ ಚಲನಚಿತ್ರ ಹಿನ್ನೆಲೆ ಗಾಯಕಿ ರಶ್ಮಿ ಶ್ರೀನಿವಾಸ್ ಅವರಿಂದ ನಡೆದ ಗಾಯನ ಕಾರ್ಯಕ್ರಮ ಗಮನ ಸೆಳೆಯಿತು.

Students should participate in extracurricular activities as well as curricular activities.

 

Share

Leave a comment

Leave a Reply

Your email address will not be published. Required fields are marked *

Don't Miss

ಬಾಲ್ಯ ವಿವಾಹ ನಡೆದರೆ ಪೋಕ್ಸೋ ಪ್ರಕರಣ ದಾಖಲಿಸಲು ಸೂಚನೆ

ಚಿಕ್ಕಮಗಳೂರು: ಬಾಲ್ಯ ವಿವಾಹಕ್ಕೆ ನಿಷೇಧವಿದ್ದರೂ, ರಹಸ್ಯವಾಗಿ ಅಪ್ರಾಪ್ತರ ಮದುವೆ ನಡೆದರೆ ಪೋಕ್ಸೋ ಕಾಯಿದೆಯಡಿಯಲ್ಲೂ ಪ್ರಕರಣ ದಾಖಲಿಸುವಂತೆ ಚಿಕ್ಕಮಗಳೂರು ತಹಶೀಲ್ದಾರ್ ರೇಶ್ಮಾ ಸೂಚಿಸಿದ್ದಾರೆ. ಅವರು ಮಂಗಳವಾರ ತಾಲೂಕು ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು...

ಜೀವರಾಜ್ ವಿರುದ್ಧದ FIRಗೆ ಹೈಕೋರ್ಟ್ ತಡೆ

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆ ದಾಖಲಾದ ಎಫ್‌ಐಆರ್‌ಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ಬಿಜೆಪಿ ಶಾಸಕ ಡಿ.ಎನ್. ಜೀವರಾಜ್...

Related Articles

ಹೃದಯಾಘಾತದಿಂದ ಶೃಂಗೇರಿಯ ಪಿ.ಸಿ. ಸತೀಶ್ ನಿಧನ

ಚಿಕ್ಕಮಗಳೂರು: ಶೃಂಗೇರಿ ಇಆರ್‌ಎಸ್‌ಎಸ್ (ERSS) ರೆಸ್ಪಾಂಡರ್ ಪಿ.ಸಿ. 612 ಸತೀಶ್ ಅವರು ಇಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಹಾಜರಾಗಲು...

ರತ್ನಗಿರಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘಕ್ಕೆ ನೂತನ ಕಾರ್ಯಕಾರಿಸಮಿತಿ ಸದಸ್ಯರ ಆಯ್ಕೆ

ಚಿಕ್ಕಮಗಳೂರು : ನಗರದ ರತ್ನಗಿರಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘಕ್ಕೆ ಕಾರ್ಯಕಾರಿಸಮಿತಿ ಸದಸ್ಯರ ಆಯ್ಕೆಗಾಗಿ ಭಾನುವಾರ...

ಜೀನವಸಂಧ್ಯಾದ ನವೀಕೃತ ಪಾಕಶಾಲೆ ಲೋಕಾರ್ಪಣೆ

ಚಿಕ್ಕಮಗಳೂರು: ಜೀನವಸಂಧ್ಯಾದಲ್ಲಿ ೩೫ಲಕ್ಷರೂ. ಅಂದಾಜುವೆಚ್ಚದ ನವೀಕೃತ ಪಾಕಶಾಲೆ ಮತ್ತು ಸಿಬ್ಬಂದಿ ವಸತಿಗೃಹವನ್ನು ರೋಟರಿಜಿಲ್ಲಾ ಮಾಜಿಗೌರ್‍ನರ್ ಎಂ.ಸಿ.ಶೇಖರ್...

ಮಲೆನಾಡು ಭಾಗದಲ್ಲಿ ವರುಣನ ಅಬ್ಬರ

ಮೂಡಿಗೆರೆ: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಮುಂಗಾರು ಪೂರ್ವ ವರುಣನ ಅಬ್ಬರ ಜೋರಾಗಿದ್ದು ಜಿಲ್ಲೆಯ ಹಲವೆಡೆ ಧಾರಾಕಾರ...