Home namma chikmagalur chikamagalur ಚಲಿಸುತ್ತಿದ್ದ ಕಾರೊಂದರಲ್ಲಿ ದಿಢೀರ್ ಬೆಂಕಿ
chikamagalurCrime NewsHomeLatest Newsnamma chikmagalur

ಚಲಿಸುತ್ತಿದ್ದ ಕಾರೊಂದರಲ್ಲಿ ದಿಢೀರ್ ಬೆಂಕಿ

Share
Share

ಕೊಪ್ಪ: ಚಲಿಸುತ್ತಿದ್ದ ಕಾರೊಂದರಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು, ರಸ್ತೆ ಮಧ್ಯೆಯೇ ಸಂಪೂರ್ಣವಾಗಿ ಹೊತ್ತಿ ಉರಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ನಾಗಲಾಪುರ ಗ್ರಾಮದಲ್ಲಿ ನಡೆದಿದೆ.

ಬೆಂಗಳೂರಿನಿಂದ ಕೊಪ್ಪ ಸಮೀಪದ ನಿಲುವಾಗಿಲು ಗ್ರಾಮಕ್ಕೆ ಬರುತ್ತಿದ್ದ ಕಾರಿನಲ್ಲಿ ಈ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಅದೃಷ್ಟವಶಾತ್, ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಎಚ್ಚೆತ್ತ ಪ್ರಯಾಣಿಕರು ತಕ್ಷಣವೇ ಕೆಳಗಿಳಿದಿದ್ದರಿಂದ ದೊಡ್ಡ ಮಟ್ಟದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆಯಲ್ಲಿ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಯಶಸ್ವಿಯಾಗಿ ನಡೆಸಿದ್ದಾರೆ. ಈ ಕುರಿತು ಹರಿಹರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Sudden fire in a moving car

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದ ಇಲಿಗೆ ‘ಹಣದ ಮೋಹ’

ಚಿಕ್ಕಮಗಳೂರು : ತುಮಕೂರಿನಲ್ಲಿ ಇತ್ತೀಚೆಗೆ ಇಲಿಯೊಂದು ಚಿನ್ನದ ಆಭರಣಗಳನ್ನು ಎಗರಿಸಿ ಸುದ್ದಿಯಾಗಿದ್ದರೆ, ಇತ್ತ ಚಿಕ್ಕಮಗಳೂರಿನಲ್ಲಿ ಮತ್ತೊಂದು ಚಾಣಾಕ್ಷ ಇಲಿ ಒಂದು ಹೆಜ್ಜೆ ಮುಂದೆ ಹೋಗಿ ನೇರವಾಗಿ ಹಣವನ್ನೇ ಕದ್ದು ತನ್ನ ಸಾಮ್ರಾಜ್ಯ...

ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಹೆಸರಿನಲ್ಲಿಯೂ ನಕಲಿ ವಾಟ್ಸಪ್ ಖಾತೆ

ಚಿಕ್ಕಮಗಳೂರು: ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಹ್ಯಾಕರ್‌ಗಳು ಮತ್ತು ವಂಚಕರು ವಾಟ್ಸಪ್, ಫೇಸ್‌ಬುಕ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಪ್ರಮುಖರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಜನರನ್ನು...

Related Articles

ಮುಳ್ಳಯ್ಯನಗಿರಿ ಕ್ರಾಸ್ ಬಳಿ ಟಿಟಿ ವಾಹನ ಮರಕ್ಕೆ ಡಿಕ್ಕಿ

ಚಿಕ್ಕಮಗಳೂರು: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಕ್ರಾಸ್ ಬಳಿ ಶುಕ್ರವಾರ ಇನೋವಾ ಕಾರು ನಿಯಂತ್ರಣ...

ಹಾಸ್ಟೆಲ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಸಮಗ್ರ ಗಿರಿಜನ ಕಲ್ಯಾಣ ಇಲಾಖೆ (ಐಟಿಡಿಪಿ) ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ...

ಮನೆಯ ಮೇಲ್ಛಾವಣಿಯ ಹೆಂಚು ತೆಗೆದು ನುಗ್ಗಿ ಸರಗಳ್ಳತನ

ನರಸಿಂಹರಾಜಪುರ: ಮನೆಯಲ್ಲಿ ದಂಪತಿ ಮಲಗಿದ್ದ ವೇಳೆ ಮೇಲ್ಛಾವಣಿಯ ಹೆಂಚು ತೆಗೆದು ಒಳನುಗ್ಗಿದ ಕಳ್ಳನೊಬ್ಬ ಮಹಿಳೆಯ ಕೊರಳಿನಲ್ಲಿದ್ದ...

ಕನಸು ಫೈನಾನ್ಸ್ ಹೆಸರಿನಲ್ಲಿ ₹1.60 ಲಕ್ಷ ವಂಚನೆ ಆರೋಪ

ಕಡೂರು: ಪ್ರತಿದಿನ ಉಳಿತಾಯದ ಹಣವನ್ನು ಸ್ವೀಕರಿಸಿ ಶೇ.7ರಷ್ಟು ಬಡ್ಡಿ ನೀಡುವುದಾಗಿ ನಂಬಿಸಿ, ಹಣವನ್ನು ವಾಪಸ್ ನೀಡದೆ...