Home namma chikmagalur chikamagalur ಬಿಡದಿ ರೈತರ ಹೋರಾಟ ಬೆಂಬಲಿಸಿ ಆ.25ರಂದು ವಿಧಾನಸೌಧ ಚಲೋ
chikamagalurHomeLatest Newsnamma chikmagalur

ಬಿಡದಿ ರೈತರ ಹೋರಾಟ ಬೆಂಬಲಿಸಿ ಆ.25ರಂದು ವಿಧಾನಸೌಧ ಚಲೋ

Share
oplus_161480704
Share

ಚಿಕ್ಕಮಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಸರ್ಕಾರದ ಕ್ರಮವನ್ನು ವಿರೋಧಿಸಿ ಹಾಗೂ ರೈತರ ಭೂಮಿ ರಕ್ಷಣೆಗೆ ಆಗ್ರಹಿಸಿ ಆ.25ರಂದು ಬೆಂಗಳೂರಿನಲ್ಲಿ ಬೃಹತ್ ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾ ಘಟಕ ತಿಳಿಸಿದೆ.

ರೈತ ಸಂಘ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷ ಡಿ.ಆರ್. ದುಗ್ಗಪ್ಪಗೌಡ ಮಾತನಾಡಿ ಸಂಯುಕ್ತ ಹೋರಾಟ ಕರ್ನಾಟಕ ಹಾಗೂ ಬೈರಮಂಗಲ–ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೂಹಿತರಕ್ಷಣಾ ಸಂಘದ ಜಂಟಿ ಆಶ್ರಯದಲ್ಲಿ ಈ ಹೋರಾಟ ನಡೆಯಲಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ರೈತರು, ಕಾರ್ಮಿಕರು, ಮಹಿಳೆಯರು, ವಿದ್ಯಾರ್ಥಿ–ಯುವಜನರು ಸೇರಿದಂತೆ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘಟನೆ ಮನವಿ ಮಾಡಿದೆ ಎಂದರು.

ಬಿಡದಿ ಭಾಗವು ಸಂಪೂರ್ಣ ನೀರಾವರಿ ಆಶ್ರಿತ ಪ್ರದೇಶವಾಗಿದ್ದು, ಫಲವತ್ತಾದ ಕೃಷಿ ಭೂಮಿಯನ್ನು ಹೊಂದಿದೆ. ಸಣ್ಣ ಮತ್ತು ಅತಿಸಣ್ಣ ರೈತರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಹಲವು ಕುಟುಂಬಗಳು ತಲೆಮಾರುಗಳಿಂದ ಕೃಷಿಯನ್ನೇ ಜೀವನೋಪಾಯವನ್ನಾಗಿ ಮಾಡಿಕೊಂಡಿವೆ. ಇಂತಹ ಭೂಮಿಯನ್ನು ಟೌನ್‌ಶಿಪ್ ಯೋಜನೆಯ ಹೆಸರಿನಲ್ಲಿ ಸ್ವಾಧೀನಪಡಿಸಿಕೊಳ್ಳುವ ಸರ್ಕಾರದ ಕ್ರಮ ಖಂಡನೀಯ ಎಂದು ಆರೋಪಿಸಿದರು.

ಬಿಡದಿ ಟೌನ್‌ಶಿಪ್ ಯೋಜನೆ ಮತ್ತು ಭೂಸ್ವಾಧೀನ ಪ್ರಕ್ರಿಯೆಗೆ ಕಾನೂನು ಆಧಾರವಿಲ್ಲ ಎಂಬುದನ್ನು ಸಾರ್ವಜನಿಕ ವಿಚಾರಣೆಯಲ್ಲಿ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಜಸ್ಟಿಸ್ ವಿ. ಗೋಪಾಲಗೌಡ ನೇತೃತ್ವದ ವಿಚಾರಣಾ ಪ್ರಕ್ರಿಯೆಯಲ್ಲಿ ಸ್ಪಷ್ಟಪಡಿಸಲಾಗಿದೆ ಎಂದು ಸಂಘಟನೆ ಹೇಳಿದೆ. ರೈತರ ಅನುಮತಿ ಹಾಗೂ ಸಮಾಲೋಚನೆ ಇಲ್ಲದೆ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಯತ್ನ ಕಾನೂನುಬಾಹಿರವಾಗಿದೆ ಎಂದು ಆರೋಪಿಸಿದರು.

ರೈತರು ಕಳೆದ 560ಕ್ಕೂ ಹೆಚ್ಚು ದಿನಗಳಿಂದ ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿದ್ದರೂ ರಾಜ್ಯ ಸರ್ಕಾರ ದ್ವಿಮುಖ ಧೋರಣೆ ಅನುಸರಿಸುತ್ತಿದೆ ಎಂದು ಸಂಘಟನೆ ಟೀಕಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜುಲೈ 14ರಂದು ಸಮಿತಿ ರಚಿಸುವುದಾಗಿ ಘೋಷಿಸಿದ್ದರು. ಆಗಸ್ಟ್ 9ರಂದು ನ್ಯಾಯಮೂರ್ತಿ ಗುರುನಾಥನ್ ನರೇಂದರ್ ನೇತೃತ್ವದ ಸಮಿತಿಯ ಸದಸ್ಯರ ಪಟ್ಟಿಯನ್ನು ಪ್ರಕಟಿಸಿ 30 ದಿನಗಳೊಳಗೆ ವರದಿ ಪಡೆಯುವುದಾಗಿ ತಿಳಿಸಲಾಗಿತ್ತು. ಆದರೆ ಇದುವರೆಗೆ ಸಮಿತಿ ರಚನೆಗೆ ಸಂಬಂಧಿಸಿದ ಅಧಿಕೃತ ಆದೇಶ ಹೊರಬಿದ್ದಿಲ್ಲ ಎಂದು ಸಂಘಟನೆ ಅಸಮಾಧಾನ ವ್ಯಕ್ತಪಡಿಸಿದರು.

ಸಮಿತಿ ರಚನೆಯಲ್ಲಿ ಆಗುತ್ತಿರುವ ವಿಳಂಬ ಅನಗತ್ಯ ಹಾಗೂ ದುರುದ್ದೇಶದಿಂದ ಕೂಡಿದೆ ಎಂದು ಆರೋಪಿಸಿರುವ ಸಂಯುಕ್ತ ಹೋರಾಟ ಕರ್ನಾಟಕ, ಫಲವತ್ತಾದ ನೀರಾವರಿ ಕೃಷಿ ಭೂಮಿಯನ್ನು ರಿಯಲ್ ಎಸ್ಟೇಟ್ ಹಾಗೂ ಕಾರ್ಪೊರೇಟ್ ಹಿತಾಸಕ್ತಿಗಳಿಗೆ ಒಪ್ಪಿಸುವ ಪ್ರಯತ್ನವನ್ನು ತಡೆಯಬೇಕು ಎಂದು ಎಂದರು.

“ಅನ್ನ ನೀಡುವ ಭೂಮಿಗೆ ಪರ್ಯಾಯವಿಲ್ಲ. ಅಭಿವೃದ್ಧಿಯ ಹೆಸರಿನಲ್ಲಿ ರೈತರನ್ನು ಭೂಮಿಯಿಂದ ಒಕ್ಕಲೆಬ್ಬಿಸುವ ಕ್ರಮದಿಂದ ಅಂತಿಮವಾಗಿ ನಷ್ಟ ಅನುಭವಿಸುವವರು ರೈತರೇ. ಆದ್ದರಿಂದ ಕೃಷಿ ಭೂಮಿ ರಕ್ಷಣೆಗೆ ಪಕ್ಷಾತೀತ ಜನಚಳವಳಿ ಅಗತ್ಯ. ಆ.25ರಂದು ನಡೆಯುವ ವಿಧಾನಸೌಧ ಚಲೋದಲ್ಲಿ ರಾಜ್ಯದ ರೈತರು, ಕಾರ್ಮಿಕರು, ಮಹಿಳೆಯರು, ವಿದ್ಯಾರ್ಥಿ–ಯುವಜನರು ಹಾಗೂ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು,” ಎಂದು ಹೇಳಿದರು.

ನಿರಂಜನ ಮೂರ್ತಿ, ತುಳಸೇಗೌಡ, ಓಂಕಾರಪ್ಪ, ಎಚ್.ಆರ್. ಬಸವರಾಜಪ್ಪ ಹಾಗೂ ಆರ್.ಆರ್. ಮಂಜೇಗೌಡ ಉಪಸ್ಥಿತರಿದ್ದರು.

Support the struggle of Bidadi farmers at Vidhana Soudha on August 25th

Share

Leave a comment

Leave a Reply

Your email address will not be published. Required fields are marked *

Don't Miss

ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ…?

ಚಿಕ್ಕಮಗಳೂರು: ಮಲ್ಲಸಂದ್ರ ಮತ್ತು ಗುಬ್ಬಿ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ (LC-48) ಬದಲಿಗೆ ಆರ್‌ಸಿಸಿ ಬಾಕ್ಸ್ ಕಾಮಗಾರಿಗೆ ಸಂಬಂಧಿಸಿದಂತೆ ಲೈನ್ ಬ್ಲಾಕ್ ಹಾಗೂ ಪವರ್ ಬ್ಲಾಕ್ ಕೈಗೊಳ್ಳುತ್ತಿರುವುದರಿಂದ ಚಿಕ್ಕಮಗಳೂರು...

ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತರೀಕೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೆನ್ನೆ ಊದಿಕೊಂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳವೊಂದು ಕೊಲೆಯಲ್ಲಿ ಅಂತ್ಯವಾಗಿರುವ ಆಘಾತಕಾರಿ ಘಟನೆ ತರೀಕೆರೆ ತಾಲೂಕಿನ ಲಿಂಗದಹಳ್ಳಿ ಪೊಲೀಸ್ ಠಾಣಾ...

Related Articles

ಆರನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ ಎಐಟಿಯುಸಿ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು:  ಆರನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯ ರು ಮತ್ತು ಸಹಾಯಕಿಯರ ಫೆಡೆರೇಷನ್‌ನ ಜಿಲ್ಲಾ...

ಎನ್.ಐ.ಏ ತನಿಖೆಗೆ ಹಿಂದೂ ಹಿತರಕ್ಷಣಾ ವೇದಿಕೆ ಆಗ್ರಹ

ಚಿಕ್ಕಮಗಳೂರು: ನಗರದ ಟಿಪ್ಪುನಗರದಲ್ಲಿ ಈದ್-ಮಿಲಾದ್ ಹಿನ್ನೆಲೆಯಲ್ಲಿ ಅಳವಡಿಸಲಾಗಿದ್ದ ಟಿಪ್ಪು ಸುಲ್ತಾನ್ ಅವರ ಬೃಹತ್ ಬ್ಯಾನರ್‌ಗೆ ಪಾಕಿಸ್ತಾನಕ್ಕೆ...

ರಾಜ್ಯಾದ್ಯಂತ ಆಗಸ್ಟ್ 26 ರಿಂದ ಸೀರತ್ ಅಭಿಯಾನ

ಚಿಕ್ಕಮಗಳೂರು: ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ವತಿಯಿಂದ ಪ್ರವಾದಿ ಮುಹಮ್ಮದ್(ಸ) ಅವರ ಜನ್ಮದಿನದ ಅಂಗವಾಗಿ ಆಗಸ್ಟ್...

3 ಟನ್ ಕಬ್ಬಿಣದ ಸರಳು ಕಳವು

ಚಿಕ್ಕಮಗಳೂರು: ನಿರ್ಮಾಣ ಹಂತದಲ್ಲಿದ್ದ ಅಂಬೇಡ್ಕರ್ ವಸತಿ ನಿಲಯ ಕಟ್ಟಡ ಕಾಮಗಾರಿಗೆ ಸಂಗ್ರಹಿಸಿಟ್ಟಿದ್ದ ಸುಮಾರು 3 ಟನ್...