Home namma chikmagalur chikamagalur ಉಪವಿಭಾಗಾಧಿಕಾರಿ ಸುದರ್ಶನ್ ದಿಢೀರ್ ವರ್ಗಾವಣೆ
chikamagalurHomeLatest Newsnamma chikmagalur

ಉಪವಿಭಾಗಾಧಿಕಾರಿ ಸುದರ್ಶನ್ ದಿಢೀರ್ ವರ್ಗಾವಣೆ

Share
Share

ಚಿಕ್ಕಮಗಳೂರು: ಉಪವಿಭಾಗಾಧಿಕಾರಿ ಸುದರ್ಶನ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ದಿಢೀರ್ ವರ್ಗಾವಣೆ ತೀವ್ರ ಚರ್ಚೆಗೆ ಗ್ರಾಸವಾಗಿದ್ದು ಈ ವರ್ಗಾವಣೆಯ ಹಿಂದೆ ಕಾಣದ ಕೈಗಳು ಕೆಲಸ ಮಾಡಿವೆಯೇ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಕಳೆದ 2025ರ ಜೂನ್ 20 ರಂದು ದೇವರಾಜ್ ಅವರಿಂದ ಅಧಿಕಾರ ವಹಿಸಿಕೊಂಡಿದ್ದ ಸುದರ್ಶನ್ ಅವರು ಕೇವಲ ಏಳು ತಿಂಗಳಷ್ಟೇ ಪೂರೈಸಿದ್ದು ಇತ್ತೀಚೆಗೆ ನಡೆದ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಚುನಾವಣಾ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಅವರು ರಾಜ್ಯದ ಆಡಳಿತ ಪಕ್ಷದ ವಿರುದ್ಧ ನಡೆಗಳನ್ನು ಇಟ್ಟಿದ್ದರು ಎಂಬ ಗಂಭೀರ ಆರೋಪಗಳೇ ವರ್ಗಾವಣೆಗೆ ಪ್ರಮುಖ ಕಾರಣ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಅಲ್ಲದೇ ಜಿಲ್ಲೆಯ ಇಬ್ಬರು ಶಾಸಕರ ಹಸ್ತಕ್ಷೇಪದಿಂದಲೇ ಈ ಎತ್ತಂಗಡಿ ನಡೆದಿದೆ ಎಂಬ ಚರ್ಚೆ ನಡೆಯುತ್ತಿವೆ.

ಜೊತೆಗೆ ಪ್ರತಿಷ್ಠಿತ ಕಂಪನಿಯೊಂದರ ಭೂ ಮಂಜೂರಾತಿಗೆ ಪ್ರಭಾವಿಗಳು ಒತ್ತಡ ಹಾಕಿದ್ದರೂ ಮಣಿಯದೆ ಇದ್ದಿದ್ದು ವರ್ಗಾವಣೆಗೆ ಮತ್ತೊಂದು ಕಾರಣ ಎನ್ನಲಾಗಿದೆ. ಒಂದು ವರ್ಷದಿಂದ ಚಿಕ್ಕಮಗಳೂರು ಉಪವಿಭಾಗಾಧಿಕಾರಿ ಕುರ್ಚಿ ಮ್ಯೂಸಿಕಲ್ ಚೇರ್ ಆದಂತಾಗಿರುವುದು ಆಡಳಿತಾತ್ಮಕ ಅಸ್ಥಿರತೆಗೆ ಸಾಕ್ಷಿಯಾಗಿದೆ.

ಕಳೆದ ಜನವರಿಯಿಂದ ಈವರೆಗೆ ರಶ್ಮಿ, ಸುಮಂತ್, ಕಾಂತರಾಜು ಮತ್ತು ದೇವರಾಜ್ ಅವರಂತಹ ಅಧಿಕಾರಿಗಳು ಕೆಲವೇ ತಿಂಗಳಲ್ಲಿ ವರ್ಗಾವಣೆಗೊಂಡಿದ್ದು ಈಗ ಸುದರ್ಶನ್ ಅವರ ಸರದಿಯಾಗಿರುವುದು ಅಧಿಕಾರಿಗಳ ಪಾಲಿಗೆ ಈ ಕುರ್ಚಿ ಕಂಟಕವಾಗಿ ಪರಿಣಮಿಸಿದೆ.

Sub-Divisional Officer Sudarshan sudden transfer

Share

Leave a comment

Leave a Reply

Your email address will not be published. Required fields are marked *

Don't Miss

ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿದ ರೈತರ ಸ್ಥಿತಿ ಅವಲೋಕಿಸಿದ ಸಚಿವ ಜಾರ್ಜ್

ಚಿಕ್ಕಮಗಳೂರು: ಸಕಾಲದಲ್ಲಿ ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿರುವ ರೈತರು, ಒಣಗಿ ನಿಂತಿರುವ ಭೂಮಿ, ಮಳೆಯ ನಿರೀಕ್ಷೆಯಲ್ಲಿ ಬಿತ್ತನೆ ಮಾಡಿದ್ದ ಬೀಜಗಳು ಮೊಳಕೆ ಒಡೆಯದೆ ಬಿಸಿಲಿನ ಝಳಕ್ಕೆ ಸಿಲುಕಿ ಸುಟ್ಟುಹೋಗಿರುವುದನ್ನು ಜಿಲ್ಲಾ ಉಸ್ತುವಾರಿ ಸಚಿವ...

ಸಚಿವ ಕೆ.ಜೆ. ಜಾರ್ಜ್ ಬೆಂಗಾವಲು ವಾಹನ ಅಪಘಾತ

ಚಿಕ್ಕಮಗಳೂರು : ಅಜ್ಜಂಪುರ ಜಿಲ್ಲೆಯ ಬಯಲುಸೀಮೆ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ವೀಕ್ಷಣೆಗಾಗಿ ಪ್ರವಾಸದಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರ ಬೆಂಗಾವಲು (Escort) ವಾಹನ ಅಪಘಾತಕ್ಕೀಡಾದ ಘಟನೆ ಅಜ್ಜಂಪುರ ಪಟ್ಟಣದಲ್ಲಿ...

Related Articles

ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆ ಮಲೆನಾಡಿಗೆ ಕಂಟಕ

ಚಿಕ್ಕಮಗಳೂರು: ಪಶ್ಚಿಮ ಘಟ್ಟ ವ್ಯಾಪ್ತಿಯ ರಾಜ್ಯದ ೧೦ ಜಿಲ್ಲೆಗಳ ೨೦ ಸಾವಿರಕ್ಕೂ ಅಧಿಕ ಚದರ ಕಿಲೋ...

ಅಂಗಾಂಗ ದಾನ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿ

ಚಿಕ್ಕಮಗಳೂರು: ಅಂಗಾಂಗ ದಾನ ಮಾಡಿ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿಯಾಗಿದೆ ಎಂದು ನಗರಸಭೆ ಪೌರಾಯುಕ್ತ...

ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು. ಕೊಪ್ಪ...

ಫಸಲ್ ಬಿಮಾ ನೋಂದಣಿ ಹೆಚ್ಚಿಸಲು ಜಿಲ್ಲಾಧಿಕಾರಿ ನಿರ್ದೇಶನ

ಚಿಕ್ಕಮಗಳೂರು: ಫಸಲ್ ಬಿಮಾ ಯೋಜನೆಯಡಿ ನೋಂದಣಿ ಕಡಿಮೆಯಾಗಿದ್ದು, ತಕ್ಷಣ ಅಗತ್ಯ ಪ್ರಚಾರ ಕೈಗೊಂಡು ರೈತರ ಮನವೊಲಿಸಿ...