Home ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಿಂದ ಸಮಸ್ಯೆಗಳ ಅಧ್ಯಯನ
HomechikamagalurLatest Newsnamma chikmagalur

ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಿಂದ ಸಮಸ್ಯೆಗಳ ಅಧ್ಯಯನ

Share
Share

ಚಿಕ್ಕಮಗಳೂರು: ಜಿಲ್ಲೆಯ ಹಲವು ಕಡೆಗಳ ಅಂಗನವಾಡಿ ಕೇಂದ್ರಗಳು, ಕೊಳಚೆ ಪ್ರದೇಶಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳ ಬಗ್ಗೆ ಪರಿಶೀಲಿಸಿದ್ದು, ನಾಳೆ (ಮೇ ೨೨) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯುವ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಚರ್ಚಿಸುವುದಾಗಿ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು.ನಿಸಾರ್ ಅಹಮ್ಮದ್ ಅವರು ತಿಳಿಸಿದರು.

ನಗರದ ತಮಿಳು ಕಾಲೋನಿಯ ಅಂಗನವಾಡಿ ಕೇಂದ್ರದಲ್ಲಿ ಇಂದು ಮಾತನಾಡಿದ ಅವರು, ಈಗಾಗಲೇ ಬೀದಿಬದಿ ವ್ಯಾಪಾರಿಗಳ ಸ್ಥಿತಿಯ ಬಗ್ಗೆ ಪರಿಶೀಲಿಸಿದ್ದಲ್ಲದೆ, ಅಲ್ಪಸಂಖ್ಯಾತರಿಗೆ ಸೇರಿದ ಸಂಘ-ಸಂಸ್ಥೆಗಳು, ಚರ್ಚ್‌ಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳ ಬಗ್ಗೆ ಅವಲೋಕಿಸಿ ವಿಚಾರಣೆ ನಡೆಸಿದ್ದು, ಈ ಭೇಟಿಯ ಸಂದರ್ಭದಲ್ಲಿ ಅಂತಹ ಗಂಭೀರವಾದ ಸಮಸ್ಯೆಗಳೇನೂ ಕಂಡು ಬಂದಿಲ್ಲ.

ಅನಂತರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಎಲ್ಲ ಅಲ್ಪಸಂಖ್ಯಾತ ಸಮುದಾಯಗಳ ಪ್ರಮುಖರ ಸಭೆಯಲ್ಲಿ ಅಹವಾಲು ಆಲಿಸಿದ್ದು, ನಾಳೆ ನಡೆಯುವ ಪ್ರಧಾನ ಮಂತ್ರಿಗಳ ೧೫ ಅಂಶಗಳ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ನಡೆಯುವ ಸಭೆಯಲ್ಲಿ ಈ ಎಲ್ಲಾ ವಿಚಾರಗಳ ಕುರಿತು ಚರ್ಚಿಸುತ್ತಿರುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ವಕ್ಫ್ ಸಲಹಾ ಸಮಿತಿ ಸದಸ್ಯ ಮೊಹಮ್ಮದ್ ಶಾಹಿದ್ ರಝ್ವಿ, ಆಯೋಗದ ಅಧ್ಯಕ್ಷರ ಆಪ್ತ ಸಹಾಯಕ ಮುಜೀಬುಲ್ಲಾ ಜಫಾರಿ, ಅಲ್ಪಸಂಖ್ಯಾತರ ಆಯೋಗದ ಸದಸ್ಯ, ನಿವೃತ್ತ ಐಎಎಸ್ ಅಧಿಕಾರಿ ಅಬ್ದುಲ್ ಖಾದರ್ ಉಪಸ್ಥಿತರಿದ್ದರು.

೨೨ಸಿಕೆಎಂ೨: ನಗರದ ಕೊಳಚೆ ಪ್ರದೇಶಕ್ಕೆ ಇಂದು ಭೇಟಿ ನೀಡಿದ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು.ನಿಸಾರ್ ಅಹಮ್ಮದ್ ಅಲ್ಲಿನ ಸ್ಥಿತಿಗತಿಗಳನ್ನು ಅವಲೋಕಿಸಿದರು.

Study of issues by the Chairman of the Minorities Commission

Share

Leave a comment

Leave a Reply

Your email address will not be published. Required fields are marked *

Don't Miss

ಬಿ.ಎಲ್.ಶಂಕರ್ ರ ರಾಜಕೀಯ ಹಪ ಹಪಿಗೆ ಮತ್ತೆ ಮತ್ತೆ ತಣ್ಣೀರು !

ಬಿ.ಎಲ್.ಶಂಕರ್ ಕಾಂಗ್ರೆಸ್ ನ ರಾಜ್ಯ ನಾಯಕರು ನಿಜ,ಆದರೆ ಇವರು ಚಿಕ್ಕಮಗಳೂರು ಜಿಲ್ಲೆಯ ಕಾಂಗ್ರೆಸ್ ನಲ್ಲಿ ಕಡ್ಡಿ ಆಡಿಸುವುದರಲ್ಲಿ ನಿಪುಣ. ಕಾಂಗ್ರೆಸ್ ಸೇರಿ ಎಲ್ಲಾ ಚುನಾವಣೆಯಲ್ಲಿ ಸೋತು ದಾಖಲೆ ಮಾಡಿದ್ದಾರೆ.ಚಿತ್ರಕಲಾ ಪರಿಷತ್ತಗೆ ಗೂಟಾ...

ಪ್ರವಾಸಿಗರ ಟೆಂಪೊ ಟ್ರ್ಯಾವೆಲರ್ ನಿಯಂತ್ರಣ ತಪ್ಪಿ ಪಲ್ಟಿ

ಚಿಕ್ಕಮಗಳೂರು: ಮಂಗಳೂರಿನಿಂದ ಹೊರನಾಡಿಗೆ ಆಗಮಿಸಿದ್ದ ಪ್ರವಾಸಿಗರ ಟೆಂಪೊ ಟ್ರ್ಯಾವೆಲರ್ (ಟಿಟಿ) ವಾಹನ ತಡರಾತ್ರಿ ಹೊರನಾಡು ಸಮೀಪದ ಭಾಮಿ ಅಂಗಡಿ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ವಾಹನದಲ್ಲಿದ್ದ ಮೂವರು ಮಕ್ಕಳು ಸೇರಿದಂತೆ...

Related Articles

ಕೆ.ಬಿ.ಎಂಗೆ ಆತ್ಮೀಯ ಅಭಿಮಾನಾರ್ಪಣೆ

ಬೀರೂರ: ಜನಾನುರಾಗಿ ಸೇವೆ ಸಲ್ಲಿಸಿ ಅಜಾತಶತ್ರು ಪಟ್ಟಣದ ಹಿರಿಯ ಮುತ್ಸದಿ ಮಾಜಿ ಶಾಸಕ ಕೆ.ಬಿ. ಮಲ್ಲಿಕಾರ್ಜುನ್...

ದೇಶದ ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಇಲ್ಲ

ಬೀರೂರು: ‘ದೇಶದ ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಇಲ್ಲದೆ ಮುಂದಿನ ಪೀಳಿಗೆಗೆ ಕೊಡುಗೆಯಾಗುವಂಥ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ’ ಎಂದು...

ಅಜ್ಜಂಪುರದ ರೈಲ್ವೆ ಲೆವೆಲ್ ಕ್ರಾಸಿಂಗ್ ರಸ್ತೆ ಮೇಲ್ಸೇತುವೆ ಕಾಮಗಾರಿಗೆ ಚಾಲನೆ

ಚಿಕ್ಕಮಗಳೂರು:  ದೇಶದ ಅಭಿವೃದ್ಧಿಯ ಸಂಕೇತವೇ ರೈಲ್ವೆಯಾಗಿದ್ದು, ರೈಲ್ವೆ ಇಲಾಖೆಯನ್ನು ಎಷ್ಟು ಮಟ್ಟಿಗೆ ಅಭಿವೃದ್ಧಿಪಡಿಸುತ್ತೇವೆಯೋ ಅಷ್ಟು ದೇಶಕ್ಕೆ...

ಗುಡುಗು ಸಿಡಿಲಿನ ಆರ್ಭಟಕ್ಕೆ ಬಸ್ ತಂಗುದಾಣದನಲ್ಲಿದ್ದ ದಂಪತಿ ಗಾಯ

ಎನ್.ಆ‌ರ್.ಪುರ: ಕಾಫಿನಾಡಿನಲ್ಲಿ ಮುಂಗಾರುಪೂರ್ವ ಮಳೆಯ ಅಬ್ಬರ ಜೋರಾಗಿದ್ದು, ಗುಡುಗು ಸಿಡಿಲಿನ ಆರ್ಭಟಕ್ಕೆ ದಂಪತಿ ಗಾಯಗೊಂಡಿರುವ ಘಟನೆ...