ಚಿಕ್ಕಮಗಳೂರು: ಜಿಲ್ಲೆಯ ಹಲವು ಕಡೆಗಳ ಅಂಗನವಾಡಿ ಕೇಂದ್ರಗಳು, ಕೊಳಚೆ ಪ್ರದೇಶಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳ ಬಗ್ಗೆ ಪರಿಶೀಲಿಸಿದ್ದು, ನಾಳೆ (ಮೇ ೨೨) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯುವ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಚರ್ಚಿಸುವುದಾಗಿ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು.ನಿಸಾರ್ ಅಹಮ್ಮದ್ ಅವರು ತಿಳಿಸಿದರು.
ನಗರದ ತಮಿಳು ಕಾಲೋನಿಯ ಅಂಗನವಾಡಿ ಕೇಂದ್ರದಲ್ಲಿ ಇಂದು ಮಾತನಾಡಿದ ಅವರು, ಈಗಾಗಲೇ ಬೀದಿಬದಿ ವ್ಯಾಪಾರಿಗಳ ಸ್ಥಿತಿಯ ಬಗ್ಗೆ ಪರಿಶೀಲಿಸಿದ್ದಲ್ಲದೆ, ಅಲ್ಪಸಂಖ್ಯಾತರಿಗೆ ಸೇರಿದ ಸಂಘ-ಸಂಸ್ಥೆಗಳು, ಚರ್ಚ್‌ಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳ ಬಗ್ಗೆ ಅವಲೋಕಿಸಿ ವಿಚಾರಣೆ ನಡೆಸಿದ್ದು, ಈ ಭೇಟಿಯ ಸಂದರ್ಭದಲ್ಲಿ ಅಂತಹ ಗಂಭೀರವಾದ ಸಮಸ್ಯೆಗಳೇನೂ ಕಂಡು ಬಂದಿಲ್ಲ.
ಅನಂತರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಎಲ್ಲ ಅಲ್ಪಸಂಖ್ಯಾತ ಸಮುದಾಯಗಳ ಪ್ರಮುಖರ ಸಭೆಯಲ್ಲಿ ಅಹವಾಲು ಆಲಿಸಿದ್ದು, ನಾಳೆ ನಡೆಯುವ ಪ್ರಧಾನ ಮಂತ್ರಿಗಳ ೧೫ ಅಂಶಗಳ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ನಡೆಯುವ ಸಭೆಯಲ್ಲಿ ಈ ಎಲ್ಲಾ ವಿಚಾರಗಳ ಕುರಿತು ಚರ್ಚಿಸುತ್ತಿರುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ವಕ್ಫ್ ಸಲಹಾ ಸಮಿತಿ ಸದಸ್ಯ ಮೊಹಮ್ಮದ್ ಶಾಹಿದ್ ರಝ್ವಿ, ಆಯೋಗದ ಅಧ್ಯಕ್ಷರ ಆಪ್ತ ಸಹಾಯಕ ಮುಜೀಬುಲ್ಲಾ ಜಫಾರಿ, ಅಲ್ಪಸಂಖ್ಯಾತರ ಆಯೋಗದ ಸದಸ್ಯ, ನಿವೃತ್ತ ಐಎಎಸ್ ಅಧಿಕಾರಿ ಅಬ್ದುಲ್ ಖಾದರ್ ಉಪಸ್ಥಿತರಿದ್ದರು.
೨೨ಸಿಕೆಎಂ೨: ನಗರದ ಕೊಳಚೆ ಪ್ರದೇಶಕ್ಕೆ ಇಂದು ಭೇಟಿ ನೀಡಿದ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು.ನಿಸಾರ್ ಅಹಮ್ಮದ್ ಅಲ್ಲಿನ ಸ್ಥಿತಿಗತಿಗಳನ್ನು ಅವಲೋಕಿಸಿದರು.
Study of issues by the Chairman of the Minorities Commission
Leave a comment