Home Latest News ಸಮೀಕ್ಷೆ: ಜಾತಿ ಕಾಲಂನಲ್ಲಿ ಹಳ್ಳಿಕಾರ ಎಂದು ಬರೆಸಲು ಸಲಹೆ
Latest NewschikamagalurHomenamma chikmagalur

ಸಮೀಕ್ಷೆ: ಜಾತಿ ಕಾಲಂನಲ್ಲಿ ಹಳ್ಳಿಕಾರ ಎಂದು ಬರೆಸಲು ಸಲಹೆ

Share
Share

ಚಿಕ್ಕಮಗಳೂರು: ರಾಜ್ಯ ಸರ್ಕಾರದಿಂದ ಸೆಪ್ಟೆಂಬರ್ ೨೨ ರಿಂದ ಅಕ್ಟೋಬರ್ ೭ ರವರೆಗೆ ನಡೆಯಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಗಣತಿದಾರರಿಗೆ ನಮ್ಮ ಹಳ್ಳಿಕಾರ ಸಮುದಾಯದವರು ಜಾತಿ ಕಾಲಂನಲ್ಲಿ `ಹಳ್ಳಿಕಾರ’ ಎಂದು ಬರೆಸುವಂತೆ ಕರ್ನಾಟಕ ರಾಜ್ಯ ಹಳ್ಳಿಕಾರರ ಸಂಘದ ರಾಜ್ಯ ನಿರ್ದೇಶಕ ಸಿ.ಹೆಚ್.ಶ್ರೀನಿವಾಸ್ ಸಮುದಾಯ ಬಾಂಧವರಲ್ಲಿ ಮನವಿ ಮಾಡಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಅವರು, ನಾವೆಲ್ಲರೂ ಇದೀಗ ನಡೆಯುವ ಜಾತಿ ಸಮೀಕ್ಷೆಯಲ್ಲಿ ತಪ್ಪದೇ ಭಾಗವಹಿಸಬೇಕು. ಇದರಿಂದ ರಾಜ್ಯದಲ್ಲಿ ಹಳ್ಳಿಕಾರ ಸಮಾಜದ ಜನಸಂಖ್ಯೆ ನಿಖರವಾಗಿ ಗೊತ್ತಾಗಲಿದ್ದು, ಸರ್ಕಾರದಿಂದ ಪಡೆಯುವ ಸೌಲಭ್ಯಗಳ ವಿಚಾರದಲ್ಲಿ ನಮ್ಮ ಹಕ್ಕನ್ನು ಪಡೆಯಲು ಅನುಕೂಲವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಪಶುಸಂಗೋಪನೆ ನಮ್ಮ ಕುಲಕಸುಬಾಗಿದ್ದು, ಯದುವಂಶದವರಾಗಿರುವ ನಾವು ಶ್ರೀಕೃಷ್ಣನ ಆರಾಧಕರಾಗಿದ್ದೇವೆ ಎಂಬುದು ಸ್ಪಷ್ಟ. ನಮಗೆ ಸರ್ಕಾರದಿಂದ ನಮ್ಮ ಹಕ್ಕಿಗೆ ಅನುಗುಣವಾಗಿ ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಾಗೂ ರಾಜಕೀಯವಾಗಿ ದೊರೆಯಬೇಕಾದ ನ್ಯಾಯಯುತ ಸೌಲಭ್ಯಗಳಿಗೆ ನಾವು ನಮ್ಮ ಸಂಖ್ಯೆಯನ್ನು ಆಧರಿಸಿ ಹೋರಾಟ ನಡೆಸಬೇಕಾಗುತ್ತದೆ. ಸರ್ಕಾರದ ಮುಂದೆ ನಮ್ಮ ಬೇಡಿಕೆಯನ್ನು ಮಂಡಿಸಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.

ಈ ಸಮೀಕ್ಷೆಯಲ್ಲಿ ನಮ್ಮ ಜನಸಂಖ್ಯೆ ಸರ್ಕಾರದ ದಾಖಲೆಗಳಲ್ಲಿ ಅಧಿಕೃತವಾಗಿ ನಮೂದಾಗುತ್ತದೆ. ಹೀಗಾಗಿ ಗಣತಿದಾರರು ಮನೆಗೆ ಬಂದಾಗ ನಮ್ಮ ಜಾತಿಯನ್ನು ಹಳ್ಳಿಕಾರ ಎಂದು ಸ್ಪಷ್ಟವಾಗಿ ಉಲ್ಲೇಖಿಸಲು ಗಣತಿದಾರರಿಗೆ ಮನವಿ ಮಾಡುವುದಲ್ಲದೆ, ಅವರು ಕೇಳುವ ಯಾವುದೇ ಪ್ರಶ್ನೆಗಳಿಗೆ ನೀಡುವ ಉತ್ತರಗಳು ನಾವು ಹಳ್ಳಿಕಾರ ಸಮುದಾಯಕ್ಕೆ ಸೇರಿದವರು ಎನ್ನುವುದಕ್ಕೆ ಪೂರಕವಾಗಿರಬೇಕು. ನಾವು ನೀಡಿದ ಮಾಹಿತಿ ಆಧಾರದ ಮೇಲೆ ಅವರು ದಾಖಲಿಸಿಕೊಂಡಿರುವುದನ್ನು ಖಚಿತಪಡಿಸಿಕೊಳ್ಳಬೇಕು. ನಮ್ಮ ಹಕ್ಕು, ಮೀಸಲಾತಿ ಈ ಜನಗಣತಿಯಲ್ಲಿ ತೀರ್ಮಾನವಾಗಲಿದ್ದು, ನಮ್ಮ ಸಮುದಾಯದವರು ಈ ಸಂದರ್ಭದಲ್ಲಿ ಎಚ್ಚೆತ್ತುಕೊಳ್ಳುವುದು ಅನಿವಾರ್ಯ ಎಂದು ಅವರು ತಿಳಿಸಿದ್ದಾರೆ.

ಜಾತಿ ಗಣತಿಯ ಬಗ್ಗೆ ಅಕ್ಕಪಕ್ಕದ ನಮ್ಮ ಸಮುದಾಯದ ಬಂಧುಗಳಲ್ಲಿ ಹಾಗೂ ಸಂಬಂಧಿಕರಲ್ಲಿ ಸ್ಪಷ್ಟವಾಗಿ ಅರಿವು ಮೂಡಿಸಬೇಕಲ್ಲದೆ, ಪ್ರತಿಯೊಬ್ಬರೂ ಕಡ್ಡಾಯವಾಗಿ ಈ ಜಾತಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವಂತೆ ಅವರ ಮನವೊಲಿಸಬೇಕು. ಸಮೀಕ್ಷೆಯ ಸಂದರ್ಭದಲ್ಲಿ ಮಕ್ಕಳಿಗೆ ರಜೆ ಇರುವುದರಿಂದ ಸಮೀಕ್ಷೆಗೆ ಗಣತಿದಾರರು ಬಂದು ಹೋಗುವ ತನಕ ಊರು ಬಿಟ್ಟು ಹೋಗಬಾರದು ಎಂದು ಅವರು ಸಲಹೆ ನೀಡಿದ್ದಾರೆ.

Survey: Suggestion to write “villager” in the caste column

 

Share

Leave a comment

Leave a Reply

Your email address will not be published. Required fields are marked *

Don't Miss

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 67 ಸಾವಿರ ಫಲಾನುಭವಿಗಳ ಪಿಂಚಣಿ ಸ್ಥಗಿತಗೊಳಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ...

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಜಿಪಂ–ತಾಪಂ ಸದಸ್ಯ...

Related Articles

ಮಳೆಗಾಲದಲ್ಲಿ ಟಿಂಬರ್ ಸಾಗಣೆರಸ್ತೆಯಿಂದ ರಸ್ತೆ ಹಾಳು

ಕೊಪ್ಪ: ತಾಲೂಕಿನ ಅಸಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಮಳೆಗಾಲದಲ್ಲಿಯೇ ಟಿಂಬರ್‌ಗಳನ್ನು ಕಡಿದು ಸಾಗಿಸುತ್ತಿರುವುದರಿಂದ...

ನಗರಕ್ಕೆ ಎರಡು ದಿನಗಳ ಕಾಲ ಕುಡಿಯುವ ನೀರಿನ ಸರಬರಾಜು ಸ್ಥಗಿತ

ಚಿಕ್ಕಮಗಳೂರು: ನಗರದ ದಂಟರಮಕ್ಕಿ ವ್ಯಾಪ್ತಿಯಲ್ಲಿ 600 ಎಂಎಂ ಸಾಮರ್ಥ್ಯದ ಪ್ರಮುಖ ಕುಡಿಯುವ ನೀರಿನ ಕೊಳವೆ ಮಾರ್ಗ...

ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ…?

ಚಿಕ್ಕಮಗಳೂರು: ಮಲ್ಲಸಂದ್ರ ಮತ್ತು ಗುಬ್ಬಿ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ (LC-48) ಬದಲಿಗೆ...

ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತರೀಕೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೆನ್ನೆ ಊದಿಕೊಂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ...