Home Latest News ಚಿಕ್ಕಮಗಳೂರು ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಸುಜಾತಾ ಶಿವಕುಮಾರ ರಾಜೀನಾಮೆ
Latest NewschikamagalurHomenamma chikmagalur

ಚಿಕ್ಕಮಗಳೂರು ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಸುಜಾತಾ ಶಿವಕುಮಾರ ರಾಜೀನಾಮೆ

Share
Share

ಚಿಕ್ಕಮಗಳೂರು : ಚಿಕ್ಕಮಗಳೂರು ನಗರಸಭೆಯ ಮಹತ್ವದ ಬೆಳವಣಿಗೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸುಜಾತಾ ಶಿವಕುಮಾರ ರಾಜೀನಾಮೆ ನೀಡಿದ್ದಾರೆ.

ನಗರಸಭೆಯಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರು ಕಳೆದ ಬಾರಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡದೆ ಪಕ್ಷದಿಂದಲೇ ಉಚ್ಚಾಟನೆಗೊಂಡು ಭಾರೀ ಮುಖಭಂಗ ಅನುಭವಿಸಿದ್ದ ಬಿಜೆಪಿ ಈ ಬಾರಿ ಎಚ್ಚರಿಕೆ ಹೆಜ್ಜೆ ಇಟ್ಟಿದೆ. ಜೆಡಿಎಸ್ ಜೊತೆ ಮೈತ್ರಿ ಒಪ್ಪಂದದಂತೆ ಕೊಟ್ಟ ಮಾತಿಗೂ ತಪ್ಪದಂತೆ ಕೇವಲ ಇಬ್ಬರೇ ಸದಸ್ಯರಿರುವ ಜೆಡಿಎಸ್ ಗೆ ಬಿಟ್ಟು ಕೊಡಲು ನಿರ್ಧರಿಸಿದೆ.

ಈ ಹಿನ್ನಲೆಯಲ್ಲಿ ಪ್ರಸ್ತುತ ನಗರಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ನಡುವೆ ಮತ್ತೊಮ್ಮೆ ಕುರ್ಚಿಗಾಗಿ ಪೈಪೋಟಿ ಎದುರಾಗುವ ಸಾಧ್ಯತೆ ಇದ್ದು, ಈ ಎಲ್ಲಾ ಬೆಳವಣಿಗೆಗಳನ್ನು ಕಾಂಗ್ರೆಸ್ ಕಾದು ನೋಡುವ ತಂತ್ರಕ್ಕೆ ಮುಂದಾಗಿದೆ.

ಬಿಜೆಪಿ ಜೆಡಿಎಸ್ ನಡುವಿನ ಒಪ್ಪಂದ ಮತ್ತು ಅಧಿಕಾರದ ಹೊಂದಾಣಿಕೆಯನ್ನು ಸೂಕ್ಷ್ಮವಾಗಿ ಗಮನಿಸಿ ಮುಂದುವರೆಯುವ ಸಾಧ್ಯತೆ ಇದೆ. ಎರಡು ದಿನ ಹಿಂದಷ್ಟೇ ಅಧ್ಯಕ್ಷೆ ಸುಜಾತಾ ಶಿವಕುಮಾರ್ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದು ರಾಜೀನಾಮೆ ಅಂಗೀಕಾರಗೊಳ್ಳಲು ಹತ್ತು ದಿನಗಳ ಕಾಲಾವಕಾಶ ಇದೆ.

ಇದರ ನಡುವೆ ಮತ್ತೆನಾದರು ಬೆಳವಣಿಗೆಗಳು ನಡೆಯಲಿವೆಯೇ ಎಂಬ ಕುತೂಹಲ ಕೂಡ ಪಕ್ಷದ ಸದಸ್ಯರಲ್ಲಿ ಮನೆ ಮಾಡಿದೆ. ಇದರ ನಡುವೆ ಪಕ್ಷೇತರ ನಗರಸಭೆ ಸದಸ್ಯೆ ಶೀಲಾದಿನೇಶ್ ಮುಂದಿನ ಅಧ್ಯಕ್ಷೆ ಎಂದು ಬಿಂಬಿಸಲಾಗುತ್ತಿದ್ದು.

ಇದಕ್ಕೆ ಕಾಂಗ್ರೆಸ್ ಸದಸ್ಯರು ಬೆಂಬಲ ವ್ಯಕ್ತಪಡಿಸುವ ಸಾಧ್ಯತೆ ಇದೆ. ಆದರೆ ಇದಕ್ಕೆ ರಾಜೀನಾಮೆ ಅಂಗೀಕಾರವಾದ ಬಳಿಕ ಜಿಲ್ಲಾಧಿಕಾರಿಗಳು ಚುನಾವಣೆ ನಿಗದಿ ಪಡಿಸಬೇಕಿದೆ.

Sujatha Shivakumar resigns as Chikkamagaluru Municipal Council President

Share

Leave a comment

Leave a Reply

Your email address will not be published. Required fields are marked *

Don't Miss

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು ಗುಂಪುಗಳ ನಡುವಿನ ಗಲಾಟೆಯನ್ನು ತಡೆದ ಗಸ್ತು ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು...

ಬಡ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು.

ಚಿಕ್ಕಮಗಳೂರು:   ಐದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡ ಸಾಗುವಳಿ ದಾರರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿ ವರು ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು...

Related Articles

ಪುಸ್ತಕ ಸಂಸ್ಕೃತಿ-ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ

ಚಿಕ್ಕಮಗಳೂರು: ಪುಸ್ತಕ ಸಂಸ್ಕೃತಿ ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ ಎಂದು ನ್ಯೂಸ್ ಕಿಂಗ್ ಆನ್ಲೈನ್ ಪತ್ರಿಕೆಯ ಸಂಪಾದಕ...

ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ ಕಾರು

ಕಳಸ: ಸೇತುವೆಗೆ ತಡೆಗೋಡೆ ಇಲ್ಲದ ಪರಿಣಾಮ ಪ್ರವಾಸಿಗರ ಕಾರೊಂದು ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ...

ಸ್ವಾತಂತ್ರ್ಯೋತ್ಸವದಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ 

ಚಿಕ್ಕಮಗಳೂರು: ನಗರದ ನೇತಾಜಿ ಸುಭಾಷ್‌ಚಂದ್ರ ಬೋಸ್ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಮುಗಿದ ಬೆನ್ನಲ್ಲೇ ದಲಿತ...

‘ದೇಶ ಮೊದಲು’ ಎಂಬ ಭಾವನೆಯೊಂದಿಗೆ ಕರ್ತವ್ಯ ನಿರ್ವಹಿಸಿ

ಚಿಕ್ಕಮಗಳೂರು:  ಸ್ವಾತಂತ್ರ್ಯದ ೮೦ನೇ ವರ್ಷದ ಸಂಭ್ರಮ ಕೇವಲ ಹಬ್ಬದ ಆಚರಣೆಯಾಗದೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಕೃತಜ್ಞತೆ ಸಲ್ಲಿಸುವ,...